Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮೌಲ್ಯವರ್ಧನೆಗೆ ಡಿಜಿಟಲ್ ತಂತ್ರಜ್ಞಾನದ...

ಮೌಲ್ಯವರ್ಧನೆಗೆ ಡಿಜಿಟಲ್ ತಂತ್ರಜ್ಞಾನದ ಬಳಕೆಗೆ ಸಚಿವ ಅಶ್ವತ್ಥ ನಾರಾಯಣ ಸಲಹೆ

ವಾರ್ತಾಭಾರತಿವಾರ್ತಾಭಾರತಿ24 Aug 2021 6:42 PM IST
share
ಮೌಲ್ಯವರ್ಧನೆಗೆ ಡಿಜಿಟಲ್ ತಂತ್ರಜ್ಞಾನದ ಬಳಕೆಗೆ ಸಚಿವ ಅಶ್ವತ್ಥ ನಾರಾಯಣ ಸಲಹೆ

ಕಲಬುರ್ಗಿ, ಆ.24: ಈಗ ಕೃಷಿಯಲ್ಲೂ ಡಿಜಿಟಲ್ ತಂತ್ರಜ್ಞಾನದ ಅಳವಡಿಕೆಯಾಗಿದೆ. ಹೀಗಾಗಿ ಉದ್ಯಮಶೀಲರು ಈ ಡಿಜಿಟಲ್ ತಾಂತ್ರಿಕತೆ ಬಳಸಿಕೊಂಡು ಕೃಷಿ ಪದ್ಧತಿಯಲ್ಲಿ ಸುಧಾರಣೆ ಉಂಟುಮಾಡುವ ಜೊತೆಗೆ ಕೃಷಿ ಉತ್ಪನ್ನಗಳ ಮೌಲ್ಯವರ್ದನೆ ಮಾಡುವ ಬಗ್ಗೆ ಆಲೋಚಿಸಬೇಕು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥ ನಾರಾಯಣ ಹೇಳಿದರು.

ಮಂಗಳವಾರ ನಗರದಲ್ಲಿ ಉದ್ಯಮಿಗಳೊಂದಿಗೆ ಮಾತುಕತೆ ನಡೆಸಿದ ಅವರು, ಸರಕಾರವು ‘ಬಿಯಾಂಡ್ ಬೆಂಗಳೂರು’ ಕಾರ್ಯಕ್ರಮದ ಮೂಲಕ ಬೆಂಗಳೂರಿಗೆ ಹೊರತಾದ ಪ್ರದೇಶಗಳಲ್ಲಿಯೂ ಉದ್ಯಮಶೀಲತೆಯನ್ನು ಉತ್ತೇಜಿಸುವ ಉದ್ದೇಶ ಹೊಂದಿದೆ ಎಂದರು.

ಉದ್ಯಮಗಳಿಗೆ ಬೇಕಾದ ಭೂಮಿ, ಅನುಮತಿ, ಪರವಾನಿಗೆ ಇತ್ಯಾದಿಯನ್ನು ಲಭ್ಯವಾಗಿಸಲು ಸರಕಾರವು ಸರಳವಾದ ನೀತಿಯನ್ನು ಜಾರಿಗೊಳಿಸಿದೆ. ಉದ್ಯಮಿಗಳ ಯಶಸ್ಸಿನ ಸಾಧ್ಯತೆಯನ್ನು ಹೆಚ್ಚಿಸಲು ಪೂರಕ ತರಬೇತಿ ವ್ಯವಸ್ಥೆಯನ್ನು ಕಲ್ಪಿಸಲಾಗುತ್ತಿದೆ. ಜೊತೆಗೆ, ಶೈಕ್ಷಣಿಕ ಸಂಸ್ಥೆಗಳು, ಉದ್ದಿಮೆಗಳು ಹಾಗೂ ಸಂಶೋಧಕರನ್ನು ಸಂಯೋಜಿಸುವ ಕಾರ್ಯಕ್ಕೆ ಒತ್ತು ನೀಡಿದೆ ಎಂದು ಅಶ್ವತ್ಥನಾರಾಯಣ ವಿವರಿಸಿದರು.

ಬೆಂಗಳೂರಿಗೆ ಹೊರತಾದ ಭಾಗದವರು ಇಂದು ಉದ್ಯಮಿಗಳಾಗಿ ಗಮನ ಸೆಳೆದಿದ್ದಾರೆ. ಇಂಥವರ ಯಶಸ್ಸಿನ ಕಥನಗಳು ಉದ್ಯಮಶೀಲರಿಗೆ ಸ್ಫೂರ್ತಿ ಹಾಗೂ ಪ್ರೇರಣೆಯಾಗಬೇಕು. ಉದ್ಯಮಕ್ಕೆ ಮುಂದಾಗುವವರು ಯಾವ ಜಾಗ ಹಾಗೂ ಯಾವ ಸನ್ನಿವೇಶಕ್ಕೆ ಯಾವ ಉದ್ಯಮ ಸೂಕ್ತ ಎಂಬುದನ್ನು ಗುರುತಿಸಿಕೊಳ್ಳುವ ಜೊತೆಗೆ ಮಾರುಕಟ್ಟೆಯ ಬೇಡಿಕೆ-ಪೂರೈಕೆ ಕುರಿತು ಅರಿವು ಬೆಳೆಸಿಕೊಳ್ಳಬೇಕು. ಪರಿಸರಕ್ಕೆ ಹೊರೆಯಾಗದ ಸುಸ್ಥಿರ ಉದ್ದಿಮೆಗಳ ಸ್ಥಾಪನೆಗೆ ಮುಂದಾಗಬೇಕು ಎಂದು ಅವರು ಅಭಿಪ್ರಾಯಪಟ್ಟರು.

ಒಳ್ಳೆಯ ಉದ್ಯಮಿಗಳನ್ನು ಬೆಳೆಸಲು ಉತ್ತಮ ಶಿಕ್ಷಣವೇ ಅಡಿಪಾಯ. ಹೀಗಾಗಿ ಗುಣಮಟ್ಟದ ಶಿಕ್ಷಣಕ್ಕೆ ಒತ್ತು ನೀಡಲು ಪ್ರಧಾನಮಂತ್ರಿ ನರೇಂದ್ರ ಮೋದಿ ಜಾರಿಗೊಳಿಸುವ ರಾಷ್ಟ್ರೀಯ ಶಿಕ್ಷಣ ನೀತಿಯು ಪೂರಕವಾಗಿದೆ. ಈ ನೀತಿಯು ವಿದ್ಯಾರ್ಥಿ ಹಂತದಲ್ಲೇ ಕೌಶಲಾಭಿವೃದ್ಧಿಗೆ ಗಮನ ನೀಡಿ ಉದ್ಯಮಿಗಳನ್ನು ರೂಪಿಸಲು ನೆರವಾಗುತ್ತದೆ ಎಂದು ಅವರು ಅಭಿಪ್ರಾಯಪಟ್ಟರು.

ಈ ಸಂದರ್ಭದಲ್ಲಿ ಶಾಸಕ ಬಸವರಾಜ ಮತ್ತಿಮೂಡ, ವಿಧಾನ ಪರಿಷತ್ ಸದಸ್ಯರಾದ ಶಶಿಲ್ ನಮೋಷಿ, ಬಿ.ಜಿ.ಪಾಟೀಲ್, ಉಮಾಶಂಕರ್,  ಗುಲ್ಬರ್ಗ ಗ್ರಾಮಾಂತರ ಜಿಲ್ಲಾ ಬಿಜೆಪಿ ಅಧ್ಯಕ್ಷ ಶಿವರಾಜ ಪಾಟೀಲ ರದ್ದೆವಾಡಿಗಿ ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X