Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಪತ್ರಕರ್ತ ಗುಡಿಹಳ್ಳಿ ನಾಗರಾಜ ಅವರಿಗೆ...

ಪತ್ರಕರ್ತ ಗುಡಿಹಳ್ಳಿ ನಾಗರಾಜ ಅವರಿಗೆ ಕಾರ್ಯನಿರತ ಪತ್ರಕರ್ತರ ಸಂಘದಿಂದ ಸಂತಾಪ

ವಾರ್ತಾಭಾರತಿವಾರ್ತಾಭಾರತಿ27 Aug 2021 10:39 PM IST
share
ಪತ್ರಕರ್ತ ಗುಡಿಹಳ್ಳಿ ನಾಗರಾಜ ಅವರಿಗೆ ಕಾರ್ಯನಿರತ ಪತ್ರಕರ್ತರ ಸಂಘದಿಂದ ಸಂತಾಪ

ಬೆಂಗಳೂರು, ಆ.27: ಬಹುಮುಖ ಪ್ರತಿಭೆಯ ಗುಡಿಹಳ್ಳಿ ನಾಗರಾಜ ಅವರು ಪತ್ರಕರ್ತರಾಗಿ, ಬಂಡಾಯ ಸಾಹಿತ್ಯ ಸಂಘಟನೆ ಸಂಚಾಲಕರಾಗಿ, ರಂಗಕರ್ಮಿಯಾಗಿ, ಪತ್ರಕರ್ತರ ಸಂಘಟನೆಗೂ ಮಹತ್ವದ ಕೊಡುಗೆ ನೀಡಿದ್ದಾರೆ ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಹೇಳಿದರು.

ಶುಕ್ರವಾರ ನಗರದಲ್ಲಿರುವ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಕಚೇರಿಯಲ್ಲಿ ಏರ್ಪಡಿಸಿದ್ದ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಗುಡಿಹಳ್ಳಿ ಅವರು ಪತ್ರಕರ್ತರಾಗಿ ರಂಗಭೂಮಿ ಬಗ್ಗೆ ಆಸಕ್ತಿ ಹೊಂದಿ ಅನೇಕ ಕಲಾವಿದರನ್ನು ಬೆಳಕಿಗೆ ತಂದರು. ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ತಮ್ಮ ಅಧಿಕಾರದ ಅವಧಿಯಲ್ಲಿ ಎರಡು ರಾಜ್ಯ ಸಮ್ಮೇಳನಗಳನ್ನು ಯಶಸ್ವಿಯಾಗಿ ಮಾಡಿದ್ದರು. ಅವರೊಬ್ಬ ಸಂಘಟನಾ ಚತುರರಾಗಿ ಜನಾನುರಾಗಿದ್ದರು ಎಂದು ಸ್ಮರಿಸಿದರು.

ಪತ್ರಕರ್ತ, ಸಾಹಿತಿ ಆರ್.ಜಿ.ಹಳ್ಳಿ ನಾಗರಾಜ ಮಾತನಾಡಿ, ಚಿತ್ರದುರ್ಗದಲ್ಲಿ ಅವರು ಪತ್ರಕರ್ತರಾಗಿ ಕಾರ್ಯ ನಿರ್ವಹಿಸುವಾಗ ರಾಜ್ಯಮಟ್ಟದ ಬಂಡಾಯ ಸಾಹಿತ್ಯ ಸಮ್ಮೇಳನ ಯಶಸ್ವಿಯಾಗಿ ಮಾಡಿ, ಅಲ್ಲಿನ ಪ್ರಬಂಧಗಳನ್ನು ಪುಸ್ತಕ ರೂಪದಲ್ಲಿ ಹೊರತಂದು ದಾಖಲೆ ಉಳಿಸಿ ಹೋಗಿದ್ದಾರೆ. ಅವರ ಬದುಕಿನ ವೈಯಕ್ತಿಕ ಸಮಸ್ಯೆಗಳಿಂದ ಮಾನಸಿಕವಾಗಿ, ದೈಹಿಕವಾಗಿ ಕುಗ್ಗಿ ಹೋಗಿದ್ದರು. ರಂಗಭೂಮಿ ಬೆಳವಣಿಗೆಗೆ ಪ್ರಾಮಾಣಿಕ ಕೆಲಸ ಮಾಡಿದರು ಎಂದು ನೆನೆದರು.

ರಂಗ ಕಲಾವಿದೆ ಮಾಲತಿಶ್ರೀ ಮೈಸೂರು ಮಾತನಾಡಿ, ಉತ್ತರ ಕರ್ನಾಟಕದ ಅನೇಕ ಕಲಾವಿದರನ್ನು ಮಾಧ್ಯಮದ ಮೂಲಕ ಪರಿಚಯಿಸಿ ಅವರನ್ನು ಬೆಳಕಿಗೆ ತಂದರು. ಬರೆಯದೇ ಇದ್ದ ನನ್ನಿಂದ ಆತ್ಮಚರಿತ್ರೆ ಬರೆಯಿಸಿ ವಾರಪತ್ರಿಕೆಯಲ್ಲಿ ಪ್ರಕಟವಾಗುವಂತೆ ಮಾಡಿ ಪ್ರೋತ್ಸಾಹಿಸಿದ್ದ ನಿಜವಾದ ಪತ್ರಕರ್ತ. ವೃತ್ತಿ ರಂಗಭೂಮಿಯ ಹಾಗೂ ಹವ್ಯಾಸಿ ರಂಗಭೂಮಿಗೆ ಕೊಂಡಿಯಾಗಿ ಕೆಲಸ ಮಾಡಿದರು ಎಂದು ನೆನಪು ಮಾಡಿಕೊಂಡರು.

ಹಿರಿಯ ಪತ್ರಕರ್ತೆ ಮಾಲತಿಭಟ್ ಮಾತನಾಡಿ, ತಮಗೆ ಹಿರಿಯ ಸಹೋದ್ಯೋಗಿಗಳಾಗಿ ಹಲವು ರೀತಿಯಲ್ಲಿ ಮಾರ್ಗದರ್ಶನ ಮಾಡಿದರು ಎಂದರು. ಪತ್ರಕರ್ತರ ಭವನ ಕಟ್ಟಡ ಸಮಿತಿ ಸದಸ್ಯ ಎಚ್.ಬಿ. ಮದನಗೌಡ ಅವರು ಗುಡಿಹಳ್ಳಿ ನಾಗರಾಜರ ಸಂಘಟನಾ ಶಕ್ತಿ ಸ್ಮರಿಸಿ, ಪತ್ರಕರ್ತರ ಸಂಘಕ್ಕೆ ಸಲ್ಲಿಸಿದ ಸೇವೆ ನೆನಪಿಸಿದರು.

ಬೆಂಗಳೂರು ನಗರ ಘಟಕ ಅಧ್ಯಕ್ಷ ಸೋಮಶೇಖರ ಗಾಂಧಿ ಮಾತನಾಡಿ, ಆರ್ಥಿಕ ವಿಚಾರದಲ್ಲಿ ಅವರು ತೊಡಕಿನಲ್ಲಿ ಸಿಕ್ಕಾಕಿಕೊಂಡರೂ, "ರಂಗ ನೇಪಥ್ಯ" ಎಂಬ ಪತ್ರಿಕೆಯನ್ನು ಕೋವಿಡ್ ಸಂದರ್ಭದಲ್ಲೂ ನಿಲ್ಲಿಸದೆ ಪ್ರಕಟಿಸಿ ವೃತ್ತಿ ಗೌರವ ಮೆರೆದರು ಎಂದರು.
ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಜಿ.ಸಿ.ಲೋಕೇಶ, ಜಿಲ್ಲಾ ಮತ್ತು ಪ್ರಾದೇಶಿಕ ಪತ್ರಿಕೆಗಳ ಸಂಪಾದಕರ ಸಂಘದ ಅಧ್ಯಕ್ಷ ಜೆ.ಆರ್.ಕೆಂಚೇಗೌಡ ಅವರು ಗುಡಿಹಳ್ಳಿ ಜೊತೆಗಿನ ನೆನಪುಗಳನ್ನು ಮೆಲುಕು ಹಾಕಿದರು. ನಗರ ಘಟಕದ ಪ್ರಧಾನ ಕಾರ್ಯದರ್ಶಿ ದೇವರಾಜ್ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X