ದ.ಕ. ಜಿಲ್ಲೆಯಲ್ಲಿ ಬುಧವಾರ ಕೋವಿಡ್ಗೆ ಐವರು ಬಲಿ; 191 ಮಂದಿಗೆ ಸೋಂಕು ದೃಢ
![ದ.ಕ. ಜಿಲ್ಲೆಯಲ್ಲಿ ಬುಧವಾರ ಕೋವಿಡ್ಗೆ ಐವರು ಬಲಿ; 191 ಮಂದಿಗೆ ಸೋಂಕು ದೃಢ ದ.ಕ. ಜಿಲ್ಲೆಯಲ್ಲಿ ಬುಧವಾರ ಕೋವಿಡ್ಗೆ ಐವರು ಬಲಿ; 191 ಮಂದಿಗೆ ಸೋಂಕು ದೃಢ](https://www.varthabharati.in/sites/default/files/images/articles/2021/09/1/304889-1630507797.jpg)
ಸಾಂದರ್ಭಿಕ ಚಿತ್ರ
ಮಂಗಳೂರು, ಸೆ.1: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ 191 ಮಂದಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದ್ದು, 278 ಮಂದಿ ಗುಣಮುಖರಾಗಿದ್ದಾರೆ. 5 ಮಂದಿ ಸಾವಿಗೀಡಾಗಿದ್ದಾರೆ. ಪ್ರಸ್ತುತ ಜಿಲ್ಲೆಯ ಪಾಸಿಟಿವಿಟಿ ದರ ಶೇ.2ರಷ್ಟಿದೆ.
ಇದುವರೆಗಿನ ಒಟ್ಟು ಸೋಂಕಿತರ ಸಂಖ್ಯೆ 1,10,217ಕ್ಕೇರಿದ್ದು, ಅವರಲ್ಲಿ 1,06,408 ಮಂದಿ ಗುಣಮುಖರಾಗಿದ್ದಾರೆ. ಒಟ್ಟು 1579 ಮಂದಿ ಸಾವಿಗೀಡಾಗಿದ್ದಾರೆ. ಪ್ರಸ್ತುತ 2230 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದುವರೆಗೆ ಒಟ್ಟು 86,287 ಮಾಸ್ಕ್ ಉಲ್ಲಂಘನೆ ಪ್ರಕರಣಗಳು ದಾಖಲಾಗಿದ್ದು, 1,04,84,020 ರೂ. ದಂಡ ವಸೂಲಿ ಮಾಡಲಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.
Next Story