Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. 'ಒಲಂಪಿಕ್ಸ್ ಗೆ ಕನ್ನಡಿಗರು-...

'ಒಲಂಪಿಕ್ಸ್ ಗೆ ಕನ್ನಡಿಗರು- ಯಾಕಾಗಬಾರದು?' ಘೋಷವಾಕ್ಯ ಪ್ರಕಟಿಸಿದ ಮುಖ್ಯಮಂತ್ರಿ ಬೊಮ್ಮಾಯಿ

ವಾರ್ತಾಭಾರತಿವಾರ್ತಾಭಾರತಿ29 Aug 2021 8:54 PM IST
share
ಒಲಂಪಿಕ್ಸ್ ಗೆ ಕನ್ನಡಿಗರು- ಯಾಕಾಗಬಾರದು? ಘೋಷವಾಕ್ಯ ಪ್ರಕಟಿಸಿದ ಮುಖ್ಯಮಂತ್ರಿ ಬೊಮ್ಮಾಯಿ

ಬೆಂಗಳೂರು, ಆಗಸ್ಟ್ 29 :'ಒಲಂಪಿಕ್ಸ್ ಗೆ ಕನ್ನಡಿಗರು-  ಯಾಕಾಗಬಾರದು ಎನ್ನುವುದು  ನಮ್ಮ ಘೋಷವಾಕ್ಯ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರಕಟಿಸಿದರು.

 ಅವರು ಇಂದು ಬೆಂಗಳೂರಿನಲ್ಲಿ ಕರ್ನಾಟಕ  ಒಲಂಪಿಕ್ ಸಂಸ್ಥೆ ಪದ್ಮಭೂಷಣ ಮೇಜರ್ ಧ್ಯಾನಚಂದ್ ಹಾಗೂ ರಾಷ್ಟ್ರೀಯ ಕ್ರೀಡಾ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ಒಲಂಪಿಯನ್ ಗಳು ಮತ್ತು ಅಂತರಾಷ್ಟ್ರೀಯ ಕ್ರೀಡಾಪಟುಗಳಿಗೆ ಸನ್ಮಾನ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು. 'ನಾನು ಗೃಹ ಸಚಿವನಾಗಿದ್ದಾಗ ಕ್ರೀಡಾ ಪಟುಗಳ‌ ನೇಮಕಕ್ಕೆ‌ ಅನುಮತಿ ನೀಡಿದ್ದೆ. ಈಗ ಕ್ರೀಡಾಪಟುಗಳನ್ನು ಇತರೆ ಇಲಾಖೆಗಳಲ್ಲಿ ನೇಮಕ‌ಮಾಡಿಕೊಳ್ಳುವ ಬಗ್ಗೆ ನನ್ನ‌ ಸರ್ಕಾರ ಸಕಾರಾತ್ಮಕವಾಗಿ ಚಿಂತನೆ ನಡೆಸುತ್ತದೆ.‌ ಇದು ಕ್ರೀಡೆಗೆ ಒಂದು ರೀತಿಯ ಪ್ರೋತ್ಸಾಹ ಇದ್ದಂತೆ' ಎಂದು ಬೊಮ್ಮಾಯಿ‌ ಹೇಳಿದರು. 

ಮೇಜರ್ ಧ್ಯಾನ ಚಂದ್ರ ಅವರು ದೇಶಕ್ಕೆ ಸ್ಫೂರ್ತಿ.  ಭಾರತಕ್ಕೆ ಮೂರು ಒಲಂಪಿಕ್ಸ್ ಚಿನ್ನದ ಪದಕವನ್ನು  ಗೆದ್ದ ಅವರ ಸಾಧನೆ ಯಾರೂ ಮುರೆಯಲಾಗದ ದಾಖಲೆಯಾಗಿ ಉಳಿದಿದೆ. ಪ್ರಧಾನಿ ಮೋದಿಯವರು ಖೇಲ್ ರತ್ನ ಪ್ರಶಸ್ತಿಯನ್ನು " ಮೇಜರ್ ಧ್ಯಾನ ಚಂದ್ ಖೇಲ್ ರತ್ನ ಪ್ರಶಸ್ತಿ" ಎಂದು ಘೋಷಿಸಿದ್ದಾರೆ. ಖೇಲೋ ಇಂಡಿಯಾ ಎನ್ನುವ ಮೂಲಕ ಯುವಜನರು ಕ್ರೀಡೆಯತ್ತ ಮುಖ ಮಾಡಲು ಪ್ರೋತ್ಸಾಹಿಸಿದ್ದಾರೆ.  ಕ್ರೀಡೆ ನಮ್ಮಲ್ಲಿ ಶಿಸ್ತು, ಆರೋಗ್ಯವನ್ನು ತುಂಬಿ ವ್ಯಕ್ತಿತ್ವವನ್ನು ರೂಪಿಸುತ್ತದೆ ಯೆಂದರಲ್ಲದೆ,  ಸೋಲು ಗೆಲುವು ಎರಡನ್ನು ಸಮಾನವಾಗಿ ಸ್ವೀಕರಿಸುವ  ಕ್ರೀಡಾ ಸ್ಫೂರ್ತಿಯನ್ನು  ಬೆಳೆಸುತ್ತದೆ. ಕ್ರೀಡೆ ದೇಶದ ವರ್ಚಸ್ಸನ್ನು ವೃದ್ಧಿಸಲು ಸಹಕಾರಿಯಾಗಿದೆ ಎಂದರು.

