ಮೈಸೂರು ಸಾಮೂಹಿಕ ಅತ್ಯಾಚಾರ ಪ್ರಕರಣ; ಡಿಜಿಪಿ ಮೇಲುಸ್ತುವಾರಿಯಲ್ಲಿ ತನಿಖೆ: ಬೊಮ್ಮಾಯಿ

ಬೆಂಗಳೂರು, ಆ.27: ಮೈಸೂರಿನಲ್ಲಿ ವಿದ್ಯಾರ್ಥಿನಿ ಮೇಲೆ ನಡೆದಿರುವ ಸಾಮೂಹಿಕ ಅತ್ಯಾಚಾರ ಪ್ರಕರಣದ ತನಿಖೆ ಪ್ರಗತಿಯಲ್ಲಿದೆ. ರಾಜ್ಯ ಪೊಲೀಸ್ ಮಹಾನಿರ್ದೇಶಕರ (ಡಿಜಿಪಿ) ಮೇಲುಸ್ತುವಾರಿಯಲ್ಲಿ ತನಿಖೆ ನಡೆಯಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ತಮ್ಮ ನಿವಾಸದ ಬಳಿ ಇಂದು ಬೆಳಗ್ಗೆ ಸುದ್ದಿಗಾರರ ಜತೆ ಮಾತನಾಡಿದ ಅವರು, ಡಿಜಿಪಿ ಪ್ರವೀಣ್ ಸೂದ್ ಅವರು ಮೈಸೂರಿಗೆ ತೆರಳುತ್ತಿದ್ದು, ತನಿಖೆ ಕುರಿತು ಪರಿಶೀಲನೆ ನಡೆಸಲಿದ್ದಾರೆ ಎಂದರು.
ತನಿಖೆಯ ಪ್ರಗತಿ ಬಗ್ಗೆ ನೇರವಾಗಿ ತಮಗೆ ವರದಿ ನೀಡುವಂತೆ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದರು.
Next Story





