Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕಲಬುರಗಿ ಪಾಲಿಕೆ ಚುನಾವಣೆ: ಕಾಂಗ್ರೆಸ್...

ಕಲಬುರಗಿ ಪಾಲಿಕೆ ಚುನಾವಣೆ: ಕಾಂಗ್ರೆಸ್ ಪಕ್ಷ‌ 35 ಸ್ಥಾನ ಗೆಲ್ಲಲಿದೆ: ಕೆಪಿಸಿಸಿ ಸಲೀಂ‌ ಅಹಮದ್ ವಿಶ್ವಾಸ

ವಾರ್ತಾಭಾರತಿವಾರ್ತಾಭಾರತಿ29 Aug 2021 10:27 PM IST
share
ಕಲಬುರಗಿ ಪಾಲಿಕೆ ಚುನಾವಣೆ: ಕಾಂಗ್ರೆಸ್ ಪಕ್ಷ‌ 35 ಸ್ಥಾನ ಗೆಲ್ಲಲಿದೆ: ಕೆಪಿಸಿಸಿ ಸಲೀಂ‌ ಅಹಮದ್ ವಿಶ್ವಾಸ

ಕಲಬುರಗಿ: ಮಹಾನಗರ ಪಾಲಿಕೆ ಚುನಾಣೆಯ 55 ಸ್ಥಾನಗಳ ಪೈಕಿ ಕನಿಷ್ಠ 35 ಸ್ಥಾನಗಳಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸಲೀಂ‌ ಅಹಮದ್ ವಿಶ್ವಾಸ ವ್ಯಕ್ತಪಡಿಸಿದರು.

ಕಲಬುರಗಿ ಮಹಾನಗರ ಚುನಾವಣೆ ಹಿನ್ನೆಲೆಯಲ್ಲಿ ಡಿಸಿಸಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡುತ್ತಿದ್ದರು.

ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ಕಾರಗಳು ಜನರ ಹಿತ ಕಾಪಾಡಲು ವಿಫಲವಾಗಿವೆ. ಸುಮಾರು 2000 ಕೋಟಿ ಯಷ್ಟು ರಾಜ್ಯ ಸರಕಾರ ಭ್ರಷ್ಠಚಾರ ಎಸಗಿದೆ. ಕೋವಿಡ್ ಎರಡನೆಯ ಅಲೆಯನ್ನು‌ ಎದುರಿಸಲು ಸರ್ಕಾರ ವಿಫಲವಾಗಿದ್ದು,  ಸಾವಿನ ಸಂಖ್ಯೆ ಕಡಿಮೆ ತೋರಿಸುವ ಮೂಲಕ ಜನರಿಗೆ ದಾರಿ ತಪ್ಪಿಸಲು ಪ್ರಯತ್ನಿಸುತ್ತಿದೆ. ಕಾಂಗ್ರೆಸ್ ಪಕ್ಷದ ವತಿಯಿಂದ ಸಾವಿನ ಸಂಖ್ಯೆ ಕುರಿತು ಆಂತರಿಕ ತನಿಖೆ ನಡೆಸುತ್ತಿದೆ. ರಾಜ್ಯ ಸರ್ಕಾರ ಕೋವಿಡ್ ನಿಂದ ನಿಧನರಾದ ವ್ಯಕ್ತಿಗಳ ಕುಟುಂಬದವರಿಗೆ ತಲಾ ರೂ 5 ಲಕ್ಷ ಪರಿಹಾರ ನೀಡಬೇಕು ಎಂದು ಇದೇ ಸಂದರ್ಭದಲ್ಲಿ ಅವರು ಒತ್ತಾಯಿಸಿದರು.

ಮೊಟ್ಟೆ ಹಗರಣದಲ್ಲಿ‌ಭಾಗಿಯಾಗಿರುವ ಶಶಿಕಲಾ ಜೊಲ್ಲೆ ಪ್ರಮಾಣ ಸ್ವೀಕಾರಕ್ಕೆ‌ ಬರಲು ವಿಮಾನನಿಲ್ದಾಣದಿಂದ ರಾಜಭವನದವರೆಗೆ ಬರಲು ಜೀರೋ ಟ್ರಾಫಿಕ್ ಮಾಡಿದ್ದು ನೋಡಿದರೆ ಸರ್ಕಾರದ ನೈತಿಕತೆ ಅರ್ಥವಾಗುತ್ತದೆ ಎಂದು ಟೀಕಿಸಿದರು.

