Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ವಹಿವಾಟು ಅಭಿವೃದ್ಧಿ ಯೋಜನೆ ರೂಪಿಸಲು...

ವಹಿವಾಟು ಅಭಿವೃದ್ಧಿ ಯೋಜನೆ ರೂಪಿಸಲು ಕೈಮಗ್ಗ ನಿಗಮ ಅಧಿಕಾರಿಗಳಿಗೆ ಮುಖ್ಯಮಂತ್ರಿ ಬೊಮ್ಮಾಯಿ ಸೂಚನೆ

ವಾರ್ತಾಭಾರತಿವಾರ್ತಾಭಾರತಿ24 Aug 2021 8:06 PM IST
share
ವಹಿವಾಟು ಅಭಿವೃದ್ಧಿ ಯೋಜನೆ ರೂಪಿಸಲು ಕೈಮಗ್ಗ ನಿಗಮ ಅಧಿಕಾರಿಗಳಿಗೆ ಮುಖ್ಯಮಂತ್ರಿ ಬೊಮ್ಮಾಯಿ ಸೂಚನೆ

ಬೆಂಗಳೂರು, ಆಗಸ್ಟ್ 24- ಕರ್ನಾಟಕ ಕೈಮಗ್ಗ ನಿಗಮದ ಪುನಶ್ಚೇತನಕ್ಕೆ ಕೂಡಲೇ ವಹಿವಾಟು ಅಭಿವೃದ್ಧಿಗೆ ಯೋಜನೆ ರೂಪಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಅಧಿಕಾರಿಗಳಿಗೆ ಸೂಚಿಸಿದರು.

ಮುಖ್ಯಮಂತ್ರಿ ಗೃಹ ಕಚೇರಿಯಲ್ಲಿ ಇಂದು ನಡೆದ ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮದ ಹಣಕಾಸಿನ ಪರಿಸ್ಥಿತಿ ಸುಧಾರಣೆ ಕುರಿತ ಸಭೆಯಲ್ಲಿ ಈ ಸೂಚನೆ ನೀಡಿದರು. 

ನಿಗಮದ ವಾಣಿಜ್ಯ ಚಟುವಟಿಕೆಗಳನ್ನು ವಿಸ್ತರಿಸುವ ಮೂಲಕ ನಷ್ಟ ಭರಿಸುವಂತೆ ಮುಖ್ಯಮಂತ್ರಿಗಳು ಸಲಹೆ ನೀಡಿದರು.

ಶಿಕ್ಷಣ ಇಲಾಖೆಯ ಸಮವಸ್ತ್ರ ಪೂರೈಕೆಯಲ್ಲಿ ನಿಗಮಕ್ಕೆ ಆಗಿರುವ 10 ಕೋಟಿ ರೂ. ನಷ್ಟದಲ್ಲಿ 5 ಕೋಟಿ ಸರ್ಕಾರ ಭರಿಸಲಿದ್ದು, ಉಳಿದ 5 ಕೋಟಿ ರೂ. ಗಳನ್ನು ನಿಗಮದ ವಹಿವಾಟಿನ ಮೂಲಕ ಭರಿಸುವಂತೆ ಸೂಚನೆ ನೀಡಿದರು.

ಸರ್ಕಾರದ ವಿವಿಧ ಇಲಾಖೆಗಳು ತಮ್ಮ ಅಗತ್ಯದ ಕನಿಷ್ಠ ಶೇ. 25 ರಷ್ಟು ವಸ್ತ್ರವನ್ನು ಕೈಮಗ್ಗ ನಿಗಮದಿಂದ ಖರೀದಿಸುವಂತೆ ಸುತ್ತೋಲೆ ಹೊರಡಿಸುವಂತೆ ಸೂಚಿಸಿದರು.

ಕೈಮಗ್ಗ ನಿಗಮವನ್ನು ಖಾಸಗಿ ಸಹಭಾಗಿತ್ವದೊಂದಿಗೆ ಕೈಮಗ್ಗ ನೇಕಾರರ ಕೌಶಲ್ಯ ವೃದ್ಧಿಗೆ ಒತ್ತು ನೀಡುವ ಮೂಲಕ ಅವರ ಆದಾಯ ಹೆಚ್ಚಿಸುವ ಯೋಜನೆ ರೂಪಿಸಲು ಸಲಹೆ ನೀಡಿದರು.

ಪೀಣ್ಯ ಕೈಗಾರಿಕಾ ಪ್ರದೇಶದಲ್ಲಿರುವ ನಿಗಮದ 2 ಎಕರೆ 34 ಗುಂಟೆ ಜಮೀನಿನನ್ನು  ಮೈಸೂರು ಮಿನರಲ್ಸ್ ಸಹಯೋಗದಲ್ಲಿ ಅಭಿವೃದ್ಧಿಪಡಿಸಿ, ಆದಾಯ ತರುವಂತೆ ಮಾಡಲು ಸೂಚಿಸಿದರು.

ನಗರ ಪ್ರದೇಶದ ಗ್ರಾಹಕರನ್ನು ಆಕರ್ಷಿಸಲು ವಿನ್ಯಾಸ ಸಂಸ್ಥೆಗಳೊಂದಿಗೆ ಒಪ್ಪಂದ ಮಾಡಿಕೊಂಡು ಮಾರುಕಟ್ಟೆ ಅವಕಾಶ ವಿಸ್ತರಿಸಲು ಸಲಹೆ ನೀಡಿದರು.

ರಾಜ್ಯದ ಕೈಮಗ್ಗ ಉತ್ಪನ್ನಗಳು ಹಾಗೂ ಕರಕುಶಲ ವಸ್ತುಗಳು ಒಂದೇ ಸೂರಿನಡಿ ಲಭ್ಯವಾಗುವಂತೆ ಅವಕಾಶ ಕಲ್ಪಿಸಲು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಕೈಮಗ್ಗ ಉತ್ಪನ್ನಗಳಿಗೆ ಮಾರುಕಟ್ಟೆ ಕಲ್ಪಿಸಲು ಆನ್ ಲೈನ್ ಮಾರಾಟ ವ್ಯವಸ್ಥೆ ರೂಪಿಸಲು ತಿಳಿಸಿದರು.

ಸಭೆಯಲ್ಲಿ ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮದ ಅಧ್ಯಕ್ಷ ಸಿದ್ದು ಸವದಿ, ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಐ.ಎಸ್. ಎನ್. ಪ್ರಸಾದ್, ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ ಪ್ರಸಾದ್, ವಾಣಿಜ್ಯ ಮತ್ತು ಕೈಗಾರಿಕೆ (ಎಂ.ಎಸ್.ಎಂ.ಇ) ಕಾರ್ಯದರ್ಶಿ ಪಂಕಜ್ ಕುಮಾರ್ ಪಾಂಡೆ ಮತ್ತು ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X