Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮೊಬೈಲ್ ಆ್ಯಪ್ ಬೆಳೆ ಸಮೀಕ್ಷೆ ಯಶಸ್ಸಿಗೆ...

ಮೊಬೈಲ್ ಆ್ಯಪ್ ಬೆಳೆ ಸಮೀಕ್ಷೆ ಯಶಸ್ಸಿಗೆ ಎಲ್ಲರೂ ಕೈಜೋಡಿಸಿ: ಸಚಿವ ಬಿ.ಸಿ.ಪಾಟೀಲ್ ಮನವಿ

ವಾರ್ತಾಭಾರತಿವಾರ್ತಾಭಾರತಿ31 Aug 2021 11:43 PM IST
share
ಮೊಬೈಲ್ ಆ್ಯಪ್ ಬೆಳೆ ಸಮೀಕ್ಷೆ ಯಶಸ್ಸಿಗೆ ಎಲ್ಲರೂ ಕೈಜೋಡಿಸಿ: ಸಚಿವ ಬಿ.ಸಿ.ಪಾಟೀಲ್ ಮನವಿ

ಬೆಂಗಳೂರು, ಆ.31: ರಾಜ್ಯದಲ್ಲಿ ಕಳೆದ ವರ್ಷದಿಂದ ಕೈಗೊಂಡಿರುವ ಮೊಬೈಲ್ ಆ್ಯಪ್ ಬೆಳೆ ಸಮೀಕ್ಷೆ ದೇಶದಾದ್ಯಂತ ಗಮನ ಸೆಳೆದಿದ್ದು, ಕೇಂದ್ರದಿಂದ ಮೆಚ್ಚುಗೆಗೆ ಪಾತ್ರವಾಗಿರುವ ಈ ಮೊಬೈಲ್ ಬೆಳೆ ಸಮೀಕ್ಷೆ ಈ ಬಾರಿಯೂ ಯಶಸ್ವಿಯಾಗಬೇಕೆಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಸೂಚಿಸಿದ್ದಾರೆ.

ಮಂಗಳವಾರ ವಿಕಾಸಸೌಧದಲ್ಲಿರುವ ತಮ್ಮ ಕಚೇರಿಯಲ್ಲಿ ಕೃಷಿ ಇಲಾಖೆಯ ಅಧಿಕಾರಿಗಳೊಂದಿಗೆ 2021-22ನೇ ಸಾಲಿನ ಮೊಬೈಲ್ ಆ್ಯಪ್ ಬೆಳೆ ಸಮೀಕ್ಷೆ ಪ್ರಗತಿ ಕುರಿತು ಸಭೆ ನಡೆಸಿದ ಅವರು, ಕಳೆದ ವರ್ಷ ರಾಜ್ಯಾದ್ಯಂತ ಬೆಳೆ ಸಮೀಕ್ಷೆ ಕ್ಷಿಪ್ರ ಗತಿಯಲ್ಲಿ ಇತರೆ ಇಲಾಖೆಗಳ ಸಹಯೋಗದಲ್ಲಿ ಕೈಗೊಂಡು ಯಶಸ್ವಿಯೂ ಆಗಿದೆ ಎಂದರು.

ಇತರೆ ರಾಜ್ಯಗಳಿಗೆ ಕರ್ನಾಟಕ ಕೃಷಿ ಇಲಾಖೆಯ ಈ ಸಾಧನೆ ಮಾದರಿಯೂ ಆಗಿದೆ. ಕೇಂದ್ರದಿಂದ ಅಗ್ರಿ ಟ್ರೆಂಡ್ ಸೆಟ್ಟರ್ ಎಂಬ ಹೆಗ್ಗಳಿಕೆಗೂ ಪಾತ್ರವಾಗಿದೆ. ಇಂತಹ ಸಾಧನೆ ಇನ್ನು ಮುಂದೆಯೂ ಆಗಬೇಕು. ರೈತ ತಾನೇ ತನ್ನ ಬೆಳೆಗೆ ಪ್ರಮಾಣ ಪತ್ರ ನೀಡುವಂತಹ ಜಮೀನಿಗೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಅರ್ಹನೆಂದು ಹೇಳಿಕೊಳ್ಳುವಂತಹ ಮೊಬೈಲ್ ಬೆಳೆ ಸಮೀಕ್ಷೆ ನಿರಂತರ ನಡೆಯಬೇಕು. ಕಳೆದ ಬಾರಿಯಂತೆ ಎಲ್ಲ ಕೃಷಿ ಅಧಿಕಾರಿಗಳು ಈ ಪ್ರಕ್ರಿಯೆ ಯಶಸ್ಸಿಗೆ ಮತ್ತೆ ಚುರುಕಾಗಿ ಕೆಲಸ ಮಾಡಬೇಕು ಎಂದು ಅವರು ಸೂಚಿಸಿದರು.

2021-22ನೇ ಸಾಲಿನಲ್ಲಿ ಪೂರ್ವ ಮುಂಗಾರಿನಲ್ಲಿ 2.94 ಲಕ್ಷ ತಾಕುಗಳನ್ನು ರೈತರೇ ಸ್ವತಃ ರೈತರ ಆ್ಯಪ್‍ನಲ್ಲಿ ಹಾಗೂ 44.77 ಲಕ್ಷ ತಾಕುಗಳನ್ನು ಖಾಸಗಿ ನಿವಾಸಿಗಳ ಆ್ಯಪ್‍ನಲ್ಲಿ ಬೆಳೆ ಮಾಹಿತಿಯನ್ನು ದಾಖಲು ಮಾಡಲಾಗಿದೆ. 2021-22ನೇ ಸಾಲಿನಲ್ಲಿ ಮುಂಗಾರಿನಲ್ಲಿ 6.18 ಲಕ್ಷ ತಾಕುಗಳನ್ನು ರೈತರೇ ಸ್ವತಃ ರೈತರ ಆ್ಯಪ್‍ನಲ್ಲಿ ಹಾಗೂ 0.66 ಲಕ್ಷ ತಾಕುಗಳನ್ನು ಖಾಸಗಿ ನಿವಾಸಿಗಳ ಆ್ಯಪ್‍ನಲ್ಲಿ ಆ.30 ರವರೆಗೆ ಅಪೆÇ್ಲೀಡ್ ಮಾಡಲಾಗಿದ್ದು ಬೆಳೆ ಸಮೀಕ್ಷೆಯು ಪ್ರಗತಿಯಲ್ಲಿದೆ ಎಂದು ಅವರು ಹೇಳಿದರು.

ಪ್ರತಿ ವರ್ಷದಂತೆ ಈ ವರ್ಷವೂ ಮುಂಗಾರು ಹಂಗಾಮಿನಲ್ಲಿ ಸುಮಾರು 2.09 ಕೋಟಿ ತಾಕುಗಳಲ್ಲಿ ಬೆಳೆ ಸಮೀಕ್ಷೆ ಕಾರ್ಯವನ್ನು ಕೈಗೊಳ್ಳಲಿದ್ದು, ರೈತರಿಂದಲೇ ಅವರ ಜಮೀನಿನ ಬೆಳೆ ಮಾಹಿತಿಯನ್ನು ಆ್ಯಪ್ ಮೂಲಕ ಅಪ್ಲೋಡ್ ಮಾಡಿಸುವ ಉದ್ದೇಶವನ್ನು ಹೊಂದಿದ್ದು, ತಮ್ಮ ಜಮೀನಿನ ಬೆಳೆ ಮಾಹಿತಿಯನ್ನು ರೈತರೇ ಸ್ವತಃ ಬೆಳೆ  ಸಮೀಕ್ಷೆ ಮಾಹಿತಿಯನ್ನು  ದಾಖಲಿಸಬೇಕೆಂದು ಬಿ.ಸಿ.ಪಾಟೀಲ್ ಈ ಮೂಲಕ ಮತ್ತೆ ರೈತರಲ್ಲಿ ಮನವಿ ಮಾಡಿದ್ದಾರೆ.

ಸಭೆಯಲ್ಲಿ ಕೃಷಿ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಜ್ ಕುಮಾರ್ ಖತ್ರಿ, ಆಯುಕ್ತ ಬ್ರಿಜೆಶ್ ಕುಮಾರ್ ದೀಕ್ಷಿತ್, ನಿರ್ದೇಶಕ ಶ್ರೀನಿವಾಸ್ ಸೇರಿದಂತೆ ಮತ್ತಿತ್ತರರು ಪಾಲ್ಗೊಂಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X