ಬಾಲಕಿಯ ಮೇಲೆ ಅತ್ಯಾಚಾರ ನಡೆದ 2 ತಿಂಗಳ ಬಳಿಕ ಎಫ್‌ಐಆರ್ ದಾಖಲು
ಬಾಲಿಯಾ,ಆ.25: ಉತ್ತರಪ್ರದೇಶದ ಬಾಲಿಯಾ ಜಿಲ್ಲೆಯ ಸಿಕಂದರಪುರ ಪ್ರದೇಶದ ಗ್ರಾಮವೊಂದರಲ್ಲಿ ಆರು ಮಂದಿ ದುಷ್ಕರ್ಮಿಗಳು ತನ್ನ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ ಘಟನೆ ನಡೆದ ಎರಡು ತಿಂಗಳ ಬಳಿಕ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆಂದು 17 ವರ್ಷದ ಬಾಲಕಿಯೊಬ್ಬರು ತಿಳಿಸಿದ್ದಾರೆ.
ಎರಡು ತಿಂಗಳ ಹಿಂದೆ ಆರೋಪಿಗಳು ತನ್ನ ಮೇಲೆ ಅತ್ಯಾಚಾರವೆಸಗಿದ್ದು, ಈ ಬಗ್ಗೆ ತಾನು ಎಫ್‌ಐಆರ್ ದಾಖಲಿಸಲು ಯತ್ನಿಸಿದರೂ ಪೊಲೀಸರು ಅದನ್ನು ತಿರಸ್ಕರಿಸಿದ್ದಾಗಿ ಆಕೆ ಹೇಳಿದ್ದಾರೆ.
ಆ ಬಳಿಕ ತಾನು ಪೊಲೀಸ್ ಅಧೀಕ್ಷಕರನ್ನು ಭೇಟಿಯಾಗಿ ದೂರು ನೀಡಿದ ಬಳಿಕವಷ್ಟೇ ಎಫ್‌ಐಆರ್ ದಾಖಲಿಸಲಾಗಿದೆಯೆಂದು ಆಕೆ ಹೇಳಿದ್ದಾರೆ.
ಎಫ್‌ಐಆರ್‌ನಲ್ಲಿ ದೀಪಕ್ ಸಾಹನಿ, ರಿತೇಶ್, ಧೀರಜ್ ದಿನೇಶ್, ದುರ್ಗೇಶ್ ಹಾಗೂ ಶಿವ ದಯಾಳ್ ಎಂಬವರನ್ನು ಆರೋಪಿಗಳೆಂದು ಹೆಸರಿಸಲಾಗಿದ್ದು, ಅವರೆಲ್ಲರೂ 20 ಹಾಗೂ 25 ವರ್ಷಗಳೊಳಗಿನ ವಯಸ್ಸಿನವರಾಗಿದ್ದಾರೆ ಮತ್ತು ಅವರ ವಿರುದ್ಧ ಭಾರತೀಯ ದಂಡಸಂಹಿತೆ ಹಾಗೂ ಪೊಸ್ಕೊ ಕಾಯ್ದೆಯಡಿ ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದವರು ತಿಳಿಸಿದ್ದಾರೆ.
Next Story