ಇತ್ತೀಚಿಗೆ ನಾಲ್ವರು ಕೇಂದ್ರ ಸಚಿವರು ಜನಾಶೀರ್ವಾದ ಯಾತ್ರೆ ಕಾರ್ಯಕ್ರಮ ನಡೆಸಿದರು. ಯಾವ ಪುರುಷಾರ್ಥಕ್ಕೆ ಈ ಕಾರ್ಯಕ್ರಮ ನಡೆಸಿದ್ದಾರೆ. ರಾಜ್ಯದಲ್ಲಿ ಕೋವಿಡ್ ನಿಂದ ಅಪಾರ ಜನರು ಸಾವು ನೋವು ಅನುಭವಿಸಿದ್ದಾರೆ. ಜನಸಾಮಾನ್ಯರು ಬೆಲೆ ಏರಿಕೆಯಿಂದ ತತ್ತರಿಸಿದ್ದಾರೆ. ಜನರಿಗೆ ಅಚ್ಚೇ‌ದಿನ್ ಭರವಸೆ ನೀಡಿ ಅತ್ಯಂತ ಕೆಟ್ಟ ದಿನಗಳಲ್ಲಿ ನರಳುವಂತೆ ಮಾಡಿದ್ದಕ್ಕೆ,  ಸುಮಾರು‌13,000 ಕೋಟಿ ಜಿಎಸ್ ಟಿ ಅನುದಾನ ಬಿಡುಗಡೆ ಮಾಡಿಸಲು ಸಾಧ್ಯವಾಗದ್ದಕ್ಕೆ ಬಿಜೆಪಿ ಮಂತ್ರಿಗಳು ಕ್ಷಮೆ ಕೇಳುವ ಯಾತ್ರೆ ನಡೆಸಬೇಕಿತ್ತು ಎಂದರು.

ಯಾದಗಿರಿಯಲ್ಲಿ ಕೇಂದ್ರ ಸಚಿವರ ಸ್ವಾಗತ ಸಮಯದಲ್ಲಿ ಗಾಳಿಯಲ್ಲಿ ಗುಂಡುಹಾರಿಸಿದ್ದ ಪ್ರಕರಣವನ್ನು ಉಲ್ಲೇಖಿಸಿದ ಸಲೀಂ ಅಹಮದ್ ಅವರು ಉತ್ತರ ಪ್ರದೇಶ ಹಾಗೂ‌ ಬಿಹಾರದ ಸಂಸ್ಕ್ರತಿಯನ್ನು ಬಿಜೆಪಿ ರಾಜ್ಯದಲ್ಲಿ ಪರಿಚಯಿಸುತ್ತಿದೆ ಇದು ನಾಚಿಕೆಗೇಡು. ಮಾಜಿ‌ ಸಚಿವರೊಬ್ಬರ ಅಣತಿಯಂತೆ ಅದು ಘಟನೆ ನಡೆದಿದ್ದು ಹೋಂ ಮಿನಿಸ್ಟರ್ ಈ ಘಟನೆಯನ್ನು ಗಂಭೀರವಾಗಿ‌ ಪರಿಗಣಿಸಿ ಸಂಬಂಧಪಟ್ಟವರ ಮೇಲೆ ಕ್ರಮ ಕೈಗೊಳ್ಳಬೇಕು ಎಂದರು.

ಮೈಸೂರಿನಲ್ಲಿ ನಡೆದ ಸಾಮೂಹಿಕ ಅತ್ಯಾಚಾರದ ಘಟನೆಯನ್ನು ತೀವ್ರವಾಗಿ ಖಂಡಿಸಿದ ಕೆಪಿಸಿಸಿ ಕಾರ್ಯಾಧ್ಯಕ್ಷರು ಘಟನೆ ಕುರಿತಂತೆ ಪ್ರತಕ್ರಿಯೆ ನೀಡುವಾಗ ಗೃಹ ಸಚಿವರು ಉಢಾಫೆಯಾಗಿ ಉತ್ತರಿಸಿದ್ದಾರೆ ಇದು ಸರಿಯಾದ ಕ್ರಮವಲ್ಲ ಎಂದು ಅಸಮಧಾನ ವ್ಯಕ್ತಪಡಿಸಿದರು.

ರಾಜ್ಯದ ಜನರು ರಾಜ್ಯ ಹಾಗೂ ಕೇಂದ್ರ ಸರ್ಕಾರ‌ ಜನವಿರೋಧಿ ನೀತಿಯಿಂದಾಗಿ ರೋಸಿಹೋಗಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳನ್ನ ಈ ಚುನಾವಣೆಯಲ್ಲಿ ಆರಿಸಿ ಕಳಿಸುವ ಮೂಲಕ ಮುಂಬರುವ ಸ್ಥಳೀಯ ಸಂಸ್ಥೆ, ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆಗೆ ಒಂದು ಹೊಸತನಕ್ಕೆ ನಾಂದಿ ಹಾಡಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಲಿದ್ದಾರೆ ಎಂದರು.

ಕಲಬುರಗಿ‌ ಮಹಾನಗರ ಪಾಲಿಕೆಯ ಚುನಾವಣೆ ಟಿಕೆಟ್ ಹಂಚಿಕೆ ವಿಷಯದಲ್ಲಿ ಕಾಂಗ್ರೆಸ್ ಪಕ್ಷದಲ್ಲಿ‌ ಗೊಂದಲವಾಗಿದೆ ಅತೃಪ್ತರೆಲ್ಲ ಬೇರೆ ಬೇರೆ ಪಕ್ಷ‌ ಸೇರಿದ್ದಾರೆ‌ ಇದು ಪಕ್ಷಕ್ಕೆ ಹಿನ್ನೆಡೆಯಾಗಲಿದೆಯಾ ಎನ್ನುವ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಮಾಜಿ‌ ಸಚಿವ, ಶಾಸಕ ಹಾಗೂ ಕೆಪಿಸಿಸಿ ವಕ್ತಾರರಾದ ಪ್ರಿಯಾಂಕ್ ಖರ್ಗೆ ಸ್ಥಳೀಯ‌ ನಾಯಕರ ಅಭಿಪ್ರಾಯ ಪಡೆದು ಗೆಲ್ಲುವ ಅಭ್ಯರ್ಥಿಗಳಿಗೆ ಟಿಕೇಟ್ ಹಂಚಿಕೆ ಮಾಡಲಾಗಿದೆ. ಜೊತೆಗೆ ಯುವಕರಿಗೆ ಹೆಚ್ಚಿನ ಅವಕಾಶ ನೀಡಲಾಗಿದೆ. 55 ಸೀಟುಗಳಲ್ಲಿ 36 ಜನ ಹೊಸಬರಿಗೆ ಅವಕಾಶ ನೀಡಲಾಗಿದೆ. ಟಿಕೇಟ್ ಹಂಚಿಕೆಯಲ್ಲಿ ಸಹಜವಾಗಿ ಎಲ್ಲ ಪಕ್ಷದಲ್ಲಿ ಅಸಮಾಧಾನ ಇದ್ದೇ ಇರುತ್ತದೆ. ಸಾಧ್ಯವಾದಷ್ಟು ಸಮಸ್ಯೆ ಬಗೆಹರಿಸಲಾಗಿದೆ. ಇಷ್ಟಾಗಿಯೂ ಕೆಲವರು‌ ಜೆಡಿಎಸ್ ಹಾಗೂ ಇತರ ಪಕ್ಷಗಳಿಗೆ ಹೋಗಿದ್ದಾರೆ. ಆದರೂ ಕೂಡಾ ನಮ್ಮ ಪಕ್ಷಕ್ಕೆ ನಷ್ಟವಿಲ್ಲ ಎಂದರು.

ಇದೇ ಸಂದರ್ಭದಲ್ಲಿ ಮಧ್ಯೆ ಪ್ರವೇಶಿಸಿ ಮಾತನಾಡಿದ ಶಾಸಕರಾದ ಅಜಯ್ ಸಿಂಗ್ ಅವರು ನಮ್ಮ ಪಕ್ಷದಲ್ಲಿ ಟಿಕೇಟ್ ಹಂಚಿಕೆಯಾದ ಸಂದರ್ಭದಲ್ಲಿ ನಮ್ಮ ಅಭ್ಯರ್ಥಿಗಳ ಸಂಖ್ಯೆ ಹೆಚ್ಚಾಗಿದೆ. ಆದರೆ, ಬಿಜೆಪಿಯಲ್ಲಿ ಅಭ್ಯರ್ಥಿಗಳು ಸಿಗದೆ ಕೆಲ‌ಸ್ಥಾನಗಳಲ್ಲಿ ಅಭ್ಯರ್ಥಿಗಳನ್ನು ಹಾಕಲು ವಿಫಲವಾಗಿದೆ ಎಂದರು.

ರಾಷ್ಟ್ರೀಯ ಪಕ್ಷ ಎಂದು ಹೇಳುವ ಬಿಜೆಪಿ ತನ್ನ ಬಿ ಟೀಮ್ ಆದ ಎಂ ಐ ಎಂ ಗೆ ಸ್ಥಾನ ಬಿಟ್ಟುಕೊಟ್ಟಿದೆ ಎಂದು ಕುಟುಕಿದ ಸಲೀಂ ಅಹಮದ್ ಅವರು ಇದು ಆ ಪಕ್ಷದ ಚುನಾವಣಾ ನೀತಿಯನ್ನು ತೋರಿಸುತ್ತಿದೆ ಎಂದರು.

ಈ ಸಂದರ್ಭದಲ್ಲಿ ಡಿಸಿಸಿ ಅಧ್ಯಕ್ಷರಾದ ಜಗದೇವ ಗುತ್ತೇದಾರ,  ಮಾಜಿ ಎಂ ಎಲ್ ಸಿ ಅಲ್ಲಮಪ್ರಭು ಪಾಟೀಲ್  ಸೇರಿದಂತೆ ಮತ್ತಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X