ವಿದ್ಯುತ್ ಖಾಸಗೀಕರಣದ ಪ್ರಸ್ತಾವ ಇಲ್ಲ: ಸಚಿವ ಸುನೀಲ್ ಕುಮಾರ್

ಮೈಸೂರು, ಆ.25: ವಿದ್ಯುತ್ ಖಾಸಗೀಕರಣದ ಯಾವುದೇ ಪ್ರಸ್ತಾವ ರಾಜ್ಯ ಸರ್ಕಾರದ ಮುಂದೆ ಇಲ್ಲ ಎಂದು ಇಂಧನ ಸಚಿವ ಸುನೀಲ್ ಕುಮಾರ್ ತಿಳಿಸಿದ್ದಾರೆ.
ನಗರದಲ್ಲಿ ಬುಧವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸರ್ಕಾರಿ ಸ್ವಾಮ್ಯದ ವಿದ್ಯುತ್ ಘಟಕಗಳನ್ನು ಖಾಸಗೀಕರಣಗೊಳಿಸುವ ಪ್ರಶ್ನೆಯೇ ಇಲ್ಲ, ಅಂತಹ ಯಾವುದೇ ಪ್ರಸ್ತಾವ ಸರ್ಕಾರದ ಮುಂದೆ ಇಲ್ಲ ಎಂದು ಸ್ಪಷ್ಟಪಡಿಸಿದರು.
ಕೇಂದ್ರ ಸರ್ಕಾರದ ಮಸೂದೆಗಳ ಬಗ್ಗೆ ನನಗೆ ಇನ್ನೂ ಮಾಹಿತಿ ಇಲ್ಲ, ಅಲ್ಲದೆ ವಿದ್ಯುತ್ ದರ ಏರಿಕೆ ಸಹ ಸರ್ಕಾರದ ಕೈಯಲ್ಲಿಲ್ಲ. ಇದು ವಿದ್ಯುತ್ ಸರಬರಾಜು ಮಾಡುವವರ ತೀರ್ಮಾನ. ಈ ಬಗ್ಗೆ ಸರ್ಕಾರ ಏನೂ ತೀರ್ಮಾನ ತೆಗೆದುಕೊಳ್ಳುವುದಿಲ್ಲ ಎಂದು ಹೇಳಿದರು.
ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ಕುರಿತು ಮಾತನಾಡಿದ ಸಚಿವ ಸುನೀಲ್ ಕುಮಾರ್, ಯಾರೂ ಕೂಡಾ ಟೀಕೆ ಮಾಡುವ ಭರದಲ್ಲಿ ಎಲ್ಲೆ ಮೀರಬಾರದು. ನಾನು ಈ ಬಗ್ಗೆ ಬಹಳ ಎಚ್ಚರಿಕೆಯಿಂದ ಇದ್ದೇನೆ ಎಂದರು.
Next Story





