Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕೋವಿಡ್ ತಪಾಸಣೆ ಹೆಚ್ಚಿಸಿ, ಸೋಂಕು...

ಕೋವಿಡ್ ತಪಾಸಣೆ ಹೆಚ್ಚಿಸಿ, ಸೋಂಕು ನಿಯಂತ್ರಿಸಿ: ಸಚಿವ ಅಂಗಾರ

ವಾರ್ತಾಭಾರತಿವಾರ್ತಾಭಾರತಿ30 Aug 2021 10:48 PM IST
share
ಕೋವಿಡ್ ತಪಾಸಣೆ ಹೆಚ್ಚಿಸಿ, ಸೋಂಕು ನಿಯಂತ್ರಿಸಿ: ಸಚಿವ ಅಂಗಾರ

ಮಂಗಳೂರು, ಆ.30: ಹೆಚ್ಚು ಹೆಚ್ಚು ಪರೀಕ್ಷೆಗಳನ್ನು ನಡೆಸುವ ಮೂಲಕ ಕೋವಿಡ್-19 ಸೋಂಕನ್ನು ನಿಯಂತ್ರಿಸಬಹುದು ಎಂದು ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವ ಎಸ್.ಅಂಗಾರ ಸಲಹೆ ನೀಡಿದ್ದಾರೆ.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕೋವಿಡ್-19 ಸೋಂಕು ನಿರ್ವಹಣೆ ಹಾಗೂ ನಿಯಂತ್ರಣಕ್ಕೆ ಸಂಬಂಧಿಸಿಂತೆ ಸೋಮವಾರ ಹಮ್ಮಿಕೊಳ್ಳಲಾಗಿದ್ದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ಕೊರೋನ ಪಾಸಿಟಿವಿಟಿ ಸೂಚ್ಯಂಕ ಕಡಿಮೆಯಾಗುತ್ತಿದೆ. ಇದೀಗ ಪ್ರತಿದಿನ 15,000 ಕೊರೋನ ತಪಾಸಣೆಗಳನ್ನು ಮಾಡಲಾ ಗುತ್ತಿದೆ. ಈ ಪರೀಕ್ಷೆಗಳ ಸಂಖ್ಯೆಯನ್ನು ಮತ್ತಷ್ಟು ಹೆಚ್ಚಿಸುವ ಮೂಲಕ ಸೋಂಕು ಹರಡುವಿಕೆಯನ್ನು ತಡೆಗಟ್ಟಬಹುದು ಎಂದರು. ಹೋಂ ಕ್ವಾರಂಟೈನ್‌ನಲ್ಲಿರುವ ಕೋವಿಡ್ ಸೋಂಕಿತರು ಹೊರಗೆ ಬಾರದಂತೆ ಆ ಭಾಗದ ವ್ಯಾಪ್ತಿಗೊಳಪಡುವ ಆರೋಗ್ಯ ಇಲಾಖೆಯ ಸಿಬ್ಬಂದಿ, ಜನಪ್ರತಿನಿಧಿಗಳು, ಆಶಾ, ಅಂಗನವಾಡಿ ಕಾರ್ಯಕರ್ತೆಯರು ನಿಗಾವಹಿಸಬೇಕು ಎಂದರು.

ಗ್ರಾಮೀಣ ಮತ್ತು ಪಟ್ಟಣ ಪ್ರದೇಶದಲ್ಲಿನ ವೈದ್ಯಾಧಿಕಾರಿಗಳು ಹಾಗೂ ಸಂಬಂಧಿಸಿದ ಸಿಬ್ಬಂದಿ ಕೋವಿಡ್ ಸೋಂಕಿತರ ಪ್ರಾಥಮಿಕ ಸಂಪರ್ಕಕ್ಕೆ ಬಂದವರನ್ನು ಗುರುತಿಸಬೇಕು. ಸೋಂಕು ಹೊಂದಿದ್ದಲ್ಲಿ ಅವರನ್ನು ಕಡ್ಡಾಯವಾಗಿ ಕೋವಿಡ್ ಕೇರ್ ಸೆಂಟರ್‌ಗಳಿಗೆ ದಾಖಲಿಸಬೇಕು. ಆ ಮೂಲಕವೂ ಸೋಂಕನ್ನು ನಿಯಂತ್ರಿಸಬಹುದು ಎಂದರು.

ಕೋವಿಡ್ ಸೋಂಕಿತರು ಆಯುಷ್ಮಾನ್ ಕಾರ್ಡ್ ಹೊಂದಿರುವ ಬಗ್ಗೆ ಪರಿಶೀಲಿಸಬೇಕು. ಅವರಿಗೆ ಸರಕಾರದಿಂದ ದೊರೆಯುವ ಎಲ್ಲ ಸೌಲಭ್ಯಗಳನ್ನು ಒದಗಿಸಿಕೊಡಬೇಕು ಎಂದು ಅವರು ತಿಳಿಸಿದರು.

ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಮಾತನಾಡಿ, ಜಿಲ್ಲೆಯಲ್ಲಿ ಕೊರೋನ ಪಾಸಿಟಿವಿಟಿ ಸೂಚ್ಯಂಕವು ಶೇ.2.27 ಇದ್ದು, ಹೆಚ್ಚಿನ ಕೋವಿಡ್ ಪರೀಕ್ಷೆಗಳನ್ನು ಮಾಡುವುದರಿಂದ ಹಾಗೂ ಜನಸಾಮಾನ್ಯರು ಕೊರೋನ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವುದರಿಂದ ಸೋಂಕನ್ನು ನಿಯಂತ್ರಿಸಲು ಸಾಧ್ಯವಾಗುತ್ತದೆ ಎಂದರು.

ಜಿಲ್ಲೆಯಲ್ಲಿ ಈವರೆಗೆ 29 ಕಂಟೈನ್‌ಮೆಂಟ್ ಜೋನ್ ಮತ್ತು 28 ಮೈಕ್ರೋ ಕಂಟೈನ್‌ಮೆಂಟ್ ಜೋನ್ ಇದ್ದೂ, ಆಗಸ್ಟ್ 23 ರಿಂದ 29 ರವರೆಗೆ ಒಟ್ಟು 77,888 ಸ್ವಾಬ್‌ಗಳ ಪರೀಕ್ಷೆ ನಡೆಸಲಾಗಿದೆ, ಜಿಲ್ಲೆಗೆ ಪ್ರತಿದಿನ ಬರುವ ಲಸಿಕೆಯನ್ನು ಆಯಾ ದಿನವೇ ಫಲಾನುಭವಿಗಳಿಗೆ ನೀಡಬೇಕು ಎಂದು ಸಂಬಂಧಿಸಿದವರಿಗೆ ನಿರ್ದೇಶನ ನೀಡಿದರು.

ಶಾಸಕರಾದ ವೇದವ್ಯಾಸ್ ಕಾಮತ್, ಮಹಾನಗರ ಪಾಲಿಕೆ ಮೇಯರ್ ಪ್ರೇಮಾನಂದ ಶೆಟ್ಟಿ, ಆಯುಕ್ತ ಅಕ್ಷಯ್ ಶ್ರೀಧರ್, ಪೊಲೀಸ್ ವರಿಷ್ಠಾಧಿ ಕಾರಿ ಋಷಿಕೇಶ್ ಭಗವಾನ್ ಸೋನವಾಣೆ, ಡಿಸಿಪಿ ಹರಿರಾಂ ಶಂಕರ್, ಜಿಪಂ ಉಪಕಾರ್ಯದರ್ಶಿ ಆನಂದ ಕುಮಾರ್ ವೇದಿಕೆಯಲ್ಲಿದ್ದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಕಿಶೋರ್ ಸೇರಿದಂತೆ ಸಂಬಂಧಿಸಿದ ಅಧಿಕಾರಿಗಳು ಸಭೆಯಲ್ಲಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X