Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪರ್ಪಲೆಗಿರಿ ರಸ್ತೆ ಅಭಿವೃದ್ಧಿಗೆ 1 ಕೋಟಿ...

ಪರ್ಪಲೆಗಿರಿ ರಸ್ತೆ ಅಭಿವೃದ್ಧಿಗೆ 1 ಕೋಟಿ ರೂ. ಘೋಷಿಸಿದ ಸಚಿವ ಸುನೀಲ್‌ ಕುಮಾರ್‌

ವಾರ್ತಾಭಾರತಿವಾರ್ತಾಭಾರತಿ22 Aug 2021 10:43 PM IST
share
ಪರ್ಪಲೆಗಿರಿ ರಸ್ತೆ ಅಭಿವೃದ್ಧಿಗೆ 1 ಕೋಟಿ ರೂ. ಘೋಷಿಸಿದ ಸಚಿವ  ಸುನೀಲ್‌ ಕುಮಾರ್‌

ಕಾರ್ಕಳ : ಶ್ರೀ ಕ್ಷೇತ್ರ ಅತ್ತೂರು ಪರ್ಪಲೆಗಿರಿ  ಕಲ್ಕುಡ-ಕಲ್ಲುರ್ಟಿ-ತೂಕತ್ತೆರಿ ಸನ್ನಿಧಾನದಲ್ಲಿ ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ. ಸುನಿಲ್‌ ಕುಮಾರ್‌ ಅಭಿನಂದನಾ ಕಾರ್ಯಕ್ರಮ ಶನಿವಾರ ನಡೆಯಿತು.

ಅಭಿನಂದನೆ ಸ್ವೀಕರಿಸಿ ಮಾತನಾಡಿದ ಸಚಿವ ಸುನಿಲ್‌ ಕುಮಾರ್‌, ಪರ್ಪಲೆಗಿರಿ ಧಾರ್ಮಿಕ ಕೇಂದ್ರವಾಗಿ ವಿವಿಧೆಡೆಯ ಜನರನ್ನು ಆಕರ್ಷಿಸುತ್ತಿದೆ. ಅನ್ಯಕೋಮಿನ ಜನರ ಕಾರಣದಿಂದ ಈ ಭೂಮಿ ಅತಿಕ್ರಮಣಕ್ಕೆ ಒಳಗಾಗುತ್ತಿದೆ ಎಂಬ ಸುದ್ದಿಗಳು ಕೇಳುತ್ತಿತ್ತು. ಈ ಸಂದರ್ಭ ದಲ್ಲಿ ಹಿಂದೂ ಜಾಗರಣ ವೇದಿಕೆ ಮತ್ತು ಹಿಂದುತ್ವ ಸಂಘಟನೆಗಳು ಒಟ್ಟಾಗಿ ಸಂಘಟಿತರಾಗಿ ಹೋರಾಟ ಮಾಡಿದ ಫಲವಾಗಿ ಧಾರ್ಮಿಕ ಕೇಂದ್ರವಾಗಿ ಅಭಿವೃದ್ಧಿಯಾಗುತ್ತಿದೆ ಎಂದರು.

ಭಗವಾಧ್ವಜ ಹಿಡಿದು ವಿಧಾನ ಸೌಧ ಹೋದಂತಹ ನನಗೆ ಅನಂತರದ ದಿನಗಳಲ್ಲಿ ಬೇರೆ ಬೇರೆ ರೀತಿಯ ಜವಾಬ್ದಾರಿ ದೊರೆತಿದೆ. ಜವಾಬ್ದಾರಿ ಬಂದಿದೆ ಎನ್ನುವ ಕಾರಣಕ್ಕೆ ಭಗವಾಧ್ವಜ ಯಾವತ್ತೂ ಕೈಬಿಟ್ಟಿಲ್ಲ. ಮುಂದೆ ಕೈಬಿಡುವ ಪ್ರಶ್ನೆಯೂ ಇಲ್ಲ ಎಂದು ಸುನೀಲ್‌ ಕುಮಾರ್‌ ಹೇಳಿದರು.

