Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ನೂತನ ಶಿಕ್ಷಣ ನೀತಿಯ ಉದ್ಘಾಟನಾ...

ನೂತನ ಶಿಕ್ಷಣ ನೀತಿಯ ಉದ್ಘಾಟನಾ ಕಾರ್ಯಕ್ರಮ ವಿರೋಧಿಸಿ ಬಂಧನಕ್ಕೊಳಗಾಗಿದ್ದ ಸಿಎಫ್‌ಐ ಕಾರ್ಯಕರ್ತರ ಬಿಡುಗಡೆ

ವಾರ್ತಾಭಾರತಿವಾರ್ತಾಭಾರತಿ30 Aug 2021 9:34 PM IST
share
ನೂತನ ಶಿಕ್ಷಣ ನೀತಿಯ ಉದ್ಘಾಟನಾ ಕಾರ್ಯಕ್ರಮ ವಿರೋಧಿಸಿ ಬಂಧನಕ್ಕೊಳಗಾಗಿದ್ದ ಸಿಎಫ್‌ಐ ಕಾರ್ಯಕರ್ತರ ಬಿಡುಗಡೆ

ಮಂಗಳೂರು, ಆ.30: ನೂತನ ಶಿಕ್ಷಣ ನೀತಿ (ಎನ್ಇಪಿ)ಯ ಅನುಷ್ಠಾನ ಕಾರ್ಯಕ್ರಮಕ್ಕೆ ಚಾಲನೆ ನೀಡಲು ಸೋಮವಾರ ಮಂಗಳೂರು ವಿವಿಗೆ ಆಗಮಿಸಿದ ರಾಜ್ಯದ ಉನ್ನತ ಶಿಕ್ಷಣ ಸಚಿವ ಅಶ್ವತ್ಥ ನಾರಾಯಣ ಅವರ ವಿರುದ್ಧ ಪ್ರತಿಭಟನೆ ನಡೆಸಿ ಪೊಲೀಸರ ವಶವಾಗಿದ್ದ ಕ್ಯಾಂಪಸ್ ಫ್ರಂಟ್ ಕಾರ್ಯಕರ್ತರು ಸಂಜೆಯ ವೇಳೆಗೆ ಬಿಡುಗಡೆಗೊಂಡಿದ್ದಾರೆ.

ಕೊಣಾಜೆಯ ಮಂಗಳ ಗಂಗೋತ್ರಿಯಲ್ಲಿರುವ ಮಂಗಳೂರು ವಿವಿ ಮಂಗಳಾ ಸಭಾಂಗಣಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಸಿಎಫ್‌ಐ ಕಾರ್ಯಕರ್ತರನ್ನು ಬಂಧಿಸಿದ ಪೊಲೀಸರು ಬಳಿಕ ಬಿಡುಗಡೆಗೊಳಿಸಿದರು.

ಮಂಗಳಾ ಸಭಾಂಗಣದಲ್ಲಿ ಸಚಿವರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದಾಗ ಸಿಎಫ್‌ಐ ಕಾರ್ಯಕರ್ತರು ಸಭಾಂಗಣದ ಮುಂದಿನ ದ್ವಾರದ ಬಳಿ ಪ್ರತಿಭಟನೆಗೆ ಮುಂದಾಗಿದ್ದರು. ತಕ್ಷಣ ಪೊಲೀಸರು ಕಾರ್ಯಕರ್ತರನ್ನು ತಡೆದಿದ್ದು,  ಈ ವೇಳೆ ಪೊಲೀಸರು ಮತ್ತು ಕಾರ್ಯಕರ್ತರ ಮಧ್ಯೆ ವಾಗ್ವಾದ ನಡೆಯಿತು. ಇದರ ಮಧ್ಯೆಯೇ 24 ವಿದ್ಯಾರ್ಥಿನಿಯರು ಮತ್ತು 51 ವಿದ್ಯಾರ್ಥಿ ಕಾರ್ಯಕರ್ತರನ್ನು ವಶಕ್ಕೆ ಪಡೆದ ವೇಳೆ ಪೊಲೀಸರು ಮತ್ತು ಸಿಎಫ್‌ಐ ಕಾರ್ಯಕರ್ತರ ಮಧ್ಯೆ ನೂಕಾಟ, ತಳ್ಳಾಟ ನಡೆದಿದೆ. ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ನಿಯಂತ್ರಿಸಲು ಪೊಲೀಸರು ಕೆಲಕಾಲ ಹರಸಾಹಸಪಟ್ಟರು.

ಪ್ರತಿಭಟನೆಯ ನೇತೃತ್ವವನ್ನು ಸಿ ಎಫ್ಐ ರಾಜ್ಯ ಕೋಶಾಧಿಕಾರಿ ಸವಾದ್ ಕಲ್ಲರ್ಪೆ, ರಾಜ್ಯ ಸಮಿತಿಯ ಸದಸ್ಯೆಯರಾದ ಮುರ್ಶಿದಾ ಬಾನು ಮಲಾರ್, ಫಾತಿಮಾ ಉಸ್ಮಾನ್ ಕಾವಳಕಟ್ಟೆ, ದ.ಕ. ಜಿಲ್ಲಾಧ್ಯಕ್ಷ ಹಸನ್ ಸಿರಾಜ್, ಮಂಗಳೂರು ನಗರಾಧ್ಯಕ್ಷ ಇನಾಯತ್ ಅಲಿ, ಗ್ರಾಮಾಂತರ ಅಧ್ಯಕ್ಷ ಶರಫುದ್ದೀನ್ ವಹಿಸಿದ್ದರು.

ಪೊಲೀಸರ ಸರ್ಪಗಾವಲು ಭೇದಿಸಿದ ವಿದ್ಯಾರ್ಥಿಗಳು: ರಾಷ್ಟ್ರೀಯ ಶಿಕ್ಷಣ ನೀತಿಯನ್ನು ವಿರೋಧಿಸಿ ಸಚಿವರಿಗೆ ಸಿಎಫ್‌ಐ ಕಾರ್ಯಕರ್ತರು ಘೆರಾವ್ ಹಾಕುವ ಬಗ್ಗೆ ಮಾಹಿತಿ ಪಡೆದಿದ್ದ ಪೊಲೀಸರು ಮಂಗಳಾ ಸಭಾಂಗಣದತ್ತ ತೆರಳುವ ಎಲ್ಲಾ ರಸ್ತೆಯನ್ನು ಬ್ಯಾರಿಕೇಡ್ ಅಳವಡಿಸಿ ಬಂದ್ ಮಾಡಿದ್ದರು. ಅಲ್ಲದೆ ಕೊಣಾಜೆ, ಹರೇಕಳ, ಪಾವೂರು, ಪಜೀರ್, ಬೋಳಿಯಾರ್ ಗ್ರಾಮಗಳಿಗೆ ತೆರಳುವ ಬಸ್ ಸಹಿತ ಖಾಸಗಿ ವಾಹನಗಳ ಸಂಚಾರಕ್ಕೆ ನಿರ್ಬಂಧ ಹೇರಿದ್ದರು. ಆದಾಗ್ಯೂ ಸಿಎಫ್‌ಐ ಕಾರ್ಯಕರ್ತರು ಪೊಲೀಸರ ಕಣ್ತಪ್ಪಿಸಿ ಸರ್ಪಗಾವಲು ಭೇದಿಸಿ ಸಭಾಂಗಣದ ಮುಂದೆ ದಿಢೀರ್ ಜಮಾಯಿಸಿ ಪ್ರತಿಭಟನೆಗೆ ಮುಂದಾಗಿದ್ದರು. ಪೊಲೀಸರು ಕಾರ್ಯಕರ್ತರನ್ನು ತಡೆಯಲು ಯತ್ನಿಸಿದಾಗ ವಾಗ್ವಾದ, ತಳ್ಳಾಟ ನಡೆಯಿತು.

''ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ರಾಜ್ಯದಲ್ಲಿ ಅನುಷ್ಠಾನಕ್ಕೆ ತರುವುದನ್ನು ಸಿಎಫ್‌ಐ ಸಹಿಸವುದಿಲ್ಲ. ವಿದ್ಯಾರ್ಥಿ ಮುಖಂಡರಲ್ಲಿ ಅಥವಾ ಸಂಘಟನೆಗಳಲ್ಲಿ ಅಭಿಪ್ರಾಯ ಸಂಘ್ರಹಿಸದೆ ಎನ್ಇಪಿ ಜಾರಿಗೆ ತರಲಾಗಿದೆ. ಉನ್ನತ ಶಿಕ್ಷಣ ಸಚಿವರು ವಿದ್ಯಾರ್ಥಿ ಸಂಘಟನೆಗಳ ಅಭಿಪ್ರಾಯಕ್ಕೆ ಅವಕಾಶ ನೀಡಬೇಕು. ಇಲ್ಲದಿದ್ದರೆ ಹೋರಾಟ ತೀವ್ರಗೊಳಿಸಲಾಗುವುದು''.

- ಅಥಾವುಲ್ಲಾ ಪೂಂಜಲಕಟ್ಟೆ, ರಾಜ್ಯಾಧ್ಯಕ್ಷ  ಕ್ಯಾಂಪಸ್ ಫ್ರಂಟ್ ಕರ್ನಾಟಕ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X