Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಯುವ ಕ್ರೀಡಾಪಟುಗಳು ಮೇಜರ್ ಧ್ಯಾನ್ ಚಂದ್...

ಯುವ ಕ್ರೀಡಾಪಟುಗಳು ಮೇಜರ್ ಧ್ಯಾನ್ ಚಂದ್ ಕೆಚ್ಚನ್ನು ಬೆಳೆಸಿಕೊಳ್ಳಬೇಕು: ಸಚಿವ ನಾರಾಯಣಗೌಡ

ವಾರ್ತಾಭಾರತಿವಾರ್ತಾಭಾರತಿ29 Aug 2021 10:05 PM IST
share
ಯುವ ಕ್ರೀಡಾಪಟುಗಳು ಮೇಜರ್ ಧ್ಯಾನ್ ಚಂದ್ ಕೆಚ್ಚನ್ನು ಬೆಳೆಸಿಕೊಳ್ಳಬೇಕು: ಸಚಿವ ನಾರಾಯಣಗೌಡ

ಬೆಂಗಳೂರು, ಆ. 29: `ಮೇಜರ್ ಧ್ಯಾನ್ ಚಂದ್ ಅವರು ಕ್ರೀಡಾಪಟುಗಳಿಗೆ ಸ್ಫೂರ್ತಿ. ರಾತ್ರಿ ಚಂದ್ರನ ಬೆಳಕಿನಲ್ಲಿಯೂ ಕ್ರೀಡಾಭ್ಯಾಸ ಮಾಡುತ್ತಿದ್ದ ಕಾರಣ ಧ್ಯಾನ್ ಸಿಂಗ್ ಅವರು ಮುಂದೆ ಧ್ಯಾನ್ ಚಂದ್ ಎಂದೇ ಪ್ರಸಿದ್ಧಿಯಾದರು. ಅವರಂತೆ ಪ್ರತಿಯೊಬ್ಬ ಕ್ರೀಡಾಪಟುವು ಶೃದ್ಧೆಯಿಂದ ಕ್ರೀಡಾಭ್ಯಾಸ ಮಾಡಬೇಕು. ಹಾಕಿ ಮಾಂತ್ರಿಕ ಧ್ಯಾನ್ ಚಂದ್ ಸತತ ಮೂರು ಓಲಂಪಿಕ್ ನಲ್ಲಿ ಚಿನ್ನದ ಪದಕ ಗಳಿಸಿದ ಭಾರತದ ಹಾಕಿ ತಂಡದ ಭಾಗವಾಗಿದ್ದರು. ಅವರ ಹೆಸರಿನಲ್ಲಿ ಪ್ರತಿ ವರ್ಷ ಕ್ರೀಡಾ ದಿನವನ್ನು ಆಚರಿಸಲಾಗುತ್ತಿದೆ. `ಖೇಲ್ ರತ್ನ ಪ್ರಶಸ್ತಿ'ಯನ್ನು ಧ್ಯಾನ್ ಚಂದ್ ಖೇಲ್ ರತ್ ಪ್ರಶಸ್ತಿ ಎಂದು ಮರುನಾಕರಣ ಮಾಡಿ ಕೇಂದ್ರ ಸರಕಾರ ಪ್ರಸಕ್ತ ಸಾಲಿನಿಂದ ಪ್ರಶಸ್ತಿ ನೀಡುವ ಮೂಲಕ ಧ್ಯಾನ್ ಚಂದ್ ಅವರ ಸಾಧನೆಗೆ ಹೆಚ್ಚಿನ ಗೌರವ ನೀಡಿದೆ' ಎಂದು ಕ್ರೀಡಾ ಸಚಿವ ಡಾ.ನಾರಾಯಣಗೌಡ ಹೇಳಿದ್ದಾರೆ.

ರವಿವಾರ ಇಲ್ಲಿನ ಅಕ್ಕಿತಿಮ್ಮಯ್ಯ ಹಾಕಿ ಕ್ರೀಡಾಂಗಣದಲ್ಲಿ ಕ್ರೀಡಾ ದಿನಾಚರಣೆ ಉದ್ಘಾಟಿಸಿ ಮಾತನಾಡಿದ ಅವರು, `ಕ್ರೀಡೆಗೆ ರಾಜ್ಯ ಸರಕಾರ ಹೆಚ್ಚಿನ ಪ್ರೋತ್ಸಾಹ ನೀಡುತ್ತಿದೆ. ಪ್ರತಿ ಜಿಲ್ಲೆಯಲ್ಲಿ ಖೇಲೊ ಇಂಡಿಯಾ ಕೇಂದ್ರ ಸ್ಥಾಪಿಸುತ್ತಿದ್ದೇವೆ. ಪ್ರತಿ ತಾಲೂಕಿನಲ್ಲೂ ಕ್ರೀಡಾಂಗಣ ನಿರ್ಮಿಸುತ್ತಿದ್ದೇವೆ. ಕ್ರೀಡಾ ವಿಜ್ಞಾನ ಕೇಂದ್ರ ಸ್ಥಾಪಿಸುತ್ತಿದ್ದೇವೆ. ಆ ಮೂಲಕ ಕ್ರೀಡೆಗೆ, ಕ್ರೀಡಾಪಟುಗಳಿಗೆ ಅಗತ್ಯವಿರುವ ಎಲ್ಲ ಸೌಲಭ್ಯ ನೀಡುತ್ತಿದ್ದೇವೆ ಎಂದರು.

