ನಾಳೆಯಿಂದ 9, 10ನೆ ತರಗತಿ, ಪ್ರಥಮ, ದ್ವಿತೀಯ ಪಿಯು ಭೌತಿಕ ತರಗತಿ ಪುನರಾರಂಭ

ಬೆಂಗಳೂರು, ಆ.22: ಕೋವಿಡ್ ಮಾರ್ಗಸೂಚಿ ಅನ್ವಯ 2021- 22ನೆ ಶೈಕ್ಷಣಿಕ ಸಾಲಿನ 9, 10ನೆ ತರಗತಿ ಹಾಗೂ ಪದವಿ ಪೂರ್ವ ಕಾಲೇಜುಗಳ ಭೌತಿಕ ತರಗತಿಗಳನ್ನು ನಾಳೆ(ಆ.23)ಯಿಂದ ಪುನರಾರಂಭಿಸಲಾಗುತ್ತಿದೆ.
ಎಲ್ಲ ಸರಕಾರಿ ಪ್ರೌಢಶಾಲೆ, ಪಿಯು ಕಾಲೇಜುಗಳಲ್ಲಿ ಸರಕಾರದ ಕೋವಿಡ್ ನಿಯಂತ್ರಣ ಮಾರ್ಗಸೂಚಿ (ಎಸ್‍ಒಪಿ) ಅನುಸಾರ ಕೊಠಡಿ, ಆವರಣ, ಶೌಚಾಲಯಗಳನ್ನು ಸ್ವಚ್ಚಗೊಳಿಸಿ ಸ್ಯಾನಿಟೈಸ್ ಮಾಡಲಾಗಿದೆ. ಬಹುತೇಕ ಶಿಕ್ಷಕರು ಹಾಗೂ ಇತರೆ ಸಿಬ್ಬಂದಿಗೆ ಕೋವಿಡ್ ಲಸಿಕೆ ನೀಡಲಾಗಿದೆ. ಖಾಸಗಿ ಹಾಗೂ ಅನುದಾನಿತ ಶಾಲೆಗಳಲ್ಲೂ ಎಸ್‍ಒಪಿ ಕಟ್ಟುನಿಟ್ಟಾಗಿ ಪಾಲಿಸುವ ಮೂಲಕ ಭೌತಿಕ ತರಗತಿ ಆರಂಭಿಸಲು ಸೂಚಿಸಲಾಗಿದೆ ಎಂದು ಶಿಕ್ಷಣ ಇಲಾಖೆ ತಿಳಿಸಿದೆ.
ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆಯಡಿ ಬರುವ 6,300ಕ್ಕೂ ಹೆಚ್ಚು ಸರಕಾರಿ, 4,100ಕ್ಕೂ ಹೆಚ್ಚು ಅನುದಾನಿತ, 7,900ಕ್ಕೂ ಹೆಚ್ಚು ಅನುದಾನರಹಿತ ಖಾಸಗಿ ಪ್ರೌಢ ಶಾಲೆಗಳಲ್ಲಿ ಮೊದಲ ಹಂತದಲ್ಲಿ 9 ಮತ್ತು 10ನೇ ತರಗತಿ ಮಕ್ಕಳಿಗೆ ಭೌತಿಕ ತರಗತಿ ಪುನಾರಂಭಿಸಲು ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗಿದೆ.
1,229 ಸರಕಾರಿ, 797 ಅನುದಾನಿತ, 3,147 ಅನುದಾನರಹಿತ ಖಾಸಗಿ ಪದವಿ ಪೂರ್ವ ಕಾಲೇಜುಗಳು ಸೇರಿದಂತೆ ಒಟ್ಟು 5,400ಕ್ಕೂ ಹೆಚ್ಚು ಪಿಯು ಕಾಲೇಜುಗಳಲ್ಲಿ ಪ್ರಥಮ ಹಾಗೂ ದ್ವಿತೀಯ ಪಿಯುಸಿಯ ಎಲ್ಲಾ ವಿದ್ಯಾರ್ಥಿಗಳಿಗೂ ಭೌತಿಕ ತರಗತಿ ಶುರು ಮಾಡಲು ಕ್ರಮ ವಹಿಸಲಾಗಿದೆ ಎಂದು ಶಿಕ್ಷಣ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ವಸತಿ ಶಾಲೆಗಳು ಆರಂಭ: ಶಿಕ್ಷಣ ಇಲಾಖೆ ಮಾತ್ರವಲ್ಲದೆ ಸಮಾಜ ಕಲ್ಯಾಣ ಇಲಾಖೆಯಡಿ ಬರುವ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಡಿ 385 ಮೊರಾರ್ಜಿ ದೇಸಾಯಿ ವಸತಿ ಶಾಲೆ, 157 ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆ, 126 ಡಾ.ಬಿ.ಆರ್.ಅಂಬೇಡ್ಕರ್ ವಸತಿ ಶಾಲೆ ಸೇರಿದಂತೆ ಬೇರೆ ಬೇರೆ ಮಾದರಿಯ ಎಲ್ಲಾ 826 ವಸತಿ ಶಾಲೆಗಳೂ ಸೋಮವಾರದಿಂದ ಆರಂಭಗೊಳ್ಳಲಿವೆ.
