ಆ.23ರಿಂದ ಮದ್ರಸ ಆನ್‌ಲೈನ್ ಪರೀಕ್ಷೆ
ಮಂಗಳೂರು, ಅ.22: ಸಮಸ್ತ ಕೇರಳ ಇಸ್ಲಾಂ ಮತ ವಿದ್ಯಾಭ್ಯಾಸ ಬೋರ್ಡ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಮದ್ರಸಗಳಲ್ಲಿ ಆ.23ರಿಂದ 26 ರವರೆಗೆ ಆನ್‌ಲೈನ್ ಪರೀಕ್ಷೆ ನಡೆಯಲಿದೆ.
ಕೇಂದ್ರ ಸಮಿತಿಯ ನಿರ್ದೇಶನದಂತೆ ಜಿಲ್ಲೆಯ 500ಕ್ಕೂ ಅಧಿಕ ಮದ್ರಸಗಳ ಸುಮಾರು 40,000 ವಿದ್ಯಾರ್ಥಿಗಳು ಏಕಕಾಲದಲ್ಲಿ ಪರೀಕ್ಷೆ ಬರೆಯಲಿದ್ದಾರೆ. ಪರೀಕ್ಷೆಯ ಲಿಂಕ್ ಕೇಂದ್ರ ಸಮಿತಿಯಿಂದ ಜಿಲ್ಲಾ ಸಮಿತಿ ಮುಖಾಂತರ ರೇಂಜ್ ಸಮಿತಿಗಳಿಗೆ ತಲುಪುತ್ತದೆ. ನಂತರ ಮದ್ರಸ ಅಧ್ಯಾಪಕರ ಮೂಲಕ ನಿಗದಿತ ಸಮಯಕ್ಕೆ ವಿದ್ಯಾರ್ಥಿಗಳಿಗೆ ತಲುಪಲಿದೆ. ರಕ್ಷಕರ ಮೇಲ್ವಿಚಾರಣೆಯಲ್ಲಿ ಪರೀಕ್ಷೆ ನಡೆಯಲಿದ್ದು ವಿದ್ಯಾರ್ಥಿಗಳು ಸುರಕ್ಷಿತವಾಗಿ ಪರೀಕ್ಷೆ ಬರೆಯಲು ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಜಂಇಯ್ಯತುಲ್ ಮುಅಲ್ಲಿಮೀನ್ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಮುಸ್ಲಿಯಾರ್ ಮುಂಡೋಳೆ ಹಾಗೂ ಮದ್ರಸ ಮ್ಯಾನೇಜ್ ಮೆಂಟ್ ಅಸೋಸಿಯೇಶನ್ ಪ್ರಧಾನ ಕಾರ್ಯದರ್ಶಿ ರಫೀಕ್ ಹಾಜಿ ಕೊಡಾಜೆ ಜಂಟಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Next Story