ಮುಂದಿನ ಓಲಂಪಿಕ್ ಗೆ ರಾಜ್ಯದಿಂದ 75 ಕ್ರೀಡಾಪಟುಗಳನ್ನು ಕಳುಹಿಸುವ ಗುರಿ ಹೊಂದಿದ್ದೇವೆ. ಅದಕ್ಕಾಗಿ ಅಮೃತ ಕ್ರೀಡಾ ದತ್ತು ಯೋಜನೆ ಜಾರಿಗೆ ತಂದಿದ್ದೇವೆ. ಶಾಲೆಗಳಲ್ಲಿ ಕಡ್ಡಾಯವಾಗಿ ಪ್ರತಿದಿನ ಒಂದು ಗಂಟೆ ಕ್ರೀಡೆಗೆ ಮೀಸಲಿಡುವಂತೆ ಶಿಕ್ಷಣ ಸಚಿವರಿಗೆ ಪತ್ರ ಬರೆಯಲಾಗಿದೆ. ಕೇಂದ್ರ ಸರಕಾರವೂ ಹಿಂದೆಂದೂ ನೀಡದಂತಹ ಪ್ರೋತ್ಸಾಹವನ್ನು ಕ್ರೀಡೆಗೆ ನೀಡುತ್ತಿದೆ. ಕ್ರೀಡಾಪಟುಗಳು ಸತತ ಅಭ್ಯಾಸ ನಡೆಸಿ, ಪದಕ ಗಳಿಸುವತ್ತ ಗಮನ ಹರಿಸಲಿ. ಎಲ್ಲ ರೀತಿಯ ಪ್ರೋತ್ಸಾಹ ಸರಕಾರ ನೀಡುತ್ತದೆ ಎಂದು ನಾರಾಯಣಗೌಡ ಹೇಳಿದರು.

ಬಳಿಕ ಕಂಠೀರವ ಕ್ರೀಡಾಂಗಣದಲ್ಲಿ ಕ್ರೀಡಾ ಪ್ರಾಧಿಕಾರ ಹಾಗೂ ವಿವಿಧ ಕ್ರೀಡಾ ಸಂಸ್ಥೆಗಳು ಆಯೋಜಿಸಿದ ಕ್ರೀಡಾ ದಿನಾಚರಣೆಯಲ್ಲಿ ಸಚಿವರು ಪಾಲ್ಗೊಂಡರು. ವಿವಿಧ ವಯೋಮಾನದವರಿಗೆ ಆಯೋಜಿಸಿದ್ದ ಕ್ರೀಡಾಕೂಟದಲ್ಲಿ ವಿಜೇತರಾದವರಿಗೆ ಪದಕ ಪ್ರದಾನ ಮಾಡಿದರು. ಕ್ರೀಡಾ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ಹಾಕಿ ಪಂದ್ಯಾವಳಿಯನ್ನು ಸಚಿವ ನಾರಾಯಣಗೌಡ ಉದ್ಘಾಟಿಸಿದರು. ಇದೆ ವೇಳೆ ಭಾರತೀಯ ಮಹಿಳಾ ಹಾಕಿ ತಂಡದ ತರಬೇತುದಾರರಾಗಿರುವ ಅಂಕಿತ ಅವರನ್ನು ಸನ್ಮಾನಿಸಲಾಯಿತು. ರಾಜ್ಯ ಓಲಂಪಿಕ್ ಅಸೋಸಿಯೇಶನ್ ಅಧ್ಯಕ್ಷ ಗೋವಿಂದರಾಜು, ಕ್ರೀಡಾ ಪ್ರಾಧಿಕಾರದ ಪ್ರಮುಖರು, ಕ್ರೀಡಾ ಇಲಾಖೆ ಆಯುಕ್ತ ವೆಂಕಟೇಶ್, ಬ್ಯಾಡ್ಮಿಂಟನ್ ಆಟಗಾರ್ತಿ ತೃಪ್ತಿ ಮುರುಗುಂದೆ ಮತ್ತಿತರ ಪ್ರಮುಖರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X