ಮಾದಕ ದ್ರವ್ಯ ಪತ್ತೆ ಪ್ರಕರಣ: ನಟ ಅರ್ಮಾನ್ ಕೊಹ್ಲಿಗೆ 14 ದಿನಗಳ ನ್ಯಾಯಾಂಗ ಬಂಧನ
ಮುಂಬೈ, ಸೆ. 1: ಮಾದಕ ದ್ರವ್ಯ ಪ್ರಕರಣದಲ್ಲಿ ಬಂಧಿತರಾಗಿದ್ದ ಬಾಲಿವುಡ್ ನಟ ಅರ್ಮಾನ್ ಕೊಹ್ಲಿಗೆ ಮುಂಬೈ ನ್ಯಾಯಾಲಯ ಬುಧವಾರ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ. ಮಾದಕ ದ್ರವ್ಯ ನಿಯಂತ್ರಣ ಸಂಸ್ಥೆ (ಎನ್ಸಿಬಿ)ಯ ಕಸ್ಟಡಿ ಅವಧಿ ಮುಗಿದ ಕೂಡಲೇ ನ್ಯಾಯಾಲಯ ಕೊಹ್ಲಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.
ನ್ಯಾಯಾಂಗ ಬಂಧನ ವಿಧಿಸಿದ ಕೂಡಲೇ ಕೊಹ್ಲಿ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದರು. ಉಪ ನಗರ ಜುಹುವಿನಲ್ಲಿರುವ ಕೊಹ್ಲಿಯ ಮನೆಯಲ್ಲಿ ಮಾದಕ ದ್ರವ್ಯ ಪತ್ತೆಯಾದ ಹಿನ್ನೆಲೆಯಲ್ಲಿ ಮಾದಕ ದ್ರವ್ಯ ನಿಯಂತ್ರಣ ಸಂಸ್ಥೆ (ಎನ್ಸಿಬಿ) ವಿಚಾರಣೆ ನಡೆಸಿದ ಬಳಿಕ ಆಗಸ್ಟ್ 28ರಂದು ಅವರನ್ನು ಕಸ್ಟಡಿಗೆ ತೆಗೆದುಕೊಂಡಿತ್ತು. ಎನ್ಸಿಬಿ ಕಸ್ಟಡಿಯ ಅವಧಿ ಮುಗಿದ ಬಳಿಕ ಬುಧವಾರ ಅವರನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿತ್ತು. ಮಾದಕ ದ್ರವ್ಯ ನಿಯಂತ್ರಣ ಸಂಸ್ಥೆ ಹೆಚ್ಚುವರಿ ಕಸ್ಟಡಿ ಕೋರದ ಹಿನ್ನೆಲೆಯಲ್ಲಿ ನ್ಯಾಯಾಲಯ ಕೊಹ್ಲಿಗೆ ನ್ಯಾಯಾಂಗ ಬಂಧನ ವಿಧಿಸಿತು.
Next Story





