ಉಡುಪಿ: ಕೋವಿಡ್ ಗೆ ಇಬ್ಬರು ಬಲಿ; 91 ಮಂದಿಗೆ ಸೋಂಕು ದೃಢ

ಸಾಂದರ್ಭಿಕ ಚಿತ್ರ
ಉಡುಪಿ, ಸೆ.1: ಬುಧವಾರ ಜಿಲ್ಲೆಯಲ್ಲಿ ಹೊಸದಾಗಿ 91 ಮಂದಿ ಕೊರೋನಕ್ಕೆ ಪಾಸಿಟಿವ್ ಬಂದಿದ್ದಾರೆ. ಇಂದು ಇಬ್ಬರು ಜಿಲ್ಲೆಯಲ್ಲಿ ಮೃತರಾದರೆ, ಇಂದು 171 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. ಸೋಂಕಿಗೆ ಸಕ್ರಿಯರಾಗಿರುವವರ ದಿನದಲ್ಲಿ 1432ಕ್ಕಿಳಿದಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನಾಗಭೂಷಣ ಉಡುಪ ತಿಳಿಸಿದ್ದಾರೆ.
ಕಾರ್ಕಳ ತಾಲೂಕಿನ 63 ವರ್ಷ ಪ್ರಾಯದ ಮಹಿಳೆ ಹಾಗೂ ಉಡುಪಿ ತಾಲೂಕಿನ 58 ವರ್ಷ ಪ್ರಾಯದ ಪುರುಷ ಇಂದು ಖಾಸಗಿ ಆಸ್ಪತ್ರೆಯಲ್ಲಿ ಸೋಂಕಿನಿಂದ ಮೃತಪಟ್ಟಿದ್ದಾರೆ. ಆ.25ರಂದು ಕೆಮ್ಮು, ಜ್ವರ ಹಾಗೂ ತೀವ್ರ ಉಸಿರಾಟ ತೊಂದರೆಯೊಂದಿಗೆ ನ್ಯುಮೋನಿಯಾ ಜ್ವರಕ್ಕಾಗಿ ಆಸ್ಪತ್ರೆಗೆ ದಾಖಲಾಗಿದ್ದ ಇವರು ಸೆ.1ರಂದು ಮೃತಪಟ್ಟಿದ್ದಾರೆ. ಹೀಗಾಗಿ ಸೋಂಕಿನಿಂದ ಜಿಲ್ಲೆಯಲ್ಲಿ ಮೃತರ ಸಂಖ್ಯೆ 455ಕ್ಕೇರಿದೆ.
ಹೀಗಾಗಿ ಸೋಂಕಿನಿಂದ ಜಿಲ್ಲೆ ಯಲ್ಲಿ ಮೃತರ ಸಂಖ್ಯೆ 455ಕ್ಕೇರಿದೆ. ಇಂದು ಕೊರೋನ ಸೋಂಕು ದೃಢಪಟ್ಟ 91 ಮಂದಿಯಲ್ಲಿ 40 ಮಂದಿ ಪುರುಷರು ಹಾಗೂ 51 ಮಂದಿ ಮಹಿಳೆಯರು. ಪಾಸಿಟಿವ್ ಬಂದವರಲ್ಲಿ 55 ಮಂದಿ ಉಡುಪಿ ತಾಲೂಕು, 21 ಮಂದಿ ಕುಂದಾಪುರ ಹಾಗೂ 15 ಮಂದಿ ಕಾರ್ಕಳ ತಾಲೂಕಿನವರು. ಇವರಲ್ಲಿ 24 ಮಂದಿ ಕೋವಿಡ್ ಆಸ್ಪತ್ರೆ ಹಾಗೂ 67 ಮಂದಿ ಮನೆಗಳಲ್ಲಿ ಚಿಕಿತ್ಸೆ ಪಡೆಯುತಿದ್ದಾರೆ.
ಇಂದು ಕೊರೋನ ಸೋಂಕು ದೃಢಪಟ್ಟ 91 ಮಂದಿಯಲ್ಲಿ 40 ಮಂದಿ ಪುರುಷರು ಹಾಗೂ 51 ಮಂದಿ ಮಹಿಳೆಯರು. ಪಾಸಿಟಿವ್ ಬಂದವರಲ್ಲಿ 55 ಮಂದಿ ಉಡುಪಿ ತಾಲೂಕು, 21 ಮಂದಿ ಕುಂದಾಪುರ ಹಾಗೂ 15 ಮಂದಿ ಕಾರ್ಕಳ ತಾಲೂಕಿನವರು. ಇವರಲ್ಲಿ 24 ಮಂದಿ ಕೋವಿಡ್ ಆಸ್ಪತ್ರೆ ಹಾಗೂ 67 ಮಂದಿ ಮನೆಗಳಲ್ಲಿ ಚಿಕಿತ್ಸೆ ಪಡೆಯುತಿದ್ದಾರೆ. ಮಂಗಳವಾರ 171 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಈವರೆಗೆ ಕೊರೋನದಿಂದ ಚೇತರಿಸಿಕೊಂಡವರ ಸಂಖ್ಯೆ ಈಗ 72,097ಕ್ಕೇರಿದೆ. ನಿನ್ನೆ ಜಿಲ್ಲೆಯಲ್ಲಿ 8116 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ. ಈವರೆಗೆ ಜಿಲ್ಲೆಯಲ್ಲಿ ಸೋಂಕಿಗೆ ಪಾಸಿಟಿವ್ ಬಂದವರ ಸಂಖ್ಯೆ 73,984ಕ್ಕೇರಿದೆ. ಉಡುಪಿ ಜಿಲ್ಲೆಯಲ್ಲಿ ಈವರೆಗೆ ಒಟ್ಟು 9,76,978 ಮಂದಿಯನ್ನು ಕೋವಿಡ್ ಪರೀಕ್ಷೆ ಗೊಳಪಡಿಸಲಾಗಿದೆ.
ಜಿಲ್ಲೆಯಲ್ಲಿ ಇಂದು ಸಹ ಯಾರೂ ಬ್ಲಾಕ್ ಫಂಗಸ್ ಸೋಂಕಿನ ಚಿಕಿತ್ಸೆಗೆ ದಾಖಲಾಗಿಲ್ಲ. ಸದ್ಯ ಇಬ್ಬರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತಿದ್ದಾರೆ.
ಬುಧವಾರ ಒಟ್ಟು 27,378 ಡೋಸ್ ಲಸಿಕೆ ವಿತರಣೆ
ಉಡುಪಿ ಜಿಲ್ಲೆಯಲ್ಲಿ ಬುಧವಾರ ಒಟ್ಟು 27,378 ಮಂದಿ ಕೋವಿಡ್-19 ಲಸಿಕೆಯನ್ನು ಪಡೆದಿದ್ದಾರೆ. ಇವರಲ್ಲಿ 21,299 ಮಂದಿ ಮೊದಲ ಡೋಸ್ ಹಾಗೂ 6079 ಮಂದಿ ಎರಡನೇ ಡೋಸ್ನ್ನು ಸ್ವೀಕರಿಸಿದ್ದಾರೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ನಾಗಭೂಷಣ ಉಡುಪ ತಿಳಿಸಿದ್ದಾರೆ.
18ರಿಂದ 44ವರ್ಷದೊಳಗಿನ 15,371 ಮಂದಿ ಮೊದಲ ಹಾಗೂ 2,633 ಮಂದಿ ಎರಡನೇ ಡೋಸ್ ಪಡೆದಿದ್ದರೆ, 45 ವರ್ಷ ಮೇಲಿನ 5928 ಮಂದಿಗೆ ಮೊದಲ ಹಾಗೂ 3371 ಮಂದಿಗೆ ಎರಡನೇ ಡೋಸ್ ಲಸಿಕೆಯನ್ನು ನೀಡಲಾಗಿದೆ. ಅಲ್ಲದೇ 24 ಮಂದಿ ಆರೋಗ್ಯ ಕಾರ್ಯಕರ್ತರು ಮತ್ತು 51 ಮಂದಿ ಮುಂಚೂಣಿ ಕಾರ್ಯಕರ್ತರು ಸಹ ಇಂದು ಎರಡನೇ ಡೋಸ್ ಪಡೆದಿದ್ದಾರೆ.
18ರಿಂದ 44ವರ್ಷದೊಳಗಿನ 15,371 ಮಂದಿ ಮೊದಲ ಹಾಗೂ 2,633 ಮಂದಿ ಎರಡನೇ ಡೋಸ್ ಪಡೆದಿದ್ದರೆ, 45 ವರ್ಷ ಮೇಲಿನ 5928 ಮಂದಿಗೆ ಮೊದಲ ಹಾಗೂ 3371 ಮಂದಿಗೆ ಎರಡನೇ ಡೋಸ್ ಲಸಿಕೆಯನ್ನು ನೀಡ ಲಾಗಿದೆ. ಅಲ್ಲದೇ 24 ಮಂದಿ ಆರೋಗ್ಯ ಕಾರ್ಯಕರ್ತರು ಮತ್ತು 51 ಮಂದಿ ಮುಂಚೂಣಿ ಕಾರ್ಯಕರ್ತರು ಸಹ ಇಂದು ಎರಡನೇ ಡೋಸ್ ಪಡೆದಿದ್ದಾರೆ. ಬುಧವಾರ ಸಂಜೆಯವರೆಗೆ ಜಿಲ್ಲೆಯಲ್ಲಿ ಒಟ್ಟು 10,47,445 ಡೋಸ್ ಕೋವಿಡ್-19 ಲಸಿಕೆಯನ್ನು ವಿತರಿಸಲಾಗಿದೆ. ಒಟ್ಟು 7,73,687 ಮಂದಿ ಮೊದಲ ಡೋಸ್ನ್ನು ಪಡೆದರೆ, 2,73,758 ಮಂದಿ ಎರಡೂ ಡೋಸ್ಗಳನ್ನು ಸ್ವೀಕರಿಸಿದ್ದಾರೆ.