ಪರ್ಪಲೆಗಿರಿಯಲ್ಲಿ ಭವ್ಯ ದೇಗುಲ ನಿರ್ಮಾಣವಾಗುವ ನಿಟ್ಟಿನಲ್ಲಿ ನನಗೆ ಮನವಿ ನೀಡಲಾಗಿದೆ. ದೇಗುಲ ನಿರ್ಮಾಣ ನನ್ನ ಜವಾಬ್ದಾರಿ. ಪರ್ಪಲೆಗಿರಿ ಸಂಪರ್ಕಿಸುವ ರಸ್ತೆ ಅಭಿವೃದ್ಧಿಗೆ 1 ಕೋಟಿ ರೂ. ಅನುದಾನ ಮಂಜೂರು ಮಾಡಲಾಗುವುದು ಎಂದು ಘೋಷಣೆ ಮಾಡಿದರು.

ಹಿರಿಯ ಬಿಜೆಪಿ ಮುಖಂಡ ಬೋಳ ಪ್ರಭಾಕರ್‌ ಕಾಮತ್‌ ಮಾತನಾಡಿ, ಸಚಿವ ಸುನೀಲ್‌ ಕುಮಾರ್‌ ತನ್ನ ಖಾತೆಯನ್ನು ಸಮರ್ಥವಾಗಿ ನಿರ್ವಹಿಸಲಿದ್ದಾರೆ. ಹಿರಿಯರ ಪ್ರಯತ್ನದ ಫಲವಾಗಿ ಪಕ್ಷವಿಂದು ಸದೃಢವಾಗಿ ಬೆಳೆದಿದೆ ಎಂದ ಅವರು ಕಾರ್ಕಳದಲ್ಲಿ ಪಕ್ಷ ನಡೆದು ಬಂದ ಹಾದಿಯನ್ನು ಮೆಲುಕು ಹಾಕಿದರು.

'ಸುನಿಲ್‌ ಕುಮಾರ್‌ ಮುಖ್ಯಮಂತ್ರಿಯಾಗಲಿ'

ಸಚಿವ ಸುನಿಲ್‌ ಕುಮಾರ್‌ ಮುಂದಿನ ದಿನಗಳಲ್ಲಿ ರಾಜ್ಯದ ಮುಖ್ಯಮಂತ್ರಿಯಾಗಬೇಕು. ಈ ನಿಟ್ಟಿನಲ್ಲಿ ಕಾರ್ಕಳದ ಜನತೆ ಅವರನ್ನು ಸದಾ ಕಾಲ ಬೆಂಬಲಿಸುತ್ತಿರಬೇಕು. ಪಕ್ಷದ ಆಂತರಿಕ ಭಿನ್ನಾಭಿಪ್ರಾಯವಿದ್ದಲ್ಲಿ ರೂಂ ಬಾಗಿಲು ಹಾಕಿ ಮಾತನಾಡಿ ಸರಿಪಡಿಸಿಕೊಳ್ಳೋಣ. ನಮ್ಮ ಹುಡುಗ ಸುನಿಲ್‌ ಕುಮಾರ್‌ ವಿರುದ್ಧ ಬಹಿರಂಗವಾಗಿ ಮಾತನಾಡುವುದು ಯಾರಿಗೂ ಶೋಭೆಯಲ್ಲ ಎಂದು ಎಂ.ಕೆ. ವಿಜಯ ಕುಮಾರ್‌ ಅಭಿಪ್ರಾಯಪಟ್ಟರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಮಹೇಶ್‌ ಶೆಟ್ಟಿ ಕುಡುಪುಲಾಜೆ, ಹಿಂದುತ್ವ ಪರವಾಗಿ ಧೈರ್ಯವಾಗಿ ಮಾತನಾಡುವ ಸುನಿಲ್‌ ಕುಮಾರ್‌ ನಮ್ಮ ನೆಚ್ಚಿನ ನಾಯಕ. ನಿರಂತರವಾಗಿ ಕಾರ್ಕಳದ ಅಭಿವೃದ್ಧಿ ಬಗೆಗೆ ಯೋಚನೆ ಮಾಡುವ ಸುನಿಲರಿಗೆ ಬೆಂಬಲವಾಗಿ ನಿಲ್ಲುವುದು ಅತಿ ಅಗತ್ಯವೆಂದರು. ಎಂ.ಕೆ. ವಿಜಯ ಕುಮಾರ್‌, ರವೀಂದ್ರ ಶೆಟ್ಟಿ ಬಜಗೋಳಿ ಮಾತನಾಡಿದರು.

ವೇದಿಕೆಯಲ್ಲಿ ಬಾಲಕೃಷ್ಣ ಹೆಗ್ಡೆ, ಮನ್ಮಥ ಶೆಟ್ಟಿ, ವಿಠಲ್‌ ಶೆಟ್ಟಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X