Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ‘ಪೋಷಕರಿಲ್ಲದ ಮಕ್ಕಳ ಉಳಿವು...

‘ಪೋಷಕರಿಲ್ಲದ ಮಕ್ಕಳ ಉಳಿವು ಅಪಾಯದಲ್ಲಿದೆ, ಹೃದಯ ಕಲಕುತ್ತಿದೆ’: ಕೋವಿಡ್ ಕುರಿತು ಸುಪ್ರೀಂ ಕೋರ್ಟ್ ಕಳವಳ

ವಾರ್ತಾಭಾರತಿವಾರ್ತಾಭಾರತಿ30 Aug 2021 11:06 PM IST
share
‘ಪೋಷಕರಿಲ್ಲದ ಮಕ್ಕಳ ಉಳಿವು ಅಪಾಯದಲ್ಲಿದೆ, ಹೃದಯ ಕಲಕುತ್ತಿದೆ’: ಕೋವಿಡ್ ಕುರಿತು ಸುಪ್ರೀಂ ಕೋರ್ಟ್ ಕಳವಳ

ಹೊಸದಿಲ್ಲಿ,ಆ.30: ಕೋವಿಡ್-19 ಹಲವು ಜೀವಗಳನ್ನು ಧ್ವಂಸಗೊಳಿಸಿದೆ ಮತ್ತು ಸಾಂಕ್ರಾಮಿಕದ ಸಂದರ್ಭದಲ್ಲಿ ಒಬ್ಬರು ಅಥವಾ ಇಬ್ಬರೂ ಪೋಷಕರನ್ನು ಕಳೆದುಕೊಂಡಿರುವ ಮಕ್ಕಳ ಉಳಿವು ಅಪಾಯದಲ್ಲಿರುವುದು ಹೃದಯವನ್ನು ಕಲಕುತ್ತಿದೆ ಎಂದು ಸರ್ವೋಚ್ಚ ನ್ಯಾಯಾಲಯವು ಹೇಳಿದೆ. ಆದರೆ ಇಂತಹ ಮಕ್ಕಳಿಗಾಗಿ ಕೇಂದ್ರ ಮತ್ತು ರಾಜ್ಯ ಸರಕಾರಗಳು ಪ್ರಕಟಿಸಿರುವ ಯೋಜನೆಗಳ ಬಗ್ಗೆ ತೃಪ್ತಿಯನ್ನು ಅದು ವ್ಯಕ್ತಪಡಿಸಿದೆ.

‌
ಕೋವಿಡ್ ಸಾಂಕ್ರಾಮಿಕದ ಸಂದರ್ಭದಲ್ಲಿ ಅನಾಥರಾಗಿರುವ ಅಥವಾ ಹೆತ್ತವರಲ್ಲೋರ್ವರನ್ನು ಕಳೆದುಕೊಂಡಿರುವ ಮಕ್ಕಳನ್ನು ಗುರುತಿಸುವಲ್ಲಿ ಕಾರ್ಯಾಂಗವು ತೃಪ್ತಿಕರ ಪ್ರಗತಿಯನ್ನು ಮಾಡಿದೆ ಎಂದು ಹೇಳಿದ ನ್ಯಾಯಮೂರ್ತಿಗಳಾದ ಎಲ್.ನಾಗೇಶ್ವರರಾವ್ ಮತ್ತು ಅನಿರುದ್ಧ ಬೋಸ್ ಅವರ ಪೀಠವು,‘ಅಗತ್ಯವಿರುವ ಮಕ್ಕಳಿಗೆ ನೆಮ್ಮದಿಯನ್ನು ಕಲ್ಪಿಸಲು ಕೇಂದ್ರ ಮತ್ತು ರಾಜ್ಯ ಸರಕಾರಗಳು/ಕೇಂದ್ರಾಡಳಿತ ಪ್ರದೇಶಗಳು ಯೋಜನೆಗಳನ್ನು ಪ್ರಕಟಿಸಿರುವುದು ನಮಗೆ ಸಮಾಧಾನವನ್ನುಂಟು ಮಾಡಿದೆ. 

ಸಂಕಷ್ಟದಲ್ಲಿರುವ ಮಕ್ಕಳಿಗೆ ಪ್ರಾಥಮಿಕ ಅಗತ್ಯಗಳನ್ನು ತಕ್ಷಣ ಒದಗಿಸುವಲ್ಲಿ ಸಂಬಂಧಿಸಿದ ಅಧಿಕಾರಿಗಳು ಎಲ್ಲ ಪ್ರಯತ್ನಗಳನ್ನು ಮಾಡುತ್ತಾರೆ ಎನ್ನುವುದರಲ್ಲಿ ನಮಗೆ ಯಾವುದೇ ಸಂಶಯವಿಲ್ಲ ’ ಎಂದು ಹೇಳಿತು.

‘ಮಕ್ಕಳ ರಕ್ಷಣಾ ಗೃಹಗಳಲ್ಲಿ ಕೋವಿಡ್ ಸಾಂಕ್ರಾಮಿಕ ’ಕುರಿತು ಸ್ವಯಂಪ್ರೇರಿತ ಅರ್ಜಿಯ ವಿಚಾರಣೆಯನ್ನು ಕೈಗೆತ್ತಿಕೊಂಡಿದ್ದ ಸರ್ವೋಚ್ಚ ನ್ಯಾಯಾಲಯವು,ಸಾಂಕ್ರಾಮಿಕದ ಸಂದರ್ಭದಲ್ಲಿ ಒಂದು ಲಕ್ಷಕ್ಕೂ ಅಧಿಕ ಮಕ್ಕಳು ಒಬ್ಬರು ಅಥವಾ ಇಬ್ಬರೂ ಪೋಷಕರನ್ನು ಕಳೆದುಕೊಂಡಿದ್ದಾರೆ ಎಂದು ಬೆಟ್ಟುಮಾಡಿತು.
 
ಕಾಳಜಿ ಮತ್ತು ರಕ್ಷಣೆಯ ಅಗತ್ಯವುಳ್ಳ ಮಕ್ಕಳನ್ನು ಗುರುತಿಸಲು ಮಕ್ಕಳ ಕಲ್ಯಾಣ ಸಮಿತಿಗಳು ಬಾಲನ್ಯಾಯ (ಮಕ್ಕಳ ಆರೈಕೆ ಮತ್ತು ರಕ್ಷಣೆ) ಕಾಯ್ದೆ,2015ರ ಅನುಸಾರ ವಿಚಾರಣೆಗಳನ್ನು ತ್ವರಿತಗೊಳಿಸಬೇಕು,ಅಗತ್ಯವುಳ್ಳ ಅಪ್ರಾಪ್ತವಯಸ್ಕ ಮಕ್ಕಳಿಗೆ ಯೋಜನೆಗಳ ಲಾಭಗಳು ದೊರೆಯುವುದನ್ನು ಖಚಿತಪಡಿಸಿಕೊಳ್ಳಲು ತಕ್ಷಣ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಹೇಳಿದ ನ್ಯಾಯಾಲಯವು,ಎಲ್ಲ ಮಕ್ಕಳು ಉಚಿತ ಮತ್ತು ಕಡ್ಡಾಯ ಪ್ರಾಥಮಿಕ ಶಿಕ್ಷಣದ ಸಾಂವಿಧಾನಿಕ ಹಕ್ಕನ್ನು ಹೊಂದಿದ್ದಾರೆ ಮತ್ತು ಮಕ್ಕಳಿಗೆ ಶಿಕ್ಷಣ ಸೌಲಭ್ಯವನ್ನು ಒದಗಿಸುವುದು ಸರಕಾರದ ಕರ್ತವ್ಯ ಮತ್ತು ಬಾಧ್ಯತೆಯಾಗಿದೆ ಎಂದು ಹೇಳಿತು.

ಕೋವಿಡ್ ಬಾಧಿತ ಮಕ್ಕಳ ಬೆಂಬಲ ಮತ್ತು ಸಬಲೀಕರಣಕ್ಕಾಗಿ ಪ್ರಾರಂಭಿಸಲಾಗಿರುವ ‘ಪಿಎಂ ಕೇರ್ಸ್ ಫಾರ್ ಚಿಲ್ಡ್ರನ್ ’ಯೋಜನೆಯಡಿ 18ವರ್ಷ ಪ್ರಾಯದವರೆಗಿನ ಅರ್ಹ ಮಕ್ಕಳಿಗೆ ಶಿಕ್ಷಣ ಸೌಲಭ್ಯವನ್ನು ಒದಗಿಸಲಾಗುವುದು ಎಂಬ ಕೇಂದ್ರ ಸರಕಾರದ ಪರ ಹೆಚ್ಚುವರಿ ಸಾಲಿಸಿಟರ್ ಜನರಲ್ ಐಶ್ವರ್ಯಾ ಭಾಟಿಯವರ ಹೇಳಿಕೆಯನ್ನು ಪೀಠವು ಗಮನಕ್ಕೆ ತೆಗೆದುಕೊಂಡಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X