Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಜಲಸಂಪನ್ಮೂಲ ಯೋಜನೆಗಳ ತ್ವರಿತ...

ಜಲಸಂಪನ್ಮೂಲ ಯೋಜನೆಗಳ ತ್ವರಿತ ಅನುಷ್ಠಾನಕ್ಕೆ ಭೂಸ್ವಾಧೀನ ಪ್ರಕ್ರಿಯೆಗಳಿಗೆ ಆದ್ಯತೆ: ಗೋವಿಂದ ಕಾರಜೋಳ

ವಾರ್ತಾಭಾರತಿವಾರ್ತಾಭಾರತಿ24 Aug 2021 10:25 PM IST
share
ಜಲಸಂಪನ್ಮೂಲ ಯೋಜನೆಗಳ ತ್ವರಿತ ಅನುಷ್ಠಾನಕ್ಕೆ  ಭೂಸ್ವಾಧೀನ ಪ್ರಕ್ರಿಯೆಗಳಿಗೆ ಆದ್ಯತೆ: ಗೋವಿಂದ ಕಾರಜೋಳ

ಬೆಂಗಳೂರು. ಆ.24: ಜಲಸಂಪನ್ಮೂಲ ಇಲಾಖೆಯ ಯೋಜನೆಗಳ ಕಾಮಗಾರಿಗಳನ್ನು ತ್ವರಿತವಾಗಿ ಅನುಷ್ಠಾನಗೊಳಿಸಲು ಪ್ರಮುಖವಾಗಿ ಭೂಸ್ವಾಧೀನ ಪ್ರಕ್ರಿಯೆಗಳಿಗೆ ಆದ್ಯತೆ ನೀಡಿ, ಕಾಮಗಾರಿಗಳನ್ನು  ಅನುಷ್ಠಾನಗೊಳಿಸಬೇಕು ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಜಲಸಂಪನ್ಮೂಲ ಇಲಾಖೆಯ ಹಿರಿಯ ಅಧಿಕಾರಿಗಳಿಗೆ ಸೂಚಿಸಿದರು.

ಕರ್ನಾಟಕ ನೀರಾವರಿ ನಿಗಮದಲ್ಲಿಂದು ನಡೆದ ಜಲಸಂಪನ್ಮೂಲ ಇಲಾಖೆಯ ವ್ಯಾಪ್ತಿಯ ನಿಗಮಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಕೃಷ್ಣಾ ಭಾಗ್ಯ ಜಲ ನಿಗಮ, ಕರ್ನಾಟಕ ನೀರಾವರಿ ನಿಗಮ, ಕಾವೇರಿ ನೀರಾವರಿ ನಿಗಮ ಮತ್ತು ವಿಶ್ವೇಶ್ವರಯ್ಯ ಜಲ ನಿಗಮಗಳಡಿ  ಅನುಷ್ಠಾನಗೊಳಿಸುತ್ತಿರುವ ಪ್ರಮುಖ ಯೋಜನೆಗಳಾದ ಕೃಷ್ಣಾ ಮೇಲ್ದಂಡೆ ಯೋಜನೆ ಹಂತ-3ರ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿದರು.

ಭದ್ರಾ ಮೇಲ್ದಂಡೆ ಯೋಜನೆ, ಎತ್ತಿನಹೊಳೆ ಕುಡಿಯುವ ನೀರಿನ ಯೋಜನೆ,  ಮಹಾದಾಯಿ ಕಣಿವೆಯ ಕಳಸಾ ಮತ್ತು ಬಂಡೂರು ನಾಲಾ ತಿರುವು ಯೋಜನೆಗಳ,  ನವಲಿ ಸಮತೋಲನಾ ಜಲಾಶಯ ನಿರ್ಮಾಣ ಯೋಜನಾ ಕಾಮಗಾರಿಗಳ ಪ್ರಸ್ತುತ ಹಂತದ ಭೌತಿಕ ಮತ್ತು ಆರ್ಥಿಕ ಪ್ರಗತಿಯ ವಿವರಗಳನ್ನು ಚರ್ಚಿಸಿದ ಸಚಿವರು,  ಮೇಕೆದಾಟು ಯೋಜನೆಯ ಪ್ರಸ್ತುತ ಹಂತದ ವಿವರಗಳನ್ನು ಹಾಗೂ ಕಾನೂನಾತ್ಮಕ ಕ್ರಮಗಳ ಕುರಿತು ಇಲಾಖೆಯ ಅಧಿಕಾರಿಗಳೊಂದಿಗೆ ಗೋವಿಂದ ಕಾರಜೋಳ ಚರ್ಚಿಸಿದರು.

ಯೋಜನೆಗಳ  ಅನುಷ್ಠಾನದಲ್ಲಿ ಪ್ರಮುಖವಾಗಿ ಭೂಸ್ವಾಧೀನ ಪ್ರಕ್ರಿಯೆಗಳಿಗೆ ಆದ್ಯತೆ ನೀಡಿ, ಈ ನಿಟ್ಟಿನಲ್ಲಿ ಅಗತ್ಯ ಭೂಸ್ವಾಧೀನ ಪ್ರಕರಣಗಳಿಗೆ ಆದ್ಯತೆ ಮೇಲೆ ಭೂಪರಿಹಾರ ನೀಡುವ ನಿಟ್ಟಿನಲ್ಲಿ ನಿಗಮಗಳಡಿ ಸೂಕ್ತ ಆವರ್ತ ನಿಧಿ ಸ್ಥಾಪಿಸುವ ಬಗ್ಗೆ ಪರಿಶೀಲಿಸಲು ಅಧಿಕಾರಿಗಳಿಗೆ ಗೋವಿಂದ ಕಾರಜೋಳ ಸೂಚಿಸಿದರು.

ಭೂಸ್ವಾಧೀನತೆ ಪ್ರಕ್ರಿಯೆಯನ್ನು ತೀವ್ರಗತಿಯಲ್ಲಿ ಜರುಗಿಸಲು ಪ್ರಮುಖವಾಗಿ ವಿಶೇಷ ಭೂಸ್ವಾಧೀನಾಧಿಕಾರಿಗಳು ಮತ್ತು ಇತರೆ ಸಂಬಂಧಿತ ಅನೇಕ ಅಧಿಕಾರಿ ವೃಂದದ ಖಾಲಿ ಹುದ್ದೆಗಳನ್ನು ಭರ್ತಿ ಮಾಡುವ ಕುರಿತಾಗಿ ಸರಕಾರದ ಅನುಮೋದನೆಗಾಗಿ ಪ್ರತ್ಯೇಕ ಪ್ರಸ್ತಾವನೆಯನ್ನು ಸಲ್ಲಿಸುವಂತೆ ಅವರು ಅವರು ಸೂಚಿಸಿದರು.

ಏತ ನೀರಾವರಿ ಯೋಜನೆಗಳ  ಅನುಷ್ಠಾನದಲ್ಲಿ ಹಲವು ಯೋಜನೆಗಳಲ್ಲಿ ಜಾಕ್‍ವೆಲ್ ಕಂ ಪಂಪ್ ಹೌಸ್‍ಗಳ ನಿರ್ಮಾಣಗಳನ್ನು ಪೂರ್ಣಗೊಳಿಸದೇ ಪೈಪ್‍ಲೈನ್ ಅಳವಡಿಕೆಯ ಕಾಮಗಾರಿಗಳನ್ನು ಕೈಗೆತ್ತಿಕೊಂಡು ಬಿಲ್ ಪಾವತಿ ಮಾಡುತ್ತಿರುವ ಕುರಿತು ಚರ್ಚಿಸಲ್ಪಟ್ಟು ಇನ್ನು ಮುಂದೆ ಜಾಕ್‍ವೆಲ್ ಕಂ ಪಂಪ್ ಹೌಸ್‍ನ ಶೇ.50 ರಷ್ಟು ಪ್ರಗತಿ ಸಾಧಿಸದ ನಂತರವಷ್ಟೇ ಪೈಪ್‍ಲೈನ್ ಕಾಮಗಾರಿಗಳನ್ನು ಪ್ರಾರಂಭಿಸಬೇಕು. ಈಗಾಗಲೇ ಮುಕ್ತಾಯ ಹಂತದಲ್ಲಿರುವ ಯೋಜನಾ ಕಾಮಗಾರಿಗಳನ್ನು ಆದ್ಯತೆಯ ಮೇರೆಗೆ ಪೂರ್ಣಗೊಳಿಸಿ ನೀರಾವರಿ ಸೌಲಭ್ಯಗಳನ್ನು ಕಲ್ಪಿಸಲು ಅವರು ಸೂಚಿಸಿದರು.

ಇನ್ನು ಮುಂದೆ ಸೂಕ್ಷ್ಮ ನೀರಾವರಿ ಯೋಜನೆಗಳ ಬದಲಾಗಿ ಫಲಾನುಭವಿ ರೈತರ / ಸಮೂಹ ರೈತರ ಜಮೀನುಗಳಡಿ ನೀರಿನ ಸಂಗ್ರಹಣ ತೊಟ್ಟಿಗಳನ್ನು ನಿರ್ಮಿಸಿ ನೀರು ಒದಗಿಸುವುದು ಮತ್ತು ಸದರಿ ಸಂಗ್ರಹಣೆಯಿಂದ ರೈತರು ತಮ್ಮ ಸ್ವಂತ ಪೈಪ್‍ಲೈನ್ ಅಳವಡಿಕೆಗಳಿಂದ ನೀರಾವರಿಗೆ ನೀರನ್ನು ಬಳಸಲು ಅವಕಾಶಗಳನ್ನು ಕಲ್ಪಿಸುವ ಕುರಿತು ಅಥವಾ ಫಲಾನುಭವಿ ರೈತರ ಸರ್ವೆ ನಂಬರ್‍ಗಳಿಗೆ ಸೂಕ್ತ ಓಟ್‍ಲೆಟ್‍ಗಳನ್ನು  ನಿರ್ಮಿಸುವುದು ಮತ್ತು ಅಲ್ಲಿಂದ ರೈತರು ತಮ್ಮ ಹೊಲಗಳಿಗೆ ನೀರನ್ನು ಪಡೆಯುವ ವ್ಯವಸ್ಥೆ ಕುರಿತಾಗಿ ಸೂಕ್ತವಾಗಿ ಮಾರ್ಪಾಡುಗೊಳಿಸುವ ಬಗ್ಗೆ ಪರಿಶೀಲಿಸಲು ಅಧಿಕಾರಿಗಳಿಗೆ ಗೋವಿಂದ ಕಾರಜೋಳ ತಿಳಿಸಿದರು.

ನಿಗಮಗಳಡಿ ಅನುಷ್ಠಾನಗೊಳಿಸುತ್ತಿರುವ ಅನೇಕ ಕೆರೆ ತುಂಬಿಸುವ ಯೋಜನೆಗಳು ಮತ್ತು ಏತ ನೀರಾವರಿ ಯೋಜನೆಗಳ ಸಫಲತೆ ಕುರಿತಾಗಿ ಯೋಜನೆಗಳ ಮೌಲ್ಯಮಾಪನ ಕೈಗೊಳ್ಳಲು ಅಧಿಕಾರಿಗಳಿಗೆ ಅವರು ಆದೇಶಿಸಿದರು.

ಈಗಾಗಲೇ ನೀರಾವರಿ ಸೌಲಭ್ಯ ಕಲ್ಪಿಸಿರುವ ಯೋಜನೆಗಳಡಿ ನೀರಾವರಿ ವಂಚಿತಗೊಂಡ suffering atchkat ನಿಖರವಾದ ಕ್ಷೇತ್ರ ಗುರುತಿಸಲು ಮತ್ತು ಈ ನಿಟ್ಟಿನಲ್ಲಿ ಸಕಾರಾತ್ಮಕ ಕ್ರಮಗಳನ್ನು ಕೈಗೊಳ್ಳುವ ಬಗ್ಗೆ ಅಧಿಕಾರಿಗಳಿಗೆ ಗೋವಿಂದ ಕಾರಜೋಳ ಸೂಚಿಸಿದರು.
ಜಲಸಂಪನ್ಮೂಲ ಇಲಾಖೆಯ ಅಪರ ಮುಖ್ಯಕಾರ್ಯದರ್ಶಿ ರಾಕೇಶ್ ಸಿಂಗ್ ಮತ್ತು ಕಾರ್ಯದರ್ಶಿ ಎನ್.ಲಕ್ಷ್ಮಣರಾವ್ ಪೇಶ್ವೆ  ಯೋಜನಾ ಕಾಮಗಾರಿಗಳ ಕುರಿತು ವಿಸ್ತೃತವಾಗಿ ವಿವರಿಸಿದರು. ಸಭೆಯಲ್ಲಿ ಕೆಎನ್‍ಎನ್‍ಎಲ್ ವ್ಯವಸ್ಥಾಪಕ ನಿರ್ದೇಶಕ ಮಲ್ಲಿಕಾರ್ಜುನ ಗುಂಗೆ, ಕಾವೇರಿ ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಕೆ.ಜೈಪ್ರಕಾಶ್, ಕೆಬಿಜೆಎನ್‍ಎಲ್ ವ್ಯವಸ್ಥಾಪಕ ನಿರ್ದೇಶಕ ಪ್ರಭಾಕರ ಚಿಣಿ ಮತ್ತಿತರ ಹಿರಿಯ ಅಧಿಕಾರಿಗಳು ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X