Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮಾಂದಲಪಟ್ಟಿಯಲ್ಲಿ ಹೆಲಿಕಾಪ್ಟರ್ ಹಾರಾಟ:...

ಮಾಂದಲಪಟ್ಟಿಯಲ್ಲಿ ಹೆಲಿಕಾಪ್ಟರ್ ಹಾರಾಟ: ಕೊಡಗು ರಕ್ಷಣಾ ವೇದಿಕೆ ಆಕ್ಷೇಪ, ಅರಣ್ಯಾಧಿಕಾರಿಗಳಿಗೆ ದೂರು

ವಾರ್ತಾಭಾರತಿವಾರ್ತಾಭಾರತಿ26 Aug 2021 11:31 PM IST
share
ಮಾಂದಲಪಟ್ಟಿಯಲ್ಲಿ ಹೆಲಿಕಾಪ್ಟರ್ ಹಾರಾಟ: ಕೊಡಗು ರಕ್ಷಣಾ ವೇದಿಕೆ ಆಕ್ಷೇಪ, ಅರಣ್ಯಾಧಿಕಾರಿಗಳಿಗೆ ದೂರು

ಮಡಿಕೇರಿ ಆ.26 : ಅಭಯಾರಣ್ಯವಾಗಿರುವ ಮಾಂದಲಪಟ್ಟಿಯಲ್ಲಿ ಜಾಲಿ ರೈಡ್ ಹೆಸರಿನಲ್ಲಿ ಕಾನೂನು ಬಾಹಿರವಾಗಿ ಹೆಲಿಕಾಫ್ಟರ್ ಹಾರಾಟವಾಗುತ್ತಿದ್ದು, ಇದರಿಂದ ಪರಿಸರ ಮತ್ತು ವನ್ಯಜೀವಿಗಳ ಮೇಲೆ ದುಷ್ಪರಿಣಾಮ ಬೀರಲಿದೆ ಎಂದು ಕೊಡಗು ರಕ್ಷಣಾ ವೇದಿಕೆ ಆರೋಪಿಸಿದೆ. ಈ ಕುರಿತು ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ದೂರು ನೀಡಿರುವ ಸಂಘಟನೆಯ ಪ್ರಮುಖರು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ. 

ನಗರದ ಅರಣ್ಯ ಭವನಕ್ಕೆ ತೆರಳಿದ ಕೊರವೇ ಅಧ್ಯಕ್ಷ ಪವನ್ ಪೆಮ್ಮಯ್ಯ ನೇತೃತ್ವದ ನಿಯೋಗ ಅಧಿಕಾರಿಗಳಿಗೆ ದೂರು ನೀಡಿ ಹೆಲಿಕಾಫ್ಟರ್ ಹಾರಾಟದಿಂದ ಆಗಬಹುದಾದ ಅನಾಹುತಗಳ ಬಗ್ಗೆ ವಿವರಿಸಿದರು. 

ಮಾಂದಲಪಟ್ಟಿಯಲ್ಲಿ ಪ್ರಕೃತಿ ವರವಾಗಿ ನೀಡಿದ ನೀಲಕುರುಂಜಿ ಪುಷ್ಪರಾಶಿಯನ್ನೇ ಬಂಡವಾಳ ಮಾಡಿಕೊಳ್ಳಲು ಹೊರಟಿರುವ ಖಾಸಗಿ ಸಂಸ್ಥೆಯೊಂದು ಜಾಲಿರೈಡ್ ಹೆಸರಿನಲ್ಲಿ ಲಕ್ಷಾಂತರ ರೂ.ಗಳನ್ನು ಸಂಗ್ರಹಿಸಿ ಪ್ರವಾಸಿಗರನ್ನು ಹೆಲಿಕಾಫ್ಟರ್ ಮೂಲಕ ಕರೆತಂದು ಹಾರಾಟ ನಡೆಸುತ್ತಿದೆ. ಅಭಯಾರಣ್ಯ ವ್ಯಾಪ್ತಿಗೆ ಒಳಪಡುವ ಮಾಂದಪಟ್ಟಿಯಲ್ಲಿ ಪೂರ್ವಾನುಮತಿ ಇಲ್ಲದೆ ಹೆಲಿಕಾಫ್ಟರ್ ಹಾರಾಡುವುದು ಕಾನೂನು ಬಾಹಿರವಾಗಿದೆ ಎಂದು ಆರೋಪಿಸಿದರು.

 ಇತ್ತೀಚೆಗೆ ಈ ಸಂಸ್ಥೆ ಜಾಹೀರಾತನ್ನು ನೀಡಿ ಮಾಂದಲಪಟ್ಟಿಯಲ್ಲಿ ಅರಳಿರುವ ನೀಲಕುರಂಜಿ ಹೂವಿನ ಆಕಾಶ ದರ್ಶನ ಮಾಡಿಸುತ್ತೇವೆ ಎಂದು ಪ್ರಚಾರ ನೀಡಿದೆ. ಇದಕ್ಕೆ ಅನುಮತಿ ನೀಡಿದವರು ಯಾರು ಎಂದು ಪ್ರಶ್ನಿಸಿರುವ ಪವನ್ ಪೆಮ್ಮಯ್ಯ, ಪ್ರವಾಸಿಗರು ಭೂಮಾರ್ಗದ ಮೂಲಕ ಬರಲು ನಮ್ಮ ಆಕ್ಷೇಪವಿಲ್ಲ, ಆದರೆ ಆಕಾಶಮಾರ್ಗದಲ್ಲಿ ಅಭಯಾರಣ್ಯದಲ್ಲಿ ಸಂಚರಿಸುವುದಕ್ಕೆ ವಿರೋಧವಿದೆ ಎಂದರು.

 ಕೆಲವು ವರ್ಷಗಳ ಹಿಂದೆ ಪಶ್ಚಿಮಘಟ್ಟ ಮೂಲನಿವಾಸಿಗಳ ಸಂಘನೆಯೊಂದು ಮಾಂದಲಪಟ್ಟಿಯಲ್ಲಿ ವಾರ್ಷಿಕ ಕ್ರೀಡಾಕೂಟವನ್ನು ನಡೆಸಿ ಗ್ರಾಮೀಣ ಭಾಗದ ಜನರಲ್ಲಿ ಕ್ರೀಡೋತ್ಸಾಹವನ್ನು ತುಂಬುತ್ತಿತ್ತು. ನಂತರದ ವರ್ಷಗಳಲ್ಲಿ ಅಭಯಾರಣ್ಯ ಎನ್ನುವ ಕಾರಣಕ್ಕಾಗಿ ಈ ಕ್ರೀಡಾಕೂಟಕ್ಕೆ ಅರಣ್ಯ ಇಲಾಖೆ ನಿರ್ಬಂಧ ಹೇರಿತು. 

ಆದರೆ ಇಂದು ಇದೇ ಅರಣ್ಯ ಇಲಾಖೆ ಮಾಂದಲಪಟ್ಟಿಯನ್ನು ಪ್ರವಾಸಿತಾಣವನ್ನಾಗಿ ಪ್ರತಿಬಿಂಬಿಸಿ ಸಾವಿರಾರು ಪ್ರವಾಸಿಗರ ಪ್ರವೇಶಕ್ಕೆ ಅನುಕೂಲ ಕಲ್ಪಿಸಿದೆ. ಅಲ್ಲದೆ ಕಾಮಗಾರಿಗಳನ್ನು ಕೂಡ ನಡೆಸಿದೆ. ಇದೀಗ ಹೆಲಿಕಾಫ್ಟರ್ ಹಾರಾಟ ಆರಂಭಗೊಂಡಿದ್ದು, ನಿಯಮಗಳನ್ನು ಸಂಪೂರ್ಣವಾಗಿ ಗಾಳಿಗೆ ತೂರಲಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಮಾಂದಲಪಟ್ಟಿಗೆ ಕೊರವೇ ನಿಯೋಗ ಭೇಟಿ ನೀಡಿದ ಸಂದರ್ಭ ಅರಣ್ಯ ಸಿಬ್ಬಂದಿಗಳು “ನಿಮ್ಮ ಬಳಿ ಡ್ರೋಣ್ ಇದೆಯೇ” ಎಂದು ನಮ್ಮನ್ನು ಪರಿಶೀಲಿಸಿದ್ದಾರೆ. ಇಷ್ಟು ಕಾಳಜಿ ತೋರುವ ಅರಣ್ಯ ಇಲಾಖೆ ಈಗ ಹೆಲಿಕಾಫ್ಟರ್ ಹಾರಾಟಕ್ಕೆ ಹೇಗೆ ಅವಕಾಶ ನೀಡಿತು ಎಂದು ಪ್ರಶ್ನಿಸಿದರು. 
ತಕ್ಷಣ ಹೆಲಿಕಾಫ್ಟರ್ ಹಾರಾಟವನ್ನು ಸ್ಥಗಿತಗೊಳಿಸಬೇಕು ಮತ್ತು ನಿಯಮ ಉಲ್ಲಂಘಿಸಿದ ಸಂಸ್ಥೆ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.

ಮತ್ತೆ ಹೆಲಿಕಾಫ್ಟರ್ ಹಾರಾಟ ಕಂಡು ಬಂದರೆ ತೀವ್ರ ರೀತಿಯ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಪವನ್ ಪೆಮ್ಮಯ್ಯ ಎಚ್ಚರಿಕೆ ನೀಡಿದರು.
ಕೊರವೇ ನಿರ್ದೇಶಕ ಪಾಪುರವಿ, ಮಡಿಕೇರಿ ನಗರ ಘಟಕದ ಸಂಚಾಲಕರುಗಳಾದ ಆರ್.ವಿನೋದ್, ರಾಜುಕೀರ್ತಿ ಮತ್ತಿತರರು ಮನವಿ ಸಲ್ಲಿಸುವ ಸಂದರ್ಭ ಹಾಜರಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X