Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ರಾಜ್ಯದಲ್ಲಿ ಯಾವಾಗ ಬೇಕಾದರೂ ಚುನಾವಣೆ...

ರಾಜ್ಯದಲ್ಲಿ ಯಾವಾಗ ಬೇಕಾದರೂ ಚುನಾವಣೆ ಬರಬಹುದು : ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್

ವಾರ್ತಾಭಾರತಿವಾರ್ತಾಭಾರತಿ1 Sept 2021 2:08 PM IST
share
ರಾಜ್ಯದಲ್ಲಿ ಯಾವಾಗ ಬೇಕಾದರೂ ಚುನಾವಣೆ ಬರಬಹುದು : ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್

ತುಮಕೂರು : ಪ್ರಸ್ತುತ ರಾಜಕೀಯ ವಿದ್ಯಮಾನಗಳನ್ನು ಗಮನಿಸಿದರೆ ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ಯಾವಾಗ ಬೇಕಾದರೂ ಬರಬಹುದು. ಹಾಗಾಗಿ ಕಾರ್ಯಕರ್ತರು, ಮುಖಂಡರು ಚುನಾವಣೆ ಎದುರಿಸಲು ಸಿದ್ಧರಾಗಬೇಕಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ತಿಳಿಸಿದ್ದಾರೆ.

ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಆಗಮಿಸಿ, ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು, ಮುಂದಿನ ಕೆಲವೇ ದಿನಗಳಲ್ಲಿ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಚುನಾವಣೆಗಳು ಎದುರಾಗಲಿವೆ. ಇದರ ಜೊತೆಗೆ ಸ್ಥಳೀಯ ಸಂಸ್ಥೆಗಳಿಂದ ಆಯ್ಕೆಯಾಗುವ ವಿಧಾನ ಪರಿಷತ್ ಚುನಾವಣೆಯೂ ಎದುರಾಗಲಿದೆ. ಹಾಗಾಗಿ ಪಕ್ಷದ ಕಾರ್ಯಕರ್ತರು, ಮುಖಂಡರು, ಹೋಬಳಿ ಮತ್ತು ಬೂತ್ ಮಟ್ಟದಲ್ಲಿ ಯುವ ಕಾರ್ಯಪಡೆ ರಚಿಸಿಕೊಂಡು, ಪಕ್ಷದ ಪರ ಕೆಲಸ ಮಾಡುವ ಮೂಲಕ ಅತಿ ಹೆಚ್ಚು ಸ್ಥಾನ ಪಡೆಯುವಂತೆ ಮಾಡಬೇಕಾಗಿದೆ ಎಂದರು.

ಒಂದು ಕಾಲದಲ್ಲಿ ಜಿಲ್ಲೆಯಲ್ಲಿ ಪಕ್ಷ 13ರಲ್ಲಿ 9 ಸ್ಥಾನಗಳನ್ನು ಗೆದ್ದ ಉದಾಹರಣೆ ಇದೆ. ಈಗಲೂ ಪಕ್ಷ ಸದೃಢವಾಗಿದೆ. ಪಕ್ಷದ ಪರವಾಗಿ ಮುಖಂಡರಾದ ಡಾ.ಜಿ.ಪರಮೇಶ್ವರ್, ಟಿ.ಬಿ.ಜಯಚಂದ್ರ, ಕೆ.ಎನ್.ರಾಜಣ್ಣ ಸೇರಿದಂತೆ ಎಲ್ಲಾ ನಾಯಕರು ತಮ್ಮ ಶಕ್ತಿ ಮೀರಿ ದುಡಿಯುತ್ತಿದ್ದಾರೆ. ಅವರ ಹಾದಿಯಲ್ಲಿಯೇ ಇತರೆ ನಾಯಕರು ಸಹ ಪಕ್ಷವನ್ನು ಬಲಪಡಿಸಲು ಪ್ರಯತ್ನ ನಡೆಸುತ್ತಿದ್ದಾರೆ. ಇದರ ಫಲವಾಗಿ ಮುಂಬರುವ ಚುನಾವಣೆಗಳಲ್ಲಿ ಪಕ್ಷದ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಗೆಲುವು ಸಾಧಿಸಲಿದ್ದಾರೆ ಎಂಬ ವಿಶ್ವಾಸವಿದೆ. ನಾವು, ನೀವುಗಳೆಲ್ಲರೂ ಒಗ್ಗೂಡಿ ಈ ಕಾರ್ಯವನ್ನು ಯಶಸ್ವಿಗೊಳಿಸುವ ಗುರುತರ ಜವಾಬ್ದಾರಿ ನಮ್ಮಗೆಲ್ಲರ ಮೇಲಿದೆ ಎಂದು ಸಲೀಂ ಅಹ್ಮದ್ ನುಡಿದರು.

ರಾಜ್ಯದಲ್ಲಿ ಅಧಿಕಾರದಲ್ಲಿರುವ ಸರಕಾರಕ್ಕೆ ಜೀವವೇ ಇಲ್ಲ. ಇದೊಂದು ನಿಜೀರ್ವ ಸರಕಾರ. ಮಹಿಳೆಯರು, ಮಕ್ಕಳ ಮೇಲಿನ ಅತ್ಯಾಚಾರ ಏರು ಮುಖವಾಗಿದೆ. ಅಲ್ಲದೆ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಇದನ್ನು ತಹಬದಿಗೆ ತರಬೇಕಾದ ಗೃಹ ಸಚಿವರು ಉಡಾಫೆ ಉತ್ತರ ನೀಡುತ್ತಾ ಕಾಲ ಕಳೆಯುತ್ತಿದ್ದಾರೆ.ಈ ಎಲ್ಲಾ ಅಂಶಗಳನ್ನು ಜನರ ಮುಂದಿಡುವ ಕೆಲಸವನ್ನು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಮಾಡಬೇಕಾ ಗಿದೆ ಎಂದು ಸಲೀಂ ತಿಳಿಸಿದರು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್.ರಾಮಕೃಷ್ಣ ಮಾತನಾಡಿದರು. ವೇದಿಕೆಯಲ್ಲಿ ಜಿಲ್ಲಾ ಕಾಂಗ್ರೆಸ್ ಮಾಜಿ ಅಧ್ಯಕ್ಷ ಎಸ್.ಶಾಫಿ ಅಹ್ಮದ್, ಮಾಜಿ ಶಾಸಕ ಡಾ.ರಫೀಕ್ ಅಹ್ಮದ್, ಕೆಪಿಸಿಸಿ ವಕ್ತಾರರಾದ ಮುರುಳೀಧರ ಹಾಲಪ್ಪ, ಯಲಚವಾಡಿ ನಾಗರಾಜು, ಚಂದ್ರಶೇಖರಗೌಡ, ಮರಿಚನ್ನಮ್ಮ, ಸುಜಾತ, ಪುಟ್ಟರಾಜು, ರೇವಣ್ಣಸಿದ್ದಯ್ಯ ಮತ್ತಿತರರು ಉಪಸ್ಥಿತರಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X