Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಗ್ರಾಮೀಣ ಮಹಿಳಾ ಸಬಲೀಕರಣಕ್ಕೆ ಸ್ವಸಹಾಯ...

ಗ್ರಾಮೀಣ ಮಹಿಳಾ ಸಬಲೀಕರಣಕ್ಕೆ ಸ್ವಸಹಾಯ ಗುಂಪುಗಳಿಗೆ 600 ಕೋಟಿ ರೂ.: ಸಚಿವ ಡಾ. ಅಶ್ವತ್ಥ ನಾರಾಯಣ

ವಾರ್ತಾಭಾರತಿವಾರ್ತಾಭಾರತಿ30 Aug 2021 9:51 PM IST
share
ಗ್ರಾಮೀಣ ಮಹಿಳಾ ಸಬಲೀಕರಣಕ್ಕೆ ಸ್ವಸಹಾಯ ಗುಂಪುಗಳಿಗೆ 600 ಕೋಟಿ ರೂ.: ಸಚಿವ ಡಾ. ಅಶ್ವತ್ಥ ನಾರಾಯಣ

ಮಂಗಳೂರು, ಆ.30: ಗ್ರಾಮೀಣ ಮಹಿಳೆಯರು ಆರ್ಥಿಕ ಸ್ವಾವಲಂಬಿಗಳಾಗಲು ಹಾಗೂ ಉದ್ಯಮಶೀಲರಾಗಲು ಸರಕಾರ ಎನ್‌ಆರ್‌ಎಲ್‌ಎಂ ಯೋಜನೆ ಮೂಲಕ ರಾಜ್ಯದ ಮಹಿಳಾ ಸ್ವಸಹಾಯ ಗುಂಪುಗಳಿಗೆ ಒಟ್ಟು 600 ಕೋಟಿ ರೂ. ಹೆಚ್ಚಿನ ಸಮುದಾಯ ಬಂಡವಾಳ ನಿಧಿ ನೀಡಲಾಗಿದೆ ಎಂದು ಕೌಶಲ್ಯಾಭಿವೃದ್ಧಿ, ಜೀವನೋಪಾಯ ಖಾತೆ ಸಚಿವ ಡಾ.ಸಿ.ಎನ್.ಅಶ್ವತ್ಥ ನಾರಾಯಣ ಹೇಳಿದರು.

ದಕ್ಷಿಣ ಕನ್ನಡ ಜಿಲ್ಲೆಯ ಕುರ್ನಾಡು ಗ್ರಾಪಂನ ಮುಡಿಪು ಗ್ರಾಮದಲ್ಲಿ ಬಂಜರು ಬಿದ್ದಿದ್ದ ಭೂಮಿಯನ್ನು ಸಾಗುವಳಿ ಮಾಡಿ ಭತ್ತ ಬೆಳೆಯುತ್ತಿರುವ ಸ್ವಸಹಾಯ ಗುಂಪುಗಳ ಮಹಿಳೆಯರ ಸಾಧನೆಯನ್ನು ಖುದ್ದು ವೀಕ್ಷಿಸಿದ ನಂತರ ಮಾತನಾಡಿದ ಅವರು, ರಾಜ್ಯದ ಉದ್ದಗಲಕ್ಕೂ ಗ್ರಾಮೀಣ ಮಹಿಳೆಯರನ್ನು ಆರ್ಥಿಕವಾಗಿ ಸಬಲರನ್ನಾಗಿ ಮಾಡಲು ಕೇಂದ್ರ ಸರಕಾರದ ನೆರವಿನಿಂದ ಕಾರ್ಯಕ್ರಮ ಹಾಕಿಕೊಳ್ಳಲಾಗಿದೆ ಎಂದರು.

ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನದಡಿ ಮಹಿಳೆಯರು ಸ್ವಸಹಾಯ ಗುಂಪುಗಳ ಮೂಲಕ ಸಂಘಟನೆಗೊಂಡು ಗ್ರಾಪಂ ಮಟ್ಟದ ಒಕ್ಕೂಟದ ವತಿಯಿಂದ ಹಲವಾರು ಜೀವನೋಪಾಯ ಚಟುವಟಿಕೆಗಳನ್ನು ಕೈಗೊಂಡು ತಮ್ಮ ಕುಟುಂಬಗಳ ಆರ್ಥಿಕ ಮತ್ತು ಸಾಮಾಜಿಕ ಸ್ಥಿತಿಗತಿಗಳನ್ನು ಉನ್ನತೀಕರಿಸಿಕೊಳ್ಳುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಿರುವುದು ಬಹಳ ಸಂತೋಷದ ವಿಷಯವಾಗಿದೆ.
ಹಳ್ಳಿ ಮಹಿಳೆಯರಲ್ಲಿ ಕುಶಲತೆಯನ್ನು ಬೆಳೆಸಿ ಅವರಲ್ಲಿ ಉದ್ಯಮಶೀಲತೆ ವೃದ್ಧಿಸುವ ಕೆಲಸವನ್ನು ಸರಕಾರ ಮಾಡುತ್ತಿದೆ. ಕರಾವಳಿ ಭಾಗದ ಮಹಿಳೆಯರು ಸರಕಾರದ ಈ ಯೋಜನೆಯನ್ನು ಪರಿಣಾಮಕಾರಿಯಾಗಿ ಬಳಕೆ ಮಾಡಿಕೊಂಡು ಮುನ್ನಡೆ ಸಾಧಿಸುತ್ತಿದ್ದಾರೆ ಎಂದು ಸಚಿವರು ಮೆಚ್ಚುಗೆ ವ್ಯಕ್ತಪಡಿಸಿದರು.

ಗ್ರಾಪಂ ಮಟ್ಟದ ಸಂಜೀವಿನಿ ಒಕ್ಕೂಟಗಳಲ್ಲಿ ಪ್ರಧಾನ ಪುಸ್ತಕ ಬರಹಗಾರರು ಹಾಗೂ ಸ್ಥಳೀಯ ಸಂಪನ್ಮೂಲ ವ್ಯಕ್ತಿಗಳು ನಿರ್ವಹಿಸುತ್ತಿರುವ ಕರ್ತವ್ಯ ಅತ್ಯಂತ ಶ್ಲಾಘನೀಯ. ಮಹಿಳಾ ಸ್ವಸಹಾಯ ಗುಂಪುಗಳ ಮೂಲಕ ಈ ರಾಜ್ಯವನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ದು ರಾಷ್ಟ್ರದಲ್ಲಿ ಮಾದರಿ ರಾಜ್ಯವನ್ನಾಗಿ ರೂಪಿಸಲು ತಾವೆಲ್ಲರೂ ಸಹಕರಿಸುವಂತೆ ತಮ್ಮಲ್ಲಿ ಮನವಿ ಮಾಡಿಕೊಳ್ಳುತ್ತೇನೆ ಎಂದು ಅವರು ನುಡಿದರು.

ಸಚಿವರಿಗೆ ರಾಖಿ ಕಟ್ಟಿದ ಮಹಿಳೆಯರು: ಈ ಸಂದರ್ಭದಲ್ಲಿ ಮುಡಿಪು ಗ್ರಾಮದ ಮಹಿಳೆಯರು ಸಚಿವ ಡಾ.ಅಶ್ವತ್ಥನಾರಾಯಣ ಅವರಿಗೆ ರಕ್ಷಾ ಬಂಧನ ಕಟ್ಟಿ ಆರತಿ ಬೆಳಗಿದರು. ಇದರಿಂದ ಭಾವುಕರಾದ ಸಚಿವರು, ಈ ದಿನ ತಾವು ನನಗೆ ರಾಖಿ ಕಟ್ಟಿ ಸೋದರನ ಸ್ಥಾನವನ್ನು ನಿಮ್ಮ ಮನದಲ್ಲಿ ನೀಡಿದ್ದೀರಿ. ಇದಕ್ಕೆ ನಾನು ನಿಮಗೆಲ್ಲರಿಗೂ ಚಿರಋಣಿ. ನಾನು ಮತ್ತೊಮ್ಮೆ ಇಲ್ಲಿಗೆ ಬರಲು ಪ್ರಯತ್ನಿಸುತ್ತೇನೆ. ನಿಮ್ಮ ಅಭಿಮಾನಕ್ಕೆ ನನ್ನ ಮನಸ್ಸು ಭಾರವಾಗಿದೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X