ಅಕೇಶಿಯಾ ಮರದ ದಿಮ್ಮಿ ಕಳವು ಪ್ರಕರಣ: ಆರೋಪಿಗಳಿಗೆ ಶಿಕ್ಷೆ, ದಂಡ
ಉಡುಪಿ, ಸೆ.2: ಮರಗಳನ್ನು ಕಳ್ಳತನ ಮಾಡಿದ ಆರೋಪಿಗಳಿಗೆ ನಗರದ 1ನೇ ಹೆಚ್ಚುವರಿ ಸಿ.ಜೆ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯವು ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿದೆ.
2014ರ ಜು.15ರಂದು ಮಧ್ಯರಾತ್ರಿ 12 ಗಂಟೆಯ ಸಮಯದಲ್ಲಿ ಉಡುಪಿ ತಾಲೂಕಿನ ತೆಂಕನಿಡಿಯೂರು ಗ್ರಾಪಂ ಕಚೇರಿ ಸಮೀಪ ಗ್ರಾಪಂ ವತಿಯಿಂದ ಕಡಿಸಿ ಇಟ್ಟಿದ್ದ 11 ಅಕೇಶಿಯಾದ ಮರದ ತುಂಡುಗಳನ್ನು ಆರೋಪಿಗಳಾದ ಸುಧಾಕರ್ ಪೂಜಾರಿ, ವೆಂಕಟೇಶ್ ಎಸ್ ದಾಸ್, ರಮೇಶ್ ಉಪ್ಪಾರ್ ಎಂಬವರು ಕಳ್ಳತನ ಮಾಡಿ ಟೆಂಪೋದಲ್ಲಿ ತೆಗೆದುಕೊಂಡು ಹೋಗಿ