ಮೈಸೂರು ಗ್ಯಾಂಗ್ ರೇಪ್ ಪ್ರಕರಣ: ರಾಜ್ಯದಲ್ಲಿ ಕುಸಿದು ಬಿದ್ದಿರುವ ಕಾನೂನು-ಸುವ್ಯವಸ್ಥೆಗೆ ಸಾಕ್ಷಿ; ಸಿದ್ದರಾಮಯ್ಯ

ಬೆಂಗಳೂರು: ಮೈಸೂರಿನಲ್ಲಿ ನಡೆದಿರುವ ವೈದ್ಯ ವಿದ್ಯಾರ್ಥಿನಿಯ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯಿಸಿ ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, 'ಮೈಸೂರಿನಲ್ಲಿ ನಡೆದಿರುವ ವಿದ್ಯಾರ್ಥಿನಿ ಮೇಲಿನ ಸಾಮೂಹಿಕ ಅತ್ಯಾಚಾರ ರಾಜ್ಯದಲ್ಲಿ ಕುಸಿದುಬಿದ್ದಿರುವ ಕಾನೂನು-ಸುವ್ಯವಸ್ಥೆಗೆ ಸಾಕ್ಷಿ. ಪೊಲೀಸರು ತಕ್ಷಣ ದುಷ್ಕರ್ಮಿಗಳನ್ನು ಬಂಧಿಸಿ ವಿದ್ಯಾರ್ಥಿನಿಗೆ ನ್ಯಾಯ ಒದಗಿಸಿ, ಭಯಭೀತ ಜನರಲ್ಲಿ ಧೈರ್ಯ ತುಂಬಬೇಕು' ಎಂದು ಒತ್ತಾಯಿಸಿದ್ದಾರೆ.
'ಮೈಸೂರು ಮಾತ್ರವಲ್ಲ ಇಡೀ ರಾಜ್ಯದಲ್ಲಿ ಅಪರಾಧಗಳ ಸಂಖ್ಯೆ ಹೆಚ್ಚಾಗುತ್ತಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಬಹಳಷ್ಟು ಬೇಗ ಸಂಪುಟ ವಿಸ್ತರಣೆಯ ಸಂಕಟದಿಂದ ಪಾರಾಗಿ ರಾಜ್ಯದಲ್ಲಿ ಹೆಚ್ಚುತ್ತಿರುವ ಅಪರಾಧಗಳ ನಿಯಂತ್ರಣಕ್ಕೆ ಗಮನ ಹರಿಸಬೇಕು' ಎಂದು ಹೇಳಿದ್ದಾರೆ.
ಮೈಸೂರಿನಲ್ಲಿ ನಡೆದಿರುವ ವಿದ್ಯಾರ್ಥಿನಿ ಮೇಲಿನ ಸಾಮೂಹಿಕ ಅತ್ಯಾಚಾರ ರಾಜ್ಯದಲ್ಲಿ ಕುಸಿದುಬಿದ್ದಿರುವ ಕಾನೂನು-ಸುವ್ಯವಸ್ಥೆಗೆ ಸಾಕ್ಷಿ.
— Siddaramaiah (@siddaramaiah) August 25, 2021
ಪೊಲೀಸರು ತಕ್ಷಣ ದುಷ್ಕರ್ಮಿಗಳನ್ನು ಬಂಧಿಸಿ ವಿದ್ಯಾರ್ಥಿನಿಗೆ ನ್ಯಾಯ ಒದಗಿಸಿ, ಭಯಭೀತ ಜನರಲ್ಲಿ ಧೈರ್ಯ ತುಂಬಬೇಕು.@CMofKarnataka#LawlessKarnataka
1/2 pic.twitter.com/4ZWnMJFYBo







