ಪಿಕಪ್ ವಾಹನ ಢಿಕ್ಕಿ; ಬೈಕ್ ಸವಾರ ಮೃತ್ಯು
ಹೆಬ್ರಿ, ಆ.27: ಅತೀ ವೇಗದಿಂದ ಧಾವಿಸಿದ ಬಂದ ಪಿಕಪ್ ವಾಹನವೊಂದು ಮೋಟಾರ್ ಸೈಕಲ್ಗೆ ಡಿಕ್ಕಿ ಹೊಡೆದ ಪರಿಣಾಮ, ಬೈಕ್ ಸವಾರ ಮೃತಪಟ್ಟ ಘಟನೆ ಚಾರ ನವೋದಯ ಸೇತುವೆ ಬಳಿ ಗುರುವಾರ ಸಂಜೆ 7 ಗಂಟೆ ಸುಮಾರಿಗೆ ನಡೆದಿದೆ.
ಮೃತರನ್ನು ಚಿತ್ತರಂಜನ್ ಶೆಟ್ಟಿ ಎಂದು ಗುರುತಿಸಲಾಗಿದೆ. ಇವರು ಬೇಳಂಜೆ ಕಡೆಯಿಂದ ಹೆಬ್ರಿಯತ್ತ ಸಾಗುತಿದ್ದಾಗ ಎದುರಿನಿಂದ ಬಂದ ಪಿಕಪ್ ವಾಹನ ಡಿಕ್ಕಿ ಹೊಡೆದಿತ್ತು. ತೀವ್ರವಾಗಿ ಗಾಯಗೊಂಡ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಈ ಬಗ್ಗೆ ಹೆಬ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story