ರೈತರಿಗೆ ಪ್ರತಿಭಟನೆ ನಡೆಸುವ ಹಕ್ಕಿದೆ: ಸುಪ್ರೀಂ ಕೋರ್ಟ್

ಹೊಸದಿಲ್ಲಿ, ಅ. 23: ಪ್ರತಿಭಟನೆ ನಡೆಸುವ ಹಕ್ಕು ರೈತರಿಗೆ ಇದೆ. ಆದರೆ, ಪ್ರತಿಭಟನೆ ವಾಹನ ಹಾಗೂ ಸಾರ್ವಜನಿಕರ ಸಂಚಾರಕ್ಕೆ ಅಡ್ಡಿ ಉಂಟು ಮಾಡಬಾರದು ಎಂದು ಸುಪ್ರೀಂ ಕೋರ್ಟ್ ಸೋಮವಾರ ಹೇಳಿದೆ. ಮೂರು ಕೃಷಿ ಕಾಯ್ದೆಗಳ ಕುರಿತು ರೈತರು ಹಾಗೂ ಸರಕಾರದ ನಡುವಿನ ಬಿಕ್ಕಟ್ಟನ್ನು ಅಂತ್ಯಗೊಳಿಸುವ ಪರಿಹಾರ ಕೇಂದ್ರ ಸರಕಾರದಲ್ಲಿ ಇದೆ ಎಂದು ನ್ಯಾಯಮೂರ್ತಿ ಎಸ್.ಕೆ. ಕೌಲ್ ನೇತೃತ್ವದ ಪೀಠ ಹೇಳಿದೆ.
ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತರು ಹೊಸದಿಲ್ಲಿಯ ಹೊರವಲಯದಲ್ಲಿ ಕಳೆದ ಒಂದು ವರ್ಷಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ತಳಮಟ್ಟದ ಪರಿಸ್ಥಿತಿಯ ಪರಿಶೀಲನೆ ನಡೆಸುವಂತೆ ನ್ಯಾಯಾಲಯ ಕೇಂದ್ರ ಸರಕಾರ, ಹರ್ಯಾಣ ಹಾಗೂ ಉತ್ತರಪ್ರದೇಶ ಸರಕಾರಕ್ಕೆ ಸೂಚಿಸಿತು.
Next Story





