ಪೋಷಣ್ ಮಾಸಾಚರಣೆ-ಮಾತೃವಂದನಾ ಸಪ್ತಾಹ ಉದ್ಘಾಟನೆ
ಉಡುಪಿ, ಸೆ.1: ಸರಕಾರವು ಅಂಗನವಾಡಿ ಕೇಂದ್ರಗಳ ಮೂಲಕ ಪೌಷ್ಠಿಕ ಆಹಾರವನ್ನು ಗರ್ಭಿಣಿ ಬಾಣಂತಿ ಹಾಗೂ ಮಕ್ಕಳಿಗೆ ವಿತರಣೆ ಮಾಡುತ್ತಿದೆ. ಸ್ವಸ್ಥ ಸಮಾಜದ ನಿರ್ಮಾಣಕ್ಕೆ ಫಲಾನುಭವಿಗಳು ಸರಕಾರದ ಸೇವೆಗಳ ಸದು ಪಯೋಗ ಪಡೆದುಕೊಳ್ಳಬಹುದೆಂದು ಉಡುಪಿ ನಗರಸಭೆ ಅಧ್ಯಕ್ಷೆ ಸುಮಿತ್ರಾ ನಾಯಕ್ ಹೇಳಿದ್ದಾರೆ.
ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ನಗರಸಭೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ ಸಂಯುಕ್ತ ಆಶ್ರಯದಲ್ಲಿ ಪೋಷಣ್ ಅಭಿಯಾನ, ಪೋಷಣ್ ಮಾಸಾಚರಣೆ-ಸೆಪ್ಟಂಬರ್ 2021 ಹಾಗೂ ಮಾತೃವಂದನಾ ಸಪ್ತಾಹ-2021ರ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.
ಉಡುಪಿ ತಾಲೂಕು ಆರೋಗ್ಯ ಅಧಿಕಾರಿ ಡಾ.ವಾಸುದೇವ ಉಪಾಧ್ಯಾಯ ಮಾತನಾಡಿ, ಪ್ರತಿದಿನ ಆಹಾರದಲ್ಲಿ ನೈಸರ್ಗಿಕ ಮತ್ತು ಸ್ಥಳೀಯವಾಗಿ ಲಭ್ಯ ವಿರುವ ಪೌಷ್ಠಿಕಾಂಶವುಳ್ಳ ಆಹಾರವನ್ನು ಸೇವಿಸುವುದರೊಂದಿಗೆ ದೈಹಿಕ ಹಾಗೂ ಮಾನಸಿಕ ಆರೋಗ್ಯಕ್ಕಾಗಿ ಆಧ್ಯಾತ್ಮಿಕ ಚಿಂತನೆಗಳನ್ನು ಅಳವಡಿಸಿಕೊಳು್ಳವುದು ಉತ್ತಮ ಎಂದು ತಿಳಿಸಿದರು.
ತಾಯಿ ಹಾಗೂ ಮಕ್ಕಳ ಆರೋಗ್ಯಕ್ಕಾಗಿ ಹಾಗೂ ಮರಣ ಪ್ರಮಾಣ ಕಡಿಮೆ ಮಾಡಲು ಸರಕಾರವು ಹಲವಾರು ಯೋಜನೆಗಳನ್ನು ಅನುಷ್ಠಾನಗೊಳಿಸಿದ್ದು, ಈ ಯೋಜನೆಗಳ ಪ್ರಯೋಜನವನ್ನು ಪಡೆದು ಆರೋಗ್ಯಯುತ ಮಕ್ಕಳು ಜನಿಸುವುದರಿಂದ ಸದೃಢ ಸಮಾಜದ ನಿರ್ಮಾಣವಾಗುವಲ್ಲಿ ಸಹಕರಿಸಬೇಕು. ಕೋವಿಡ್-19 ಬಗ್ಗೆ ಜಾಗೃತಿ ಮೂಡಿಸಿ ಗರ್ಭಿಣಿ ಹಾಗೂ ಬಾಣಂತಿಯರು ಕೋವಿಡ್ ಲಸಿಕೆಗಳನ್ನು ಪಡೆದುಕೊಳ್ಳೇಕೆಂದು ಅವರು ಸಲಹೆ ನೀಡಿದರು.
ಶಿಶು ಅಭಿವೃದ್ಧಿ ಯೋಜನಾಧಿಕಾರಿ ವೀಣಾ ವಿವೇಕಾನಂದ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯಕರ್ತೆ ಸುಜಾತ ವಂದಿಸಿದರು. ಮೇಲಿ್ವಚಾರಕಿ ಸಿಂಧೂ ಬೋಜ ನಿರೂಪಿಸಿದರು.







