Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಲೈಂಗಿಕ ಅಲ್ಪಸಂಖ್ಯಾತರು, ಕಾರ್ಯಕರ್ತರ...

ಲೈಂಗಿಕ ಅಲ್ಪಸಂಖ್ಯಾತರು, ಕಾರ್ಯಕರ್ತರ ರಕ್ಷಣೆ, ಏಳ್ಗೆಗೆ ಪ್ರಣಾಳಿಕೆಯಲ್ಲಿ ಆದ್ಯತೆ: ಡಿ.ಕೆ.ಶಿವಕುಮಾರ್

ವಾರ್ತಾಭಾರತಿವಾರ್ತಾಭಾರತಿ27 Aug 2021 10:00 PM IST
share
ಲೈಂಗಿಕ ಅಲ್ಪಸಂಖ್ಯಾತರು, ಕಾರ್ಯಕರ್ತರ ರಕ್ಷಣೆ, ಏಳ್ಗೆಗೆ ಪ್ರಣಾಳಿಕೆಯಲ್ಲಿ ಆದ್ಯತೆ: ಡಿ.ಕೆ.ಶಿವಕುಮಾರ್

ಬೆಂಗಳೂರು, ಆ. 27: `ಲೈಂಗಿಕ ಅಲ್ಪಸಂಖ್ಯಾತರು, ಕಾರ್ಯಕರ್ತರ ರಕ್ಷಣೆ, ಏಳಿಗೆ, ಸ್ವಾಭಿಮಾನ, ಗೌರವದ ಬದುಕಿಗೆ ಪಕ್ಷದ ಪ್ರಣಾಳಿಕೆಯಲ್ಲಿ ಆದ್ಯತೆ ನೀಡಲಾಗುವುದು' ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಭರವಸೆ ನೀಡಿದ್ದಾರೆ.

ಶುಕ್ರವಾರ ಲೈಂಗಿಕ ಅಲ್ಪಸಂಖ್ಯಾತರು, ಕಾರ್ಯಕರ್ತರು, ಹೋರಾಟಗಾರರ ಜತೆ ಸಂವಾದ ನಡೆಸಿದ ಅವರು, `ಲೈಂಗಿಕ ಕಾರ್ಯಕರ್ತರಿಗೆ ಕಿರುಕುಳ ನೀಡುವ ಪೊಲೀಸರು ಮತ್ತಿತರರ ವಿರುದ್ಧ ಕಠಿಣ ಕ್ರಮದ ಕಾನೂನು, ಸ್ವಯಂ ಉದ್ಯೋಗಕ್ಕೆ ಆರ್ಥಿಕ ನೆರವು, ಮನೆ, ಮಕ್ಕಳ ಶಿಕ್ಷಣಕ್ಕೆ ನೆರವು, ಆರೋಗ್ಯ ಹಾಗೂ ಪಿಂಚಣಿ ಸೌಲಭ್ಯ ಒದಗಿಸುವ ಭರವಸೆ ಪ್ರಣಾಳಿಕೆಯಲ್ಲಿ ಇರಲಿದೆ' ಎಂದು ತಿಳಿಸಿದರು.

`ಈ ವರ್ಗದವರಿಗೆ ಸಮಾಜದಲ್ಲಿ ಗೌರವ ಸಿಗಬೇಕು ಹಾಗೂ ಅವರ ಸ್ವಾಭಿಮಾನದ ಬದುಕಿಗೆ ಅವಕಾಶ ಕಲ್ಪಿಸಿಕೊಡಲು ಪ್ರಾಮಾಣಿಕ ಪ್ರಯತ್ನ ಮಾಡುವುದು. ಲೈಂಗಿಕ ಕಾರ್ಯಕರ್ತೆಯರಿಗೆ ಕಾನೂನಿನಲ್ಲಿ ಅವಕಾಶ ಕಲ್ಪಿಸಿಕೊಡಲಾಗಿದೆಯಾದರೂ ಅವರು ಸಾಕಷ್ಟು ಸಮಸ್ಯೆ ಎದುರಿಸುತ್ತಿದ್ದಾರೆ. ಇಲ್ಲಿ ಬಡತನ ಯಾರಿಗೆ ಇದೆಯೋ, ಯಾರು ಜೀವನದಲ್ಲಿ ಮೋಸ ಹೋಗಿದ್ದಾರೋ ಅವರಿಗೆ ಹೆಚ್ಚು ತೊಂದರೆ ಆಗುತ್ತಿದೆ. ಹಣವಂತರಿಗೆ ರಕ್ಷಣೆ ಸಿಗುತ್ತಿದೆ. ನಿಮ್ಮ ಧ್ವನಿಯಾಗಲು ಇಂದು ನಿಮ್ಮ ಜತೆ ಸಂವಾದ ಕಾರ್ಯಕ್ರಮ ಹಮ್ಮಿಕೊಂಡಿದ್ದೇನೆ' ಎಂದರು.

`ನೀವು ಸಮಾಜದಲ್ಲಿ ಗೌರವ, ಸ್ವಾಭಿಮಾನದಿಂದ ಬದುಕುವಂತಾಗಬೇಕು. ನಿಮಗೆ ಕಿರುಕುಳ ನೀಡುತ್ತಿರುವವರ ವಿರುದ್ಧ ಕ್ರಮ ಕೈಗೊಳ್ಳಲು ಕಠಿಣ ಕಾನೂನಿನ ಅಗತ್ಯವಿದೆ. ಪೊಲೀಸರೇ ಆಗಲಿ, ಬೇರೆಯವರೇ ಆಗಲಿ ನಿಮಗೆ ಕಿರುಕುಳ ನೀಡಿದವರಿಗೆ ಕ್ರಮ ಕೈಗೊಳ್ಳುವ ಕಾನೂನು ತರಬೇಕಿದೆ. ಈ ವಿಚಾರವಾಗಿ ಮುಂದೆ ನಿಮ್ಮ ಸಂಘಟನೆಗಳ ಮುಖಂಡರ ಜತೆ ಮಾತನಾಡಿ, ನಮ್ಮ ಪಕ್ಷದ ಪ್ರಣಾಳಿಕೆಯಲ್ಲಿ ಈ ವಿಚಾರ ಅಳವಡಿಸುತ್ತೇವೆ' ಎಂದು ತಿಳಿಸಿದರು. 

`ನೀವು ಮತ ಹಾಕಿದ ತಕ್ಷಣ ನಾವು ಅಧಿಕಾರಕ್ಕೆ ಬರುತ್ತೇವೆ ಎಂದಲ್ಲ. ನಾವು ಅಧಿಕಾರಕ್ಕೆ ಬಂದ ನಂತರ ನಮಗೂ, ನಿಮಗೂ ಸಮಾಧಾನ ಸಿಗುವ ಕಾರ್ಯಕ್ರಮ ಅನುಷ್ಠಾನಕ್ಕೆ ಬರಬೇಕು. ನಾವು ಎಲ್ಲ ವರ್ಗದ ಜನರನ್ನು ರಕ್ಷಣೆ ಮಾಡಬೇಕು. ನಿಮ್ಮ ವರ್ಗದ ಅನೇಕರು ಗುರುತಿಸಿಕೊಳ್ಳುವುದಿಲ್ಲ. ಕೆಲವರು ಮಾತ್ರ ಧೈರ್ಯವಾಗಿ ಗುರುತಿಸಿಕೊಳ್ಳುತ್ತಿದ್ದೀರಿ. ಹೀಗಾಗಿ ಈ ವಿಚಾರವಾಗಿ ಕ್ರಿಯಾ ಯೋಜನೆ (ಪ್ಲಾನ್ ಆಫ್ ಆಕ್ಷನ್) ರೂಪಿಸಬೇಕಿದೆ' ಎಂದು ಶಿವಕುಮಾರ್ ತಿಳಿಸಿದರು.

`ನಮ್ಮಲ್ಲಿ ಮಹಿಳಾ ಮಹಾ ಪಂಚಾಯ್ತಿ ಎಂಬ ಕಾರ್ಯಕ್ರಮ ರೂಪಿಸಿದ್ದು, ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಲ್ಲೂ ಹೆಣ್ಣು ಮಕ್ಕಳ ಜತೆ ಚರ್ಚಿಸಲು ಸೂಚಿಸಿದ್ದೇನೆ. ಈ ಸಂವಾದದ ಮೂಲಕ ನಿಮ್ಮ ಕಷ್ಟ, ನೋವು ನನಗೆ ಅರ್ಥವಾಗಿದೆ. ನಿಮ್ಮ ಪರ ಧ್ವನಿ ಎತ್ತಲು ಸಾಧ್ಯವಿರುವಿಡೆ ಧ್ವನಿ ಎತ್ತಲು ಪ್ರಯತ್ನಿಸುತ್ತೇನೆ. ನಿಮ್ಮ ಸಮಸ್ಯೆ ಹಾಗೂ ಬೇಡಿಕೆಗಳನ್ನು ಕೇಳಿಸಿ, ಮನವರಿಕೆ ಮಾಡಿಕೊಂಡಿದ್ದೇನೆ' ಎಂದು ಶಿವಕುಮಾರ್ ಹೇಳಿದರು.

`ನಾನು ಜಯಮಾಲಾ ಅವರ ಅಧ್ಯಕ್ಷತೆಯ ಸಮಿತಿ ಹಾಗೂ ಇತರ ಸಮಿತಿಗಳ ವರದಿ ಪರಿಶೀಲಿಸುತ್ತೇನೆ. ಮುಂದಿನ ದಿನಗಳಲ್ಲಿ ಇನ್ನು ಹೆಚ್ಚಿನ ಸಂಖ್ಯೆಯಲ್ಲಿ ನಿಮ್ಮನ್ನು ಭೇಟಿ ಮಾಡಿ ಚರ್ಚೆ ಮಾಡುತ್ತೇನೆ ಎಂದರು. ಸಂವಾದ ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷರ ಮುಂದೆ ತಮ್ಮ ಸಮಸ್ಯೆ, ನೋವುಗಳನ್ನು ಹಂಚಿಕೊಂಡ ಹಲವು ಮಹಿಳೆಯರು, ತಾವು ದಿನನಿತ್ಯ ಪೊಲೀಸರಿಂದ ಎದುರಿಸುತ್ತಿರುವ ಸಮಸ್ಯೆ, ದೌರ್ಜನ್ಯವನ್ನು ಹೇಳಿಕೊಂಡು ಕಣ್ಣೀರಿಟ್ಟರು.

ಇನ್ನು ಕೋವಿಡ್ ಸಮಯದಲ್ಲಿ ಜೀವನ ನಡೆಸಲು ಅನುಭವಿಸಿದ ಸಂಕಟ, ಸಮಾಜದಲ್ಲಿ ಎದುರಿಸುವ ಅಪಮಾನ, ಕುಟುಂಬದ ಜವಾಬ್ದಾರಿ ನಿಭಾಯಿಸಲು ಆಗುತ್ತಿರುವ ಪರದಾಟ ಎಲ್ಲವನ್ನು ಎಳೆಎಳೆಯಾಗಿ ವಿವರಿಸಿದರು. ಈ ಸಂವಾದ ಕಾರ್ಯಕ್ರಮದಲ್ಲಿ ಲೈಂಗಿಕ ಅಲ್ಪಸಂಖ್ಯಾತರ ಹಕ್ಕುಗಳ ಖ್ಯಾತ ಹೋರಾಟಗಾರ್ತಿ ಅಕೈ ಪದ್ಮಶಾಲಿ, ಸಾಧನಾ ಮಹಿಳಾ ಸಂಘದ ಗೀತಾ, ಮಧು ಹಾಗೂ ವಕೀಲರಾದ ಸಭಾ ಅವರು ಮಾತನಾಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X