Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೆನೆಪದರ ಗುರುತಿಸಲು ಆರ್ಥಿಕ ಮಾನದಂಡ...

ಕೆನೆಪದರ ಗುರುತಿಸಲು ಆರ್ಥಿಕ ಮಾನದಂಡ ಮಾತ್ರವೇ ಏಕೈಕ ಆಧಾರವಲ್ಲ: ಸುಪ್ರೀಂಕೋರ್ಟ್

ವಾರ್ತಾಭಾರತಿವಾರ್ತಾಭಾರತಿ25 Aug 2021 11:55 PM IST
share
ಕೆನೆಪದರ ಗುರುತಿಸಲು ಆರ್ಥಿಕ ಮಾನದಂಡ ಮಾತ್ರವೇ ಏಕೈಕ ಆಧಾರವಲ್ಲ: ಸುಪ್ರೀಂಕೋರ್ಟ್

ಹೊಸದಿಲ್ಲಿ,ಆ.25: ಹಿಂದುಳಿದ ವರ್ಗಗಳಲ್ಲಿ ಕೆನೆಪದರವನ್ನು ಗುರುತಿಸಲು ಆರ್ಥಿಕ ಮಾನದಂಡವೊಂದೇ ಏಕೈಕ ಆಧಾರವಲ್ಲವೆಂದು ಸುಪ್ರೀಂಕೋರ್ಟ್ ಮಂಗಳವಾರ ಪ್ರತಿಪಾದಿಸಿರುವುದಾಗಿ ಕಾನೂನುಸುದ್ದಿಜಾಲತಾಣ ‘ಬಾರ್ ಆ್ಯಂಡ್ ಬೆಂಚ್’ ವರದಿ ಮಾಡಿದೆ. 

ಹರ್ಯಾಣ ಸರಕಾರ ಹೊರಡಿಸಿರುವ ಹಿಂದುಳಿದ ವರ್ಗಗಳಲ್ಲಿ ಕೆನೆಪದರವನ್ನು ನಿರ್ಧರಿಸುವ ಮಾನದಂಡಗಳನ್ನು ವಿವರಿಸುವ ಅಧಿಸೂಚನೆಯನ್ನು ಕೂಡಾ ಸುಪ್ರೀಂಕೋರ್ಟ್ ತಳ್ಳಿಹಾಕಿದೆ.

ಓಬಿಸಿ ಸಮುದಾಯದಲ್ಲಿ ಉತ್ತಮ ಶೈಕ್ಷಣಿಕ ಹಾಗೂ ಆರ್ಥಿಕ ಸ್ಥಿತಿಗತಿಯನ್ನು ಹೊಂದಿರುವ ಜಾತಿಗಳ ಸದಸ್ಯರನ್ನು ಕೆನೆಪದರವೆಂದು ಗುರುತಿಸಲಾಗುತ್ತಿದೆ. ಕೆನೆಪದರವೆಂದು ಗುರುತಿಸಲಾದವರು ಶೈಕ್ಷಣಿಕ ಕಾರ್ಯಕ್ರಮದಲ್ಲಿ ಹಾಗೂ ಸರಕಾರಿ ಉದ್ಯೋಗದಲ್ಲಿ ಮೀಸಲಾತಿಗೆ ಅರ್ಹರಾಗುವುದಿಲ್ಲ.

 2016ರಲ್ಲಿ ಹೊರಡಿಸಲಾದ ಅಧಿಸೂಚನೆಯಡಿ ಹರ್ಯಾಣ ಹಿಂದುಳಿದ ವರ್ಗಗಳ (ಸರಕಾರಿ ಸೇವೆಗಳಲ್ಲಿ ಹಾಗೂ ಶೈಕ್ಷಣಿಕ ಸಂಸ್ಥೆಗಳಲ್ಲಿ ಪ್ರವೇಶಾತಿ) ಕಾಯ್ದೆಯಡಿ 3 ಲಕ್ಷ ರೂ.ಗಿಂತ ಅಧಿಕ ವಾರ್ಷಿಕ ಆದಾಯವನ್ನು ಹೊಂದಿರುವ ಪೌರರ ಮಕ್ಕಳು ಮೀಸಲಾತಿ ಸೌಲಭ್ಯಗಳನ್ನು ಪಡೆಯಲು ಆದ್ಯತೆಯನ್ನು ನೀಡಲಾಗುತ್ತಿದೆ. ಉಳಿದ ಮೀಸಲಾತಿ ಸೀಟುಗಳು ವಾರ್ಷಿಕವಾಗಿ 3 ಲಕ್ಷ ರೂ.ಗಿಂತ ಅಧಿಕ ಹಾಗೂ 6 ಲಕ್ಷ ರೂ.ಗಿಂತ ಕಡಿಮೆ ಆದಾಯವನ್ನು ಹೊಂದಿರುವವರ ಮಕ್ಕಳಿಗೆ ಲಭ್ಯವಾಗಲಿದೆ.

ಇದೇ ವಿಚಾರವಾಗಿ ಹರ್ಯಾಣ ಸರಕಾರವು 2018ರಲ್ಲಿ ಇನ್ನೊಂದು ಅಧಿಸೂಚನೆಯನ್ನು ಹೊರಡಿಸಿತ್ತು. ಕೆನೆಪದರ ರಹಿತ ವಲಯದಲ್ಲಿ ಉಪವರ್ಗೀಕರಣವನ್ನು ಸೃಷ್ಟಿಸುವ ಸರಕಾರದ ಅಧಿಸೂಚನೆಯು ಅಸಾಂವಿಧಾನಿಕವೆಂದು ಪಂಜಾಬ್ ಹಾಗೂ ಹರ್ಯಾಣ ನ್ಯಾಯಾಲಯ ಪ್ರತಿಪಾದಿಸಿದೆ. ಈ ವರ್ಗೀಕರಣಗಳನ್ನು ಸಮರ್ಥಿಸುವಂತಹ ಯಾವುದೇ ದತ್ತಾಂಶಗಳನ್ನು ಒದಗಿಸಲಾಗಿಲ್ಲವೆಂದು ಅದು ಹೇಳಿದೆ. ಈ ವಿಷಯವಾಗಿ ಹೈಕೋರ್ಟ್, ಸುಪ್ರೀಂಕೋರ್ಟ್‌ಗೆ ಮನವಿಯನ್ನು ಸಲ್ಲಿಸಿತ್ತೆಂದು ಬಾರ್ ಆ್ಯಂಡ್ ಬೆಂಚ್ ವರದಿ ಮಾಡಿದೆ.

ಸುಪ್ರೀಂಕೋಟ್‌ ನ ಈ ಅಧಿಸೂಚನೆಯನ್ನು ಹರ್ಯಾಣದ ಪಿಚ್ರಾ ವರ್ಗ್ (ಹಿಂದುಳಿದ ವರ್ಗ) ಕಲ್ಯಾಣ ಮಹಾಸಭಾ ಸುಪ್ರೀಂಕೋರ್ಟ್‌ನಲ್ಲಿ ಪ್ರಶ್ನಿಸಿತ್ತು. ಕೆನೆಪದರದಿಂದ ವ್ಯಕ್ತಿಯ ಹೊರಪಡಿಸುವಿಕೆ ಅಥವಾ ಗುರುತಿಸುವಿಕೆಯ ಮಾನದಂಡವನ್ನು ನಿಗದಿಪಡಿಸಲು ಆರ್ಥಿಕತೆಯಲ್ಲದೆ ಇತರ ಅಂಶಗಳನ್ನೂ ಪರಿಗಣಿಸಬೇಕಾದ ಅಗತ್ಯವಿದೆಯೆಂದು ಅದು ಮನವಿ ಮಾಡಿತ್ತು.ಅರ್ಜಿಯ ಆಲಿಕೆಯ ಸಂದರ್ಭ ಸುಪ್ರೀಂಕೋರ್ಟ್ ನ್ಯಾಯಪೀಠವು, ಹಿಂದುಳಿದವರ್ಗಗಳಿಗೆ ಸೇರಿದ ಕೆನೆಪದರವನ್ನು ನಿರ್ಧರಿಸುವ ಮಾನದಂಡವಾದ ಇಂದಿರಾ ಸಾಹ್ನಿ ವರ್ಸಸ್ ಕೇಂದ್ರ ಸರಕಾರದ ಪ್ರಕರಣವನ್ನು ಉಲ್ಲೇಖಿಸಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X