Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕಾಂಗ್ರೆಸ್ ಇಪ್ಪತ್ತು ವರ್ಷದಲ್ಲಿ...

ಕಾಂಗ್ರೆಸ್ ಇಪ್ಪತ್ತು ವರ್ಷದಲ್ಲಿ ನಿರ್ನಾಮ ಆಗಲಿದೆ: ಸಚಿವ ಉಮೇಶ್ ಕತ್ತಿ

''ಕರ್ನಾಟಕದ ಮುಸ್ಲಿಮರು ಭಾರತೀಯ ಜನತಾ ಪಕ್ಷಕ್ಕೆ ಮತ ಹಾಕಬೇಕು''

ವಾರ್ತಾಭಾರತಿವಾರ್ತಾಭಾರತಿ1 Sept 2021 6:05 PM IST
share
ಕಾಂಗ್ರೆಸ್ ಇಪ್ಪತ್ತು ವರ್ಷದಲ್ಲಿ ನಿರ್ನಾಮ ಆಗಲಿದೆ: ಸಚಿವ ಉಮೇಶ್ ಕತ್ತಿ

ಬೆಳಗಾವಿ, ಸೆ. 1: `ಪ್ರತಿಪಕ್ಷ ಕಾಂಗ್ರೆಸ್ ಇನ್ನು 20 ವರ್ಷದಲ್ಲಿ ನಿರ್ನಾಮ ಆಗಲಿದೆ. ಆ ಮೂಲಕ ವಾಜಪೇಯಿ ಅವರ ಕನಸು ನನಸಾಗುತ್ತದೆ' ಎಂದು ಆಹಾರ ಸಚಿವ ಉಮೇಶ್ ಕತ್ತಿ ಹೇಳಿದ್ದಾರೆ.

ಬುಧವಾರ ಜಿಲ್ಲೆಯ ಹುಕ್ಕೇರಿ ಪಟ್ಟಣದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಉಮೇಶ್ ಕತ್ತಿ, `ಕರ್ನಾಟಕದ ಮುಸ್ಲಿಮರು ಭಾರತೀಯ ಜನತಾ ಪಕ್ಷಕ್ಕೆ ಮತ ಹಾಕಬೇಕು. ಎಂಐಎಂ ಎಂದರೆ ಅವರು ಪಾಕಿಸ್ತಾನದಿಂದ ಬಂದವರು ಅಲ್ಲ. ಭಾರತದಲ್ಲಿ ಹುಟ್ಟಿರುವ ಮುಸ್ಲಿಮರು, ಬೆಳಗಾವಿ ಪಾಲಿಕೆ ಚುನಾವಣೆಯಲ್ಲಿ ಎಂಇಎಸ್ ದೂರ ಇಡಲು ಬಿಜೆಪಿ ಪಕ್ಷಕ್ಕೆ ಮತ ಹಾಕಬೇಕು' ಎಂದು ಮನವಿ ಮಾಡಿದರು.

`ಎಂಐಎಂ ಹಾಗೂ ಎಂಇಎಸ್ ಧ್ವಜಗಳು ಚುನಾವಣೆ ಬಂದಾಗ ಮಾತ್ರ ಕಾಣುತ್ತಿವೆ. ಅಭಿವೃದ್ಧಿಗಾಗಿ ನಾವು ನಿರಂತರ ದೇಶ ಆಳುತ್ತಿದ್ದೇವೆ. ಹೀಗಾಗಿ ಬೆಳಗಾವಿ ಪಾಲಿಕೆಯಲ್ಲಿ ಬಿಜೆಪಿ ಪಕ್ಷಕ್ಕೆ ಅವಕಾಶ ನೀಡಿ. ಎಂಐಎಂ ಬಿಜೆಪಿ ಪಕ್ಷದ ಏಜೆಂಟ್ ಎನ್ನುವ ಆರೋಪ ವಿಚಾರವಾಗಿ ಬಿಜೆಪಿ ಪಕ್ಷ ಜನರ ಹಾಗೂ ಅಭಿವೃದ್ಧಿಯ ಏಜೆಂಟ್. ಬೆಳಗಾವಿ ಪಾಲಿಕೆಯಲ್ಲಿ 35ಕ್ಕೂ ಅಧಿಕ ಸೀಟು ಗೆಲ್ಲುತ್ತೇವೆ. ಎಂಇಎಸ್ ಜೊತೆಗೆ ಯಾವುದೇ ಹೊಂದಾಣಿಕೆ ಇಲ್ಲ' ಎಂದು ಉಮೇಶ್ ಸ್ಪಷ್ಟಪಡಿಸಿದರು

`ಕಾಂಗ್ರೆಸ್ ಹಾಗೂ ಎಂಇಎಸ್ ಎರಡು ಸೇರಿ ಆಡಳಿತ ಮಾಡುತ್ತಿವೆ. ಜನ ಈ ಎರಡೂ ಪಕ್ಷಗಳಿಗೆ ಬುದ್ಧಿ ಕಲಿಸಬೇಕಿದೆ. ಐದು ವರ್ಷದಲ್ಲಿ ಅಭಿವೃದ್ಧಿ ಮಾಡಲಿಲ್ಲ ಎಂದರೆ ನಮ್ಮನ್ನು ಮನೆಗೆ ಕಳುಹಿಸಿ. ಬೆಳಗಾವಿಗೆ ಕೇಂದ್ರ ಸರಕಾರ ಒಂದು ಸಾವಿರ ಕೋಟಿ ರೂ.ಅನುದಾನ ನೀಡಿದೆ. ರಾಜ್ಯದಲ್ಲಿ ಹಾಗೂ ಕೇಂದ್ರದಲ್ಲಿ ಬಿಜೆಪಿ ಪಕ್ಷ ಇನ್ನೂ 20 ವರ್ಷ ಅಧಿಕಾರದಲ್ಲಿರುತ್ತದೆ. ಬೆಳಗಾವಿಯ ಮಹಾನಗರ ಪಾಲಿಕೆಯಲ್ಲೂ 20 ವರ್ಷ ಬಿಜೆಪಿ ಅಧಿಕಾರದಲ್ಲಿರಬೇಕು' ಎಂದು ಉಮೇಶ್ ಕತ್ತಿ ಅಭಿಪ್ರಾಯಪಟ್ಟರು.

ಈ ಸಂದರ್ಭದಲ್ಲಿ ಪುರಸಭೆ ಸದಸ್ಯ ಮಹಾವೀರ ನಿಲಜಗಿ, ಬಿಜೆಪಿ ಮುಖಂಡರಾದ ಪರಗೌಡ ಪಾಟೀಲ್, ಗುರು ಕುಲಕರ್ಣಿ, ರೋಹಿತ ಚೌಗಲಾ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X