ಚಾರ್ಮಾಡಿ: ರಸ್ತೆಗೆ ಉರುಳಿಬಿದ್ದ ಮರ; ಒಂದು ಗಂಟೆ ವಾಹನ ಸಂಚಾರ ಸ್ಥಗಿತ
![ಚಾರ್ಮಾಡಿ: ರಸ್ತೆಗೆ ಉರುಳಿಬಿದ್ದ ಮರ; ಒಂದು ಗಂಟೆ ವಾಹನ ಸಂಚಾರ ಸ್ಥಗಿತ ಚಾರ್ಮಾಡಿ: ರಸ್ತೆಗೆ ಉರುಳಿಬಿದ್ದ ಮರ; ಒಂದು ಗಂಟೆ ವಾಹನ ಸಂಚಾರ ಸ್ಥಗಿತ](https://www.varthabharati.in/sites/default/files/images/articles/2021/09/2/304953-1630558998.gif)
ಬೆಳ್ತಂಗಡಿ, ಸೆ.2: ರಾಷ್ಟ್ರೀಯ ಹೆದ್ದಾರಿ 73ರ ಚಾರ್ಮಾಡಿ ಘಾಟಿ ಒಂದನೇ ಹಾಗೂ ಎರಡನೇ ತಿರುವಿನ ಮಧ್ಯೆ ಮರವೊಂದು ಉರುಳಿ ರಸ್ತೆಗೆ ಬಿದ್ದ ಘಟನೆ ಇಂದು ಮುಂಜಾನೆ ಸಂಭವಿಸಿದೆ. ಇದರಿಂದ ಈ ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿತ್ತು.
ನಿರಂತರ ಮಳೆಯಾಗುತ್ತಿರುವುದರಿಂದ ಇಂದು ಬೆಳಗ್ಗೆ 6:30ರ ಸುಮಾರಿಗೆ ಮರವೊಂದು ಉರುಳಿ ರಸ್ತೆಗೆ ಅಡ್ಡವಾಗಿ ಬಿದ್ದಿದೆ. ಇದರಿಂದ ಒಂದು ತಾಸು ವಾಹನ ಸಂಚಾರ ಸ್ಥಗಿತಗೊಂಡಿತ್ತು. ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಚಾರ್ಮಾಡಿ ಹಸನಬ್ಬ ತಂಡ ಹಾಗೂ ಅರಣ್ಯ ಇಲಾಖೆಯ ಸಿಬ್ಬಂದಿ ಮರವನ್ನು ತೆರವುಗೊಳಿಸಿ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ.
Next Story