ಬೆಳಗಾವಿಯಲ್ಲಿ ಸಾಮೂಹಿಕ ಅತ್ಯಾಚಾರ ಪ್ರಕರಣ: ನಾಲ್ವರು ಆರೋಪಿಗಳ ಬಂಧನ

ಬೆಳಗಾವಿ, ಆ.27: ಮೈಸೂರಿನಲ್ಲಿ ವಿದ್ಯಾರ್ಥಿನಿ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣ ರಾಜ್ಯಾದ್ಯಂತ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಇದರ ಬೆನ್ನಲ್ಲೇ ಬೆಳಗಾವಿ ಜಿಲ್ಲೆಯ ಗ್ರಾಮವೊಂದರಲ್ಲಿ 15 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ ಪರಾರಿಯಾಗಿದ್ದ ನಾಲ್ವರು ಆರೋಪಿಗಳನ್ನು ಬೆಳಗಾವಿಯಲ್ಲಿ ಘಟಪ್ರಭಾ ಪೊಲೀಸರು ಬಂಧಿಸಿದ್ದಾರೆ.
ಗೋಕಾಕ್ ತಾಲೂಕಿನ ಘಟಪ್ರಭಾ ಪೊಲೀಸ್ ಠಾಣೆಗೆ ಬಾಲಕಿಯ ಪೋಷಕರು ಆ.26ರಂದು ದೂರು ದಾಖಲಿಸಿದ್ದರು. ಈ ದುರ್ಘಟನೆ 20 ದಿನಗಳ ಹಿಂದೆಯೇ ನಡೆದಿದೆ ಎಂದು ಪೋಷಕರು ದೂರಿನಲ್ಲಿ ಉಲ್ಲೇಖಿಸಿದ್ದರು. ಗ್ರಾಮದಲ್ಲಿ ಜಮೀನಿಗೆ ಹೋದ ವೇಳೆಯಲ್ಲಿ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿತ್ತು.
ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ವಿಶೇಷ ತಂಡ ರಚಿಸಿ ಆರೋಪಿಗಳಿಗಾಗಿ ಶೋಧ ಆರಂಭಿಸಿ ನಾಲ್ವರನ್ನು ಬಂಧಿಸಿದ್ದಾರೆ. ಈ ಬಗ್ಗೆ ಬೆಳಗಾವಿ ಎಸ್.ಪಿ.ಲಕ್ಷ್ಮಣ ನಿಂಬರಗಿ ಮಾಹಿತಿ ನೀಡಿದ್ದಾರೆ.
Next Story





