ಬೆಂಗಳೂರು: ಬಸ್ ಪ್ರಯಾಣಿಕರ ತಂಗುದಾಣವನ್ನೇ ಕದ್ದೊಯ್ದ ಕಳ್ಳರು!

ಬೆಂಗಳೂರು, ಆ.29: ರಾಜಧಾನಿ ಬೆಂಗಳೂರಿನಲ್ಲಿ ಸಾರ್ವಜನಿಕ ಬಸ್ ಪ್ರಯಾಣಿಕರ ತಂಗುದಾಣವೊಂದು ಕಳೆದ ರಾತ್ರಿಯಲ್ಲಿ ಕಣ್ಮರೆಯಾಗಿರುವ ಪ್ರಕರಣ ಇಲ್ಲಿನ ಕೆ.ಆರ್.ಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ನಗರದ ಟಿ.ಸಿ.ಪಾಳ್ಯ ಮುಖ್ಯರಸ್ತೆಯಲ್ಲಿರುವ ಆನಂದಪುರದಲ್ಲಿ ಸಾರ್ವಜನಿಕ ಅನುಕೂಲಕ್ಕಾಗಿ ಕಬ್ಬಿಣದಿಂದ ನಿರ್ಮಿಸಿದ ಬಸ್ ಪ್ರಯಾಣಿಕರ ತಂಗುದಾಣವನ್ನು ನಿನ್ನೆ ರಾತ್ರಿ ದುಷ್ಕರ್ಮಿಗಳು ಕತ್ತರಿಸಿ ಕೊಡೊಯ್ದಿದ್ದಾರೆ ಎಂದು ವರದಿಯಾಗಿದೆ.
ಘಟನೆ ಸಂಬಂಧ ಬಿಬಿಎಂಪಿ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಕೆ.ಆರ್.ಪುರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದು, ಪಕ್ಕದ ಕಾಂಪ್ಲೆಕ್ಸ್‌ನಲ್ಲಿದ್ದ ಸಿ.ಸಿ.ಟಿವಿ ಕ್ಯಾಮೆರಾವನ್ನು ಪರಿಶೀಲಿಸಿ ಕಳ್ಳರ ಪತ್ತೆಗೆ ತನಿಖೆ ಮುಂದುವರಿಸಿದ್ದಾರೆ.
Next Story





