Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಶಿವಮೊಗ್ಗ: ಪಾಲಿಕೆಯಲ್ಲಿ ಪ್ರತಿಧ್ವನಿಸಿದ...

ಶಿವಮೊಗ್ಗ: ಪಾಲಿಕೆಯಲ್ಲಿ ಪ್ರತಿಧ್ವನಿಸಿದ ಆಸ್ತಿ ತೆರಿಗೆ; ಆಡಳಿತ ಪಕ್ಷ ಮತ್ತು ವಿರೋಧ ಪಕ್ಷದ ಸದಸ್ಯರ ನಡುವೆ ಜಟಾಪಟಿ

ಆಸ್ತಿ ತೆರಿಗೆ ಸಮರ್ಥಿಸಿಕೊಂಡ ಮೇಯರ್

ವಾರ್ತಾಭಾರತಿವಾರ್ತಾಭಾರತಿ25 Aug 2021 10:17 PM IST
share
ಶಿವಮೊಗ್ಗ: ಪಾಲಿಕೆಯಲ್ಲಿ ಪ್ರತಿಧ್ವನಿಸಿದ ಆಸ್ತಿ ತೆರಿಗೆ; ಆಡಳಿತ ಪಕ್ಷ ಮತ್ತು ವಿರೋಧ ಪಕ್ಷದ ಸದಸ್ಯರ ನಡುವೆ ಜಟಾಪಟಿ

ಶಿವಮೊಗ್ಗ,ಆ.25: ಆಸ್ತಿ ತೆರಿಗೆ ವಿಚಾರ ಮಹಾನಗರ ಪಾಲಿಕೆ ಸಾಮಾನ್ಯ ಸಭೆಯಲ್ಲಿ ಪ್ರತಿಧ್ವನಿಸಿತು.ತೆರಿಗೆ ಹೆಚ್ಚಳ ವಿಚಾರವಾಗಿ ಆಡಳಿತ ಪಕ್ಷ ಮತ್ತು ವಿರೋಧ ಪಕ್ಷದ ಸದಸ್ಯರ ನಡುವೆ ಜಟಾಪಟಿ ನಡೆದು ಕಾಂಗ್ರೆಸ್ ಸದಸ್ಯರ ಪ್ರತಿಭಟನೆ ನಡುವೆಯೇ ಗದ್ದಲ, ಗಲಾಟೆ ಕೋಲಾಹಲ ಉಂಟಾಯಿತು.

ಸಭೆ ಆರಂಭವಾಗುತ್ತಿದ್ದಂತೆಯೇ ವಿಪಕ್ಷ ನಾಯಕಿ ಯಮುನಾ ರಂಗೇಗೌಡ ಸಭೆ ಆರಂಭದಲ್ಲಿಯೇ ಅವೈಜ್ಞಾನಿಕ ಆಸ್ತಿ ತೆರಿಗೆ ವಿರೋಧಿಸಿ ಪಾಲಿಕೆ ಹೊರಗಡೆ ಸಂಘ, ಸಂಸ್ಥೆಗಳು, ಸಾರ್ವಜನಿಕರು ಬೃಹತ್ ಪ್ರತಿಭಟನ ನಡೆಸುತ್ತಿದ್ದಾರೆ. ಅವರ ಪ್ರತಿಭಟನೆಯನ್ನು ಗಮನಕ್ಕೆ ತೆಗೆದುಕೊಳ್ಳದೇ ಸಭೆ ನಡೆಸುವುದು ಸರಿಯಲ್ಲ ಎಂದರು.

 ಇದಕ್ಕೆ ಸಹಮತ ವ್ಯಕ್ತಪಡಿಸಿದ ಕಾಂಗ್ರೆಸ್ ಸದಸ್ಯರಾದ ರಮೇಶ್ ಹೆಗ್ಡೆ, ಯೋಗೀಶ್, ರೇಖಾ ರಂಗನಾಥ್, ಜೆಡಿಎಸ್ ಸದಸ್ಯ ನಾಗರಾಜ್ ಕಂಕಾರಿ, ಇದು ಅಭಿವ್ಯಕ್ತಿ ಸ್ವಾತಂತ್ರ್ಯದ ಹರಣವಾಗಿದೆ. ನ್ಯಾಯವಾಗಿ ನೋಡಿದರೆ ಎಸ್‌ಆರ್ ದರದಲ್ಲಿ ಆಸ್ತಿ ತೆರಿಗೆ ವಿಧಿಸುವುದು ಸರಿಯಲ್ಲ. ಬೆಂಗಳೂರಿಗೆ ಒಂದು, ಶಿವಮೊಗ್ಗಕ್ಕೆ ಒಂದು ತೆರಿಗೆ ನೀತಿ ಇರಬಾರದು. ಇದು ಸಾರ್ವಜನಿಕರಿಗೆ ಹೊರೆಯಾಗುವುದರಲ್ಲಿ ಯಾವ ಅನುಮಾನಗಳು ಇಲ್ಲ. ಈಗಾಗಲೇ ಆಸ್ತಿ ತೆರಿಗೆಗೆ ಸಂಬಂಧಿಸಿದಂತೆ ಸರ್ಕಾರಕ್ಕೆ ಪತ್ರ ಬರೆದು ಮರುಪರಿಶೀಲನೆ ನಡೆಸುವಂತೆ ಹಿಂದಿನ ಸಭೆಯಲ್ಲಿ ತೀರ್ಮಾನ ಮಾಡಲಾಗಿತ್ತು. ಆದರೂ ಕೂಡ ಸರ್ಕಾರಕ್ಕೆ ಪತ್ರ ಬರೆದಿಲ್ಲ ಎಂದು ಸದಸ್ಯರು ಆರೋಪಿಸಿದರು.

ಈ ಸಂದರ್ಭದಲ್ಲಿ ಮಧ್ಯಪ್ರವೇಶ ಮಾಡಿದ ಆಡಳಿತ ಪಕ್ಷದ ನಾಯಕ ಚನ್ನಬಸಪ್ಪ, ಅಭಿವ್ಯಕ್ತಿ ಸ್ವಾತಂತ್ರ್ಯದ ಹರಣದ ಬಗ್ಗೆ ನಿಮ್ಮಿಂದ ಪಾಠ ಕಲಿಯಬೇಕಿಲ್ಲ. ಕಾಂಗ್ರೆಸ್ ತುರ್ತು ಪರಿಸ್ಥಿತಿಯನ್ನು ತಂದಿದ್ದು ನೆನಪಿಲ್ಲವೇ ಎಂದು ಇತಿಹಾಸಕ್ಕೆ ಜಾರಿದರು. ಇದರಿಂದ ಆಕ್ರೋಶಗೊಂಡ ಕಾಂಗ್ರೆಸ್ ಸದಸ್ಯರು, ಇದು ಭಾಷಣದ ಸಮಯವಲ್ಲ. ಪ್ರಸ್ತುತದ ಸಮಸ್ಯೆ ಇದೆ. ಹೊರಗಡೆ ಪ್ರತಿಭಟನಾಕಾರರು ಮನವಿ ಸಲ್ಲಿಸಲು ಹೋರಾಟ ನಡೆಸುತ್ತಿದ್ದಾರೆ. ಅವರನ್ನು ಒಳಗೆ ಬಿಡದೇ ಇರುವುದು ಎಷ್ಟರಮಟ್ಟಿಗೆ ಸರಿ? ಅವರಿಂದ ಮನವಿ ಪಡೆಯಲು ಯಾಕೆ ಹಿಂದೇಟು ಹಾಕುತ್ತೀದ್ದೀರಿ ಎಂದು ಪ್ರಶ್ನಿಸಿದರು.

ಆಸ್ತಿ ತೆರಿಗೆಗೆ ಸಂಬಂಧಿಸಿದಂತೆ ಆಡಳಿತ ಮತ್ತು ಪ್ರತಿ ಪಕ್ಷಗಳ ನಡುವೆ ಗದ್ದಲವೇ ಉಂಟಾಗಿ ಒಂದು ಹಂತದಲ್ಲಿ ಕಾಂಗ್ರೆಸ್ ಸದಸ್ಯರು ಬಾವಿಗಳಿದು ಪ್ರತಿಭಟನೆ ನಡೆಸಿದರು. ಆಸ್ತಿ ತೆರಿಗೆಗೆ ಸಂಬಂಧಿಸಿದಂತೆ ಸರ್ಕಾರಕ್ಕೆ ಪತ್ರ ಬರೆಯುವುದರಿಂದ ಹಿಡಿದು ಯಾವ ಕ್ರಮವನ್ನು ತೆಗೆದುಕೊಂಡಿದ್ದೀರಿ ಸಭೆಗೆ ಉತ್ತರ ಹೇಳಿ ಎಂದು ಜೋರುಧ್ವನಿಯಲ್ಲೇ ಕೇಳಿದರು. ಆಡಳಿತ ಪಕ್ಷದ ಸದಸ್ಯರು ಕೂಡ ಪಟ್ಟು ಬಿಡದೇ ಕೂಗಾಟ ನಡೆಸಿದರು. ಸುರೇಖಾ ಮುರಳೀಧರ್, ಸುವರ್ಣಾ ಶಂಕರ್, ಅನಿತಾ ರವಿಶಂಕರ್ ಸೇರಿದಂತೆ ಮಹಿಳಾ ಸದಸ್ಯೆಯರು ಕೂಡ ಜೋರು ಧ್ವನಿಯಲ್ಲಿ ಮಾತನಾಡಿದರು. ಯಾರು ಏನು ಮಾತನಾಡುತ್ತಿದ್ದಾರೆ? ಮೇಯರ್ ಸುನಿತಾ ಅಣ್ಣಪ್ಪ ಉತ್ತರವೇನು? ಆಯುಕ್ತರು ಏನು ಹೇಳುತ್ತಿದ್ದಾರೆ ಎಂಬುದೇ ಅರ್ಥವಾಗುತ್ತಿರಲಿಲ್ಲ.

ಆಯುಕ್ತ ಚಿದಾನಂದ ವಠಾರೆ ಒಂದು ಹಂತದಲ್ಲಿ ವಿರೋಧ ಪಕ್ಷದವರಿಗೆ ಉತ್ತರ ಹೇಳಲು ಮುಂದಾದರು. ಆಸ್ತಿ ತೆರಿಗೆಗೆ ಸಂಬಂಧಿಸಿದಂತೆ ನಾಗರಿಕ ಹಿತರಕ್ಷಣಾ ಸಮಿತಿಯವರು ಸಲ್ಲಿಸಿದ ಮನವಿಯನ್ನು ಸರ್ಕಾರಕ್ಕೆ ತಲುಪಿಸಲಾಗಿದೆ ಎಂದರು. ಇದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ವಿಪಕ್ಷ ಸದಸ್ಯರು, ನಾಗರಿಕ ಹಿತರಕ್ಷಣಾ ಸಮಿತಿಯವರು ಪಾಲಿಕೆಗೆ ಸಲ್ಲಿಸಿದ ಮನವಿ ಬಗ್ಗೆ ನಾವು ಕೇಳುತ್ತಿಲ್ಲ. ಪಾಲಿಕೆ ವತಿಯಿಂದಲೇ ತೀರ್ಮಾನವಾಗಿದ್ದನ್ನು ಸರ್ಕಾರಕ್ಕೆ ತಿಳಿಸಿದ್ದೀರಾ ಎಂದು ಪ್ರಶ್ನೆ ಮಾಡಿದರು.

ಆಡಳಿತ ಪಕ್ಷದ ಸದಸ್ಯರು ಸಮಜಾಯಿಷಿ ನೀಡಲು ಮುಂದಾದಾಗ  ವಿಪಕ್ಷ ಸದಸ್ಯರು ಅದನ್ನು ಕೇಳುವ ಸ್ಥಿತಿಯಲ್ಲಿ ಇರಲಿಲ್ಲ. ಆಸ್ತಿ ತೆರಿಗೆಗೆ ಸಂಬಂಧಿಸಿದಂತೆ ಕಳೆದ ಸಭೆಯಲ್ಲಿಯೇ ತೀರ್ಮಾನಿಸಲಾಗಿದೆ. ಈ ಬಾರಿಯ ಅಜೆಂಡಾದಲ್ಲಿ ಆ ವಿಷಯವನ್ನು ಸೇರಿಸಿಯೇ ಇಲ್ಲ. ಹಾಗಾಗಿ ಚರ್ಚೆಗೆ ಅವಕಾಶವಿಲ್ಲ ಎಂಬ ಆಯುಕ್ತರ ಉತ್ತರಕ್ಕೆ ಆಕ್ರೋಶಗೊಂಡ ಕಾಂಗ್ರೆಸ್ ಸದಸ್ಯರು ಮತ್ತೊಮ್ಮೆ ಬಾವಿಗಿಳಿದು ಪ್ರತಿಭಟನೆ ನಡೆಸಿದರು. ಸರ್ಕಾರಕ್ಕೆ ಕೂಡಲೇ ಪುನರ್ ವಿಮರ್ಶೆ ಮಾಡುವಂತೆ ಪಾಲಿಕೆ ವತಿಯಿಂದ ಪತ್ರ ಬರೆಯಬೇಕು ಎಂದು ಒತ್ತಾಯಿಸಿದರು.

ಈ ಹಂತದಲ್ಲಿ ಪ್ರತಿಭಟನೆ ನಡೆಯುತ್ತಿದ್ದ ಸ್ಥಳಕ್ಕೆ ಎಲ್ಲ ಸದಸ್ಯರು ಹೋಗಿ ಮನವಿ ಪಡೆದು ಬರುವಂತಹ ತುರ್ತು ನಿರ್ಧಾರವನ್ನು ಸಭೆ ತೆಗೆದುಕೊಂಡಿತು. ಬಹುತೇಕ ಎಲ್ಲ ಸದಸ್ಯರು ಪ್ರತಿಭಟನೆ ಸ್ಥಳಕ್ಕೆ ಹೋಗಿ ಮನವಿ ಪಡೆದು ಮತ್ತೆ ಸಭೆ ಆರಂಭಿಸಿದರು. ಆಗಲೂ ಕೂಡ ಗದ್ದಲ, ಗಲಾಟೆ ನಡೆಯಿತು. ನಂತರ ಅಜೆಂಡಾ ಪ್ರಕಾರವೇ ಸಭೆ ನಡೆಸಬೇಕು ಎಂದು ತೀರ್ಮಾನಿಸಿ ಆಸ್ತಿ ತೆರಿಗೆ ವಿಷಯವನ್ನು ಅಲ್ಲಿಗೆ ನಿಲ್ಲಿಸಲಾಯಿತು.

ಸಭೆಯಲ್ಲಿ ಉಪಮೇಯರ್ ಶಂಕರ್ ಗನ್ನಿ,ಆಯುಕ್ತ ಚಿದಾನಂದ ವಟಾರೆ,ಪಾಲಿಕೆ ಆಡಳಿತ ಪಕ್ಷದ ನಾಯಕ ಚನ್ನಬಸಪ್ಪ,ಪಾಲಿಕೆ ಸದಸ್ಯರಾದ ಹೆಚ್.ಸಿ ಯೋಗೇಶ್,ನಾಗರಾಜ್ ಕಂಕಾರಿ,ಬಿ.ಎ ರಮೇಶ್ ಹೆಗಡೆ,ಆರ್.ಸಿ ನಾಯ್ಕ್ ಸೇರಿದಂತೆ ಹಲವರಿದ್ದರು.

ಆಸ್ತಿ ತೆರಿಗೆ ಸಮರ್ಥಿಸಿಕೊಂಡ ಮೇಯರ್

ಜನರು ಸ್ವ ಇಚ್ಛೆಯಿಂದ ತೆರಿಗೆ ಕಟ್ಟುತ್ತಿದ್ದಾರೆ. ವಿಪಕ್ಷದವರು ಸುಮ್ಮನೆ ಅಡ್ಡಿಪಡಿಸುತ್ತಿದ್ದಾರೆ. ಈಗಾಗಲೇ ಸಾರ್ವಜನಿಕರು 18 ಕೋಟಿ ರೂ. ತೆರಿಗೆ ಕಟ್ಟಿದ್ದಾರೆ. ಯಾರೊಬ್ಬರು ಪ್ರಶ್ನೆ ಮಾಡುತ್ತಿಲ್ಲ. ಹಾಗಿದ್ದರೆ ಸಾರ್ವಜನಿಕರು ತೆರಿಗೆ ಏಕೆ ಕಟ್ಟುತ್ತಿದ್ದರು ಎಂದು ಮೇಯರ್ ಸುನಿತಾ ಅಣ್ಣಪ್ಪ ತೆರಿಗೆ ಹೆಚ್ಚಿಸಿರುವುದರನ್ನು ಸಮರ್ಥಿಸಿಕೊಂಡಿದ್ದಾರೆ. ಸರ್ಕಾರದ ತೆರಿಗೆ ನಿಯಮದ ಪ್ರಕಾರವೇ ತೆರಿಗೆ ನೀತಿಯನ್ನು ಪಾಲಿಕೆ ತಂದಿದೆ. ಇದು ಹೆಚ್ಚಿನ ಹೊರೆಯೇನೂ ಆಗುವುದಿಲ್ಲ. ಆಕಸ್ಮಾತ್ ತೀರಾ ಹೊರೆ ಎಂದು ಕಂಡು ಬಂದರೆ ಎಲ್ಲರೂ ಕುಳಿತು ಮಾತಾಡಬಹುದು. ಇದಕ್ಕೆ ವಿಪಕ್ಷದವರು ಏಕೆ ಗದ್ದಲ ಗಲಾಟೆ ಮಾಡುತ್ತಾರೋ ಅರ್ಥವಾಗುತ್ತಿಲ್ಲ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X