ಬೆಂಗಳೂರಿನಲ್ಲಿ ಸೆ.13ರವರೆಗೆ ನೈಟ್ ಕರ್ಫ್ಯೂ ವಿಸ್ತರಣೆ

ಬೆಂಗಳೂರು, ಸೆ.1: ರಾಜಧಾನಿ ಬೆಂಗಳೂರು ವ್ಯಾಪ್ತಿಯಲ್ಲಿ ಕೋವಿಡ್ ಸಂಬಂಧ ಜಾರಿಯಲ್ಲಿದ್ದ ನೈಟ್ ಕರ್ಫ್ಯೂ ಅನ್ನು ಸೆ.13ರವರೆಗೆ ವಿಸ್ತರಣೆ ಮಾಡಿ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಆದೇಶ ಹೊರಡಿಸಿದ್ದಾರೆ.
ಆದೇಶ ಹಿನ್ನೆಲೆ ಈ ಅವಧಿಯಲ್ಲಿ ರಾತ್ರಿ ಕರ್ಫ್ಯೂ 9 ರಿಂದ ಬೆಳಗ್ಗೆ 5 ಗಂಟೆಯವರೆಗೆ ಜಾರಿಯಲ್ಲಿರುತ್ತದೆ. ಇನ್ನು, ಸಾರ್ವಜನಿಕ ಸ್ಥಳಗಳಲ್ಲಿ ನಾಲ್ಕಕ್ಕಿಂತ ಹೆಚ್ಚು ಜನರ ಸಭೆ ನಿಬರ್ಂಧಿಸಲಾಗಿದೆ. ಆದರೆ, ಬಸ್ ನಿಲ್ದಾಣಗಳು, ಮೆಟ್ರೋ ನಿಲ್ದಾಣ, ರೈಲ್ವೆ ನಿಲ್ದಾಣ ಮತ್ತು ವಿಮಾನ ನಿಲ್ದಾಣಗಳು ಆದೇಶದಿಂದ ವಿನಾಯಿತಿ ದೊರೆತಿದೆ.
ನಿಷೇಧಾಜ್ಞೆ ಉಲ್ಲಂಘಿಸುವವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ, 2005, ಕರ್ನಾಟಕ ಸಾಂಕ್ರಾಮಿಕ ರೋಗಗಳ ಕಾಯಿದೆ, 2020ರ ಅಡಿ ಮತ್ತು ಐಪಿಸಿ ಸೆಕ್ಷನ್ 188ರ ಅಡಿ ಅಪರಾಧ ಎಂದು ಪರಿಗಣಿಸಲಾಗುತ್ತದೆ ಎಂದು ಆಯುಕ್ತರು ಎಚ್ಚರಿಸಿದ್ದಾರೆ.
Next Story





