ರಾಷ್ಟ್ರೀಯ ಶಿಕ್ಷಣ ನೀತಿ ವಿರೋಧಿಸಿ ಪ್ರತಿಭಟನೆ : ಸಿಎಫ್ಐ ಕಾರ್ಯಕರ್ತರ ವಶ
ಮಂಗಳೂರು, ಆ.30: ರಾಷ್ಟ್ರೀಯ ಶಿಕ್ಷಣ ನೀತಿಯನ್ನು ವಿರೋಧಿಸಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾದ ಕಾರ್ಯಕರ್ತರು ಮಂಗಳಾ ಸಭಾಂಗಣದ ಮುಂದೆ ಪ್ರತಿಭಟನೆಗೆ ಯತ್ನಿಸಿದರು. ತಕ್ಷಣ ಪೊಲೀಸರು ಸಿಎಫ್ಐ ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದಾರೆ.
ಸಿಎಫ್ಐ ಕಾರ್ಯಕರ್ತರು ಪ್ರತಿಭಟನೆ ನಡೆಸುವ ಬಗ್ಗೆ ಮಾಹಿತಿ ಪಡೆದಿದ್ದ ಪೊಲೀಸರು ಮಂಗಳಾ ಸಭಾಂಗಣದ ಸುತ್ತಮುತ್ತಲಿನ ರಸ್ತೆಯನ್ನು ತಡೆದು ವಾಹನಗಳ ಸಂಚಾರಕ್ಕೆ ಅವಕಾಶ ನೀಡಿರಲಿಲ್ಲ ಎಂದು ತಿಳಿದುಬಂದಿದೆ.