ನೈಜ ಬಿಪಿಎಲ್ ಫಲಾನುಭವಿಗಳಿಗೆ ಅನ್ಯಾಯವಾಗದಿರಲಿ: ಶಾಸಕ ವೇದವ್ಯಾಸ ಕಾಮತ್

ಮಂಗಳೂರು, ಆ.24: ಆದಾಯ ಪ್ರಮಾಣಪತ್ರ ತಿದ್ದುಪಡಿ ಮಾಡುವ ಸಂದರ್ಭದಲ್ಲಿ ಕೆಲವೊಂದು ತಾಂತ್ರಿಕ ಸಮಸ್ಯೆಗಳಿಂದಾಗಿ ಆಗಿರುವ ತಪ್ಪುಗಳನ್ನು ಸರಿಪಡಿಸಬೇಕು. ನೈಜ ಬಿಪಿಎಲ್ ಫಲಾನುಭವಿಗಳಿಗೆ ಅನ್ಯಾಯವಾಗದಂತೆ ಕ್ರಮ ಕೈಗೊಳ್ಳಬೇಕು ಎಂದು ಶಾಸಕ ವೇದವ್ಯಾಸ ಕಾಮತ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಗೆ ಸಂಬಂಧಪಟ್ಟಂತೆ ಜಿಲ್ಲೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಶಾಸಕರು, ಬಿಪಿಎಲ್‌ನಿಂದ ಎಪಿಎಲ್‌ಗೆ ಪರಿವರ್ತನೆಯಾದ ಪಡಿತರ ಚೀಟಿದಾರರ ಸಂಬಂಧಿಸಿದ ಗ್ರಾಮಕರಣಿಕರಿಗೆ ನೀಡಲು ಸೂಚನೆ ನೀಡಿದರು. ಅವರಿಂದ ಪಡಿತರ ಚೀಟಿದಾರರ ಆದಾಯ ದೃಢಪತ್ರವನ್ನು ಪರಿಷ್ಕರಿಸಿ, ಆಹಾರ ಇಲಾಖೆಗೆ ವರದಿ ಸಲ್ಲಿಸುವಂತೆ ಶಾಸಕರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಭೆಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಅಧಿಕಾರಿಗಳು, ಕಂದಾಯ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
Next Story