ಸರಕಾರ ಸೂಚಿಸಿರುವ ಕೋವಿಡ್ ನಿಯಂತ್ರಣ ಮಾರ್ಗಸೂಚಿಗಳನ್ನು ಅನುಸರಿಸಿ ಹಾಸ್ಟೆಲ್ ಮತ್ತು ಶಾಲೆಗಳಲ್ಲಿ ಮಕ್ಕಳ ಸುರಕ್ಷತೆಗೆ ಎಲ್ಲ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ವಸತಿ ಶಾಲೆಗೆ ಬರುವ ಮಕ್ಕಳಿಗೂ ಪೋಕರಿಂದ ಒಪ್ಪಿಗೆ ಪತ್ರ ಕಡ್ಡಾಯ. ಗಡಿ ಭಾಗಗಳಿಂದ ಬರುವ ಮಕ್ಕಳು ನೆಗೆಟಿವ್ ವರದಿ ತರಬೇಕು ಎಂಬ ಷರತ್ತುಗಳನ್ನು ವಿಧಿಸಲಾಗಿದೆ. ಕೋವಿಡ್ ಮಾರ್ಗಸೂಚಿ ಪಾಲಿಸಿ ಖಾಸಗಿ ವಸತಿ ಶಾಲೆಗಳ ಆರಂಭಕ್ಕೂ ಅನುಮತಿ ನೀಡಲಾಗಿದೆ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ಮಾರ್ಗಸೂಚಿ:
► ಹಾಜರಾಗುವ ವಿದ್ಯಾರ್ಥಿಗಳು ಕಡ್ಢಾಯವಾಗಿ ಪೋಕರಿಂದ ಅನುಮತಿ ಪತ್ರದ ಜೊತೆಗೆ ಆರೋಗ್ಯ ಪ್ರಮಾಣ ಪತ್ರವನ್ನು ತರಬೇಕು.
► ಶಾಲೆಗೆ ಹಾಜರಾಗುವ ಶಿಕ್ಷಕರು ಕೋವಿಡ್? ನೆಗೆಟಿವ್? ವರದಿ ಕಡ್ಡಾಯ. ಜೊತೆಗೆ ಕರ್ತವ್ಯಕ್ಕೆ ಹಾಜರಾಗುವ ಮೂರು ದಿನ ಮುಂಚಿತ ಆರ್?ಟಿಪಿಸಿಆರ್? ನೆಗೆಟಿವ್ ವರದಿಯನ್ನು ಸಲ್ಲಿಸಬೇಕು.
► ಮುಖ್ಯ ಶಿಕ್ಷಕರು ಸೇರಿದಂತೆ ಶಾಲೆಯ ಶಿಕ್ಷಕರು, ಸಿಬ್ಬಂದಿಗಳು ಒಂದು ಡೋಸ್? ಲಸಿಕೆ ಪಡೆದಿದ್ದಾರೆ ಎಂಬುದನ್ನು ಖಾತ್ರಿ ಪಡಿಸಿಕೊಳ್ಳಬೇಕು. ಜೊತೆಗೆ ಎರಡನೇ ಡೋಸ್ ಲಸಿಕೆ ಶೀಘ್ರವಾಗಿ ಪಡೆಯಲು ಪ್ರಯತ್ನಿಸಬೇಕು.
► ಒಂದು ಕೊಠಡಿಗೆ ಕೇವಲ 20 ಮಕ್ಕಳಿಗೆ ಮಾತ್ರ ಕೂರಲು ಅವಕಾಶ. ಜೊತೆಗೆ ಒಂದು ಬೆಂಚ್?ನಲ್ಲಿ ಒಂದೇ ಮಗುವಿಗೆ ಕೂರಲು ಅವಕಾಶ ನೀಡಬೇಕು.
► 9 ಮತ್ತು 10ನೇ ತರಗತಿಯ ಭೌತಿಕ ತರಗತಿಗಳನ್ನು ಬೆಳಗಿನ ಅವಧಿ ಮಾತ್ರ ನಡೆಸಬೇಕು
►ಮಕ್ಕಳು ಶಾಲೆಯಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು. ಅವರು ಶಾಲೆ ಆವರಣ ಪ್ರವೇಶಿಸುತ್ತಿದ್ದಂತೆ ಹ್ಯಾಂಡ್ ಸ್ಯಾನಿಟೈಸರ್ ಅಥವಾ ಸಾಬೂನಿನಿಂದ ಕೈ ಸ್ವಚ್ಛಕ್ಕೆ ಅವಕಾಶ ನೀಡಬೇಕು.
►ಥರ್ಮಲ್ ಸ್ಕ್ಯಾನರ್‍ನಿಂದ ವಿದ್ಯಾರ್ಥಿಗಳ ದೇಹದ ಉಷ್ಣತೆ ಪರೀಕ್ಷಿಸಬೇಕು.
►ಶಾಲೆಗೆ ಆಗಮಿಸುವ ಮತ್ತು ನಿರ್ಗಮಿಸುವ ವೇಳೆ ದಟ್ಟಣೆ ಆಗದಂತೆ ನೋಡಿಕೊಳ್ಳಬೇಕು.
►ವಿದ್ಯಾರ್ಥಿಗಳ ದಿನನಿತಯದ ಆರೋಗ್ಯದ ಸ್ಥಿತಿ ವಿವರ ಪಡೆಯಬೇಕು. ಯಾವುದೇ ವಿದ್ಯಾರ್ಥಿಗೆ ಕೆಮ್ಮು, ಜ್ವರ, ನೆಗಡಿ, ಮೂಗು ಸೋರಿಕೆ ಕಂಡು ಬಂದರೆ, ಐಸೋಲೇನ್?ನಲ್ಲಿ ತಾತ್ಕಾಲಿಕವಿರಿಸಿ, ಬಳಿಕ ಪೋಷಕರು ಸಂಪರ್ಕಿಸಿ ಮನೆಗೆ ಕಳುಹಿಸಬೇಕು.
►ವಿದ್ಯಾರ್ಥಿಗಳು ಮನೆಯಿಂದಲೇ ನೀರು ಮತ್ತು ಆಹಾರ ತರುವಂತೆ ಸೀಚಿಸಬೇಕು. ಜೊತೆಗೆ ಅವಶ್ಯಕತೆ ಇದ್ದಲ್ಲಿ ಮಕ್ಕಳಿಗೆ ಶಾಲೆಯಲ್ಲಿ ಶುದ್ಧ ಬಿಸಿ ನೀರಿನ ವ್ಯವಸ್ಥೆ ಮಾಡಬೇಕು
►ಗ್ರಂಥಾಲಯ, ಪ್ರಯೋಗಾಲಯ, ಕಂಪ್ಯೂಟರ್ ಲ್ಯಾಬ್, ಒಳಾಂಗಡ ಕ್ರೀಡಾಗಂಣದಲ್ಲಿ ಶುಚಿತ್ವದ ಜೊತೆ ಸುರಕ್ಷಿತ ಅಂತರ ಕಾಪಾಡಿಕೊಳ್ಳಬೇಕು.
►ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಮುಖ್ಯ ಶಿಕ್ಷಕರು ಮಾಸ್ಕ್ ಧರಿಸುವುದು ಕಡ್ಡಾಯ
►50ವರ್ಷ ಮೀರಿದ ಶಿಕ್ಷಕರು ಮಾಸ್ಕ್? ಜೊತೆಗೆ ಫೇಸ್ ಶೀಲ್ಡ್ ಧರಿಸುವುದು ಉತ್ತಮ.
►ವಿದ್ಯಾರ್ಥಿಗಳನ್ನು ಗುಂಪುಗೂಡಿಸುವಂತಹ ಸಭೆ, ಸಮಾರಂಭ, ಹಬ್ಬ ಮತ್ತು ಇತರೆ ಚಟುವಟಿಕೆಗಳನ್ನು ಹಮ್ಮಿಕೊಳ್ಳಬಾರದು.







