ಮಂಗಳೂರು, ಆ. 27: ದ.ಕ. ಜಿಲ್ಲಾಡಳಿತ, ಜಿಪಂ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಆ.30ರ ಬೆಳಗ್ಗೆ 10:30ಕ್ಕೆ ನಗರದ ಜಿಲ್ಲಾಧಿಕಾರಿಯ ಕಚೇರಿ ಸಭಾಂಗಣದಲ್ಲಿ ಶ್ರೀಕೃಷ್ಣ ಜಯಂತಿಯನ್ನು ಸರಳವಾಗಿ ಆಚರಿಸಲಾಗುತ್ತಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.