ಉಳ್ಳಾಲ: ಸಿಲಿಂಡರ್ ದರ ಏರಿಕೆ ವಿರುದ್ಧ ಪ್ರತಿಭಟನೆ

ಉಳ್ಳಾಲ : ಕೇಂದ್ರ ಸರ್ಕಾರ ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ ಮಾಡಿರುವುದನ್ನು ವಿರೋಧಿಸಿ ಇದರ ಭಾಗವಾಗಿ ಎಸ್ ಡಿಪಿಐ ಮಂಗಳೂರು ಉಳ್ಳಾಲ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ದೇರಳಕಟ್ಟೆ ಜಂಕ್ಷನ್ ನಲ್ಲಿ ಪ್ರತಿಭಟನೆ ಗುರುವಾರ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್ ಡಿಪಿಐ ಮಂಗಳೂರು ವಿಧಾನಸಭಾ ಕ್ಷೇತ್ರ ಸಮಿತಿ ಅಧ್ಯಕ್ಷ ಅಬ್ಬಾಸ್ ಕಿನ್ಯಾ ವಹಿಸಿದ್ದರು.
ಎಸ್ಡಿಪಿಐ ಕರ್ನಾಟಕ ರಾಜ್ಯ ಮಾಧ್ಯಮ ಉಸ್ತುವಾರಿ ಅಕ್ರಮ್ ಹಸನ್, ಪ್ರತಿಭಟನಾ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.
ಎಸ್ಡಿಪಿಐ ದಕ್ಷಿಣ ಕನ್ನಡ ಜಿಲ್ಲಾ ಉಪಾಧ್ಯಕ್ಷರಾದ ಇಕ್ಬಾಲ್ ಐಎಂ ಆರ್ ಮಂಗಳೂರು ವಿಧಾನಸಭಾ ಕ್ಷೇತ್ರ ಕಾರ್ಯದರ್ಶಿ ಅಬ್ದುಲ್ ಲತೀಫ್ ಕೋಡಿಜಾಲ್ ಸ್ವಾಗತಿಸಿ ಕ್ಷೇತ್ರ ಸಮಿತಿ ಸದಸ್ಯರಾದ ಇಸ್ಮಾಯಿಲ್ ಟಿ ವಂದಿಸಿದರು. ಕಾರ್ಯಕ್ರಮದಲ್ಲಿ ಎಸ್ಡಿಪಿಐ ಮಂಗಳೂರು ವಿಧಾನಸಭಾ ಕ್ಷೇತ್ರ ಸಮಿತಿ ಪದಾಧಿಕಾರಿಗಳಾದ ಇಷಾ೯ದ್ ಅಜ್ಜಿನಡ್ಕ, ನಾಸೀರ್ (ಒಮೇರಾ), ಪಾವೂರು ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಆನ್ಸಾರ್ ಇನೋಳಿ ಗ್ರಾಮ ಪಂಚಾಯತ್ ಸದಸ್ಯರು ಭಾಗವಹಿಸಿದರು.