ಈ ನಿಟ್ಟಿನಲ್ಲಿ 75ನೇ ಭಾರತ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಂದರ್ಭದಲ್ಲಿ  ಕರ್ನಾಟಕದಿಂದ  2024ರ ಪ್ಯಾರೀಸ್ ಒಲಂಪಿಕ್ ಕ್ರೀಡಾಕೂಟದಲ್ಲಿ  ಚಿನ್ನ ಗೆಲ್ಲುವ ಸಾಮರ್ಥ್ಯವುಳ್ಳ  75 ಕ್ರೀಡಾ ಪಟುಗಳಿಗೆ  ತರಬೇತಿ, ಪ್ರೋತ್ಸಾಹ ನೀಡುವ " ಅಮೃತ ಕ್ರೀಡಾ ದತ್ತು ಯೋಜನೆ" ಯನ್ನು  ಘೋಷಿಸಲಾಗಿದ್ದು,   ಈ ಯೋಜನೆಯ  ಅನುಷ್ಠಾನಕ್ಕಾಗಿ ಸಮಿತಿಯನ್ನು ಈಗಾಗಲೇ ರಚಿಸಲಾಗಿದೆ.
ಟೋಕಿಯೋ ಒಲಂಪಿಕ್ಸ್ ನಲ್ಲಿ ಭಾಗವಹಿಸಿದ ಎಲ್ಲ ಕ್ರೀಡಾಪಟುಗಳನ್ನ ರಾಜಭವನದಲ್ಲಿ ಸನ್ಮಾಸಿಸ ಲಾಗುವುದು ಎಂದು ತಿಳಿಸಿದರು.

ಕ್ರೀಡಾ ಕ್ಷೇತ್ರವನ್ನು ಅಭಿವೃದ್ಧಿಪಡಿಸಲು ಆಯವ್ಯಯದಲ್ಲಿ ಪೂರಕ  ಅನುದಾನವನ್ನು ಒದಗಿಸಲಾಗುವುದು. ಗುಣಮಟ್ಟದ  ಮೂಲಸೌಕರ್ಯವುಳ್ಳ ಕ್ರೀಡಾ ಸಂಕೀರ್ಣವನ್ನು ಸ್ಥಾಪಿಸಿ ಅಂತರರಾಷ್ಟ್ರೀಯ ಮಟ್ಟದ ತರಬೇತಿ, ಕೋಚಿಂಗ್ ಹಾಗೂ ಸೌಲಭ್ಯ ಗಳನ್ನು  ಒದಗಿಸಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು. 

ಸಾಧಕರಿಗೆ ಸಾವು ಅಂತ್ಯವಲ್ಲ

ಸಾಧಕರಿಗೆ ಸಾವು ಅಂತ್ಯವಲ್ಲ ಎಂದು ಸ್ವಾಮಿ ವಿವೇಕಾನಂದರು ತಿಳಿಸಿದ್ದರು. ಅಂತೆಯೇ ಸಾಧನೆಗೆ ಪರಿಶ್ರಮ ಬಹಳ ಮುಖ್ಯ ಎಂದು ಮುಖ್ಯಮಂತ್ರಿಗಳು ತಿಳಿಸಿದರು. 

ಕರ್ನಾಟಕದ ಮಾನ್ಯ ರಾಜ್ಯಪಾಲರು ಸ್ವತಃ ಕ್ರೀಡಾಪಟುಗಳಾಗಿದ್ದು, ಅನೇಕ ಅಂತರರಾಜ್ಯ ಹಾಗೂ ಅಂತರ ವಿಶ್ವವಿದ್ಯಾಲಯವನ್ನು ಪ್ರತಿನಿಧಿಸಿದ್ದಾರೆ.   ಅವರ ಮಾರ್ಗದರ್ಶನದಲ್ಲಿ ಕರ್ನಾಟಕದಲ್ಲಿ ಕ್ರೀಡಾ ಕ್ಷೇತ್ರದ ಅಭಿವೃದ್ಧಿಗೊಳಿಸಲಾಗುವುದು ಎಂದು ತಿಳಿಸಿದರು.

