ಶಾಸಕ ಯತ್ನಾಳ್ ವಿರುದ್ಧ ಅವಹೇಳನಕಾರಿ ಪೋಸ್ಟರ್: ಓರ್ವನ ಬಂಧನ

ಬೆಂಗಳೂರು, ಆ.25: ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಅವಹೇಳನಕಾರಿ ಬರಹ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವನನ್ನು ಇಲ್ಲಿನ ವಿಧಾನಸೌಧ ಠಾಣಾ ಪೊಲೀಸರು ಬಂಧಿಸಿದ್ದಾರೆ.
ಸೆಲ್ವರಾಜ್ ಎಂಬಾತ ಬಂಧಿತ ಆರೋಪಿ ಎಂದು ಪೊಲೀಸರು ಹೇಳಿದ್ದಾರೆ.
ಇಲ್ಲಿನ ಶಾಸಕರ ಭವನದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ಕೊಠಡಿ ಬಾಗಿಲಿಗೆ ಆರೋಪಿಯೂ ಅವಹೇಳನವಾಗಿ ಪೋಸ್ಟರ್ ಅಂಟಿಸಿದ್ದ. ಈ ಚಿತ್ರಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ವಿವಾದಕ್ಕೆ ಕಾರಣವಾಗಿತ್ತು.
ಈ ಸಂಬಂಧ ದೂರು ದಾಖಲಿಸಿಕೊಂಡು ವಿಧಾನಸೌಧ ಠಾಣಾ ಪೊಲೀಸರು ಆರೋಪಿಯನ್ನು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ.
Next Story





