Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಶೌಚಾಲಯ ಯೋಜನೆಗೆ ಪ್ರಧಾನಿ ಮೋದಿ...

ಶೌಚಾಲಯ ಯೋಜನೆಗೆ ಪ್ರಧಾನಿ ಮೋದಿ ಹೆಸರಿಡಲು ಸಿ.ಟಿ.ರವಿ ಮನವಿ

ವಾರ್ತಾಭಾರತಿವಾರ್ತಾಭಾರತಿ24 Aug 2021 6:52 PM IST
share
ಶೌಚಾಲಯ ಯೋಜನೆಗೆ ಪ್ರಧಾನಿ ಮೋದಿ ಹೆಸರಿಡಲು ಸಿ.ಟಿ.ರವಿ ಮನವಿ

ಚಿಕ್ಕಮಗಳೂರು, ಆ.24: 'ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದ 7 ವರ್ಷಗಳಲ್ಲಿ ದೇಶಾದ್ಯಂತ 13 ಕೋಟಿ ಶೌಚಾಲಯಗಳನ್ನು ನಿರ್ಮಿಸಲಾಗಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಹೆಸರನ್ನು ಶೌಚಾಲಯ ನಿರ್ಮಾಣ ಯೋಜನೆಗೆ ಇಡಬೇಕು' ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಶಾಸಕ ಸಿ.ಟಿ.ರವಿ ಈಶ್ವರಪ್ಪ ಅವರಿಗೆ ಮನವಿ ಮಾಡಿದ್ದಾರೆ.

'ಮಂಗಳವಾರ ನಗರದ ಎಐಟಿ ಕಾಲೇಜು ಆವರಣದಲ್ಲಿ ಜಿ.ಪಂ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಗ್ರಾಪಂ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಪಿಡಿಒಗಳ ಕಾರ್ಯಗಾರ ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮಹಾತ್ಮ ಗಾಂಧೀಜಿ ಅವರು ಗ್ರಾಮಸ್ವರಾಜ್ಯದ ಕನಸು ಕಂಡಿದ್ದರು. ಗ್ರಾಮೀಣ ಭಾಗದ ಸ್ವಚ್ಛತೆ, ಶೌಚಾಲಯ ನಿರ್ಮಾಣ ಗಾಂಧೀಜಿಯವರ ಆಶಯವಾಗಿತ್ತು. ಆದರೆ ಸ್ವಾತಂತ್ರ್ಯ ಬಂದು 75 ವರ್ಷ ಕಳೆದರೂ ಗಾಂಧೀಜಿ ಅವರ ಕನಸು ನನಸಾಗಿಲ್ಲ. ಗಾಂಧೀಜಿ ಚಿಂತನೆಗಳನ್ನು ಅವರ ವಾರಸುದಾರರು ಸಾಕಾರ ಮಾಡಬೇಕಿತ್ತು. ಆದರೆ ಅದು ಅವರಿಂದ ಸಾಧ್ಯವಾಗಿಲ್ಲ. ಗಾಂಧೀಜಿ ಅವರ ಸ್ವಚ್ಛ ಭಾರತದ ಕನಸನ್ನು ನನಸು ಮಾಡಲು ಪ್ರಧಾನಿ ನರೇಂದ್ರ ಮೋದಿ ಅವರೇ ಬರಬೇಕಾಯಿತು' ಎಂದರು.

ಕೇಂದ್ರದಲ್ಲಿ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರಕಾರದ 7 ವರ್ಷಗಳ ಆಳ್ವಿಕೆಯಲ್ಲಿ ದೇಶಾದ್ಯಂತ 13.5 ಕೋಟಿ ಶೌಚಾಲಯಗಳನ್ನು ನಿರ್ಮಿಸಲಾಗಿದೆ. ಈ ಕಾರಣಕ್ಕೆ ಶೌಚಾಲಯಗಳಿಗೆ ಪ್ರಧಾನಿ ಮೋದಿ ಅವರ ಹೆಸರನ್ನು ಇಡಬೇಕು. ಇದು ಅಗೌರವದ ವಿಷಯವಲ್ಲ. ದೇಶದ ಮಹಿಳೆಯರ ಮಾನ ಕಾಪಾಡಿದ ವಿಷಯವಾಗಿದೆ. ದೇಶಾದ್ಯಂತ ಗಾಂಧೀಜಿ ಅವರ ಕನಸನ್ನು ನನಸು ಮಾಡಿದ ಕಾರಣಕ್ಕೆ ಪ್ರಧಾನಿ ಮೋದಿ ಅವರ ಹೆಸರನ್ನು ಶೌಚಾಲಯಕ್ಕೆ ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರಪ್ಪ ಅವರು ಮುಂದಾಗಬೇಕೆಂದರು. 

ಜನ ಪ್ರತಿನಿಧಿಗಳು ಮತ್ತು ಅಧಿಕಾರಿಗಳು ಜೋಡೆತ್ತಿನ ಹಾಗೆ ಪರಸ್ಪರ ಸಹಕಾರದಿಂದ ಕೆಲಸ ಮಾಡಿದರೆ ಗ್ರಾಮಾಭಿವೃದ್ಧಿ ಬಂಡಿ ಗುರಿತಲುಪಲು ಸಾಧ್ಯವಾಗುತ್ತದೆ. ಅಧಿಕಾರಿಗಳು ಸಹಕಾರದಿಂದ ಯೋಜನ ಬದ್ದರಾಗಿ ಕೆಲಸ ಮಾಡುವುದರಿಂದ ಗ್ರಾಮಗಳು ಅಭಿವೃದ್ಧಿ ಹೊಂದುವುದರಲ್ಲಿ ಸಂಶಯವಿಲ್ಲ ಎಂದ ಅವರು, ದೇಶದ ಭವಿಷ್ಯ ಹಳ್ಳಿಗಳಲ್ಲಿ ಅಡಗಿದೆ ಎಂದು ಮಹಾತ್ಮ ಗಾಂಧೀಜಿ ಅವರು ಸ್ವಾತಂತ್ರ್ಯ ಪೂರ್ವದಲ್ಲಿ ಹೇಳಿದ್ದರು. ಜೊತೆಗೆ ಆಡಳಿತವು ವಿಕೇಂದ್ರಿಕರಣದ ಮೂಲಕ ಪ್ರತೀ ಹಳ್ಳಿಗಳು ಸ್ವಾವಲಂಬಿಯಾಗಬೇಕೆಂದು ಮಹಾತ್ಮರು ತಿಳಿಸಿದ್ದರು. ಹಿಂದೆ ಹಳ್ಳಿಗಳು ರಾಜರಿಗೆ ದೇಣಿಗೆಗಳನ್ನು ನೀಡುತ್ತಿದಂತಹ ವ್ಯವಸ್ಥೆ ಇತ್ತು. ಇಂದು ಹಳ್ಳಿಗಳು ಸರಕಾರದ ಬಳಿ ದೇಣಿಗೆಗಳಿಗಾಗಿ ಕಾಯುವಂತಹ ಪರಿಸ್ಥಿತಿ ಎದುರಾಗಿದೆ. ಹಳ್ಳಿಗಳಲ್ಲಿ ಕೆರೆ, ಗೋಮಾಳ ಒತ್ತುವರಿಯಾಗಿದ್ದು, ಎಲ್ಲದಕ್ಕೂ ಸರಕಾರದ ಬಳಿ ಅಂಗಲಾಚುವ ಸ್ಥಿತಿ ನಿರ್ಮಾಣವಾಗಿದೆ. ಈ ಬಗ್ಗೆ ಸಮಗ್ರ ಚಿಂತನೆ ನಡೆದಲ್ಲಿ ಗ್ರಾಮಸ್ವರಾಜ್ಯದ ಗಾಂಧೀಜಿ ಕನಸು ನನಸಾಗಲಿದೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X