ಕರ್ನಾಟಕ ಒಲಂಪಿಕ್ಸ ಸಂಸ್ಥೆ ಸ್ಥಾಪಿಸಿರುವ   ''Hall of  fame" ಸಂಗ್ರಹಾಲಯ ವನ್ನು  ಸ್ಥಾಪನೆ ಮಾಡಿ ವಿವಿಧ ಕ್ರೀಡಾ ಕ್ಷೇತ್ರದಲ್ಲಿ ಅಪ್ರತಿಮ ಸಾಧನೆ ಮಾಡಿದ ಸಾಧಕರ  ಭಾವಚಿತ್ರ ಗಳನ್ನು ಸಂಗ್ರಹ ಯುವಜನರಿಗೆ ಸ್ಫೂರ್ತಿಯ ಸೆಲೆಯಾಗಿದೆ ಎಂದರು. 

ಯವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ. ನಾರಾಯಣಗೌಡ  ಅವರು ಮಾತನಾಡಿ ಪ್ರಧಾನಿ ನರೇಂದ್ರ ಮೋದಿ ಅವರು ಕ್ರೀಡೆಗೆ ಸಾಕಷ್ಟು ಉತ್ತೇಜನ ನೀಡುತ್ತಿದ್ದಾರೆ. ಅದೇ ರೀತಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೂ ಪ್ರೋತ್ಸಾಹ ನೀಡುತ್ತಿದ್ದಾರೆ. ಕ್ರೀಡೆಗೆ ಯಾವುದೇ ರೀತಿಯ ಸಹಕಾರ ಕೇಳಿದರೂ ಮುಖ್ಯಮಂತ್ರಿಗಳು ಇಲ್ಲ ಎಂದು ಹೇಳಿಲ್ಲ. ಪೊಲೀಸ್ ಇಲಾಖೆಯಲ್ಲಿ ಕ್ರೀಡಾಪಟುಗಳಿಗೆ ಉದ್ಯೋಗಾವಕಾಶಕ್ಕೆ ಮೀಸಲಾತಿ ಇರುವಂತೆ ಇತರ ಇಲಾಖೆಯಲ್ಲೂ ಶೇ. 2 ರಷ್ಟು ಮೀಸಲಾತಿ ನೀಡುವಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಲಾಗಿದೆ. ಬೆಂಗಳೂರಿನ ಜಕ್ಕೂರಿನಲ್ಲಿರುವ ಏರೋಡ್ರಮ್ ನಲ್ಲಿ ಪ್ರತಿ ವರ್ಷ 100 ಜನ ಪೈಲಟ್ ಗಳಿಗೆ ತರಬೇತಿ ನೀಡುವ ಕಾರ್ಯ ಶೀಘ್ರದಲ್ಲೇ ಆರಂಭವಾಗಲಿದೆ. ಶೇ. 90 ರಷ್ಟು ಕೆಲಸ ಮುಗಿದಿದೆ. ಮುಂದಿನ ವರ್ಷ ಮಾರ್ಚ್ ನಲ್ಲಿ ಕ್ರೀಡಾ ಹಬ್ಬ ನಡೆಯಲಿದೆ. ಬೆಂಗಳೂರಿನಲ್ಲಿ ಖೇಲೊ ಇಂಡಿಯಾ ಯುನಿವರ್ಸಿಟಿ ಗೇಮ್ಸ್ ನಡೆಯಲಿದೆ. ಅದೇ ರೀತಿ ಓಲಂಪಿಕ್ ನಲ್ಲಿ ಪದಕ ಗೆಲ್ಲುವ ಸಾಮರ್ಥ್ಯ ಇರುವಂತ 75 ಕ್ರೀಡಾಪಟುಗಳನ್ನು ಗುರುತಿಸಿ ತರಬೇತಿ ನೀಡಲು "ಅಮೃತ ಕ್ರೀಡಾ ದತ್ತು ಯೋಜನೆ" ಜಾರಿಗೆ ತರಲಾಗಿದೆ. ತಲಾ 5 ಲಕ್ಷ ರೂ. ಪ್ರೋತ್ಸಾಹಧನ ನೀಡಿ ಕ್ರೀಡಾಪಟುಗಳನ್ನು ತರಬೇತಿಗೊಳಸಲಾಗುತ್ತದೆ ಎಂದು ಹೇಳಿದರು.‌

 ರಾಜ್ಯಪಾಲರಾದ ಥಾವರ್ ಚಂದ ಗೆಹ್ಲೋಟ್, ಕರ್ನಾಟಕ ಒಲಂಪಿಕ್ ಸಂಸ್ಥೆಯ ಅಧ್ಯಕ್ಷ ಕೆ. ಗೋವಿಂದರಾಜ್ ಮತ್ತು ಇತರರು ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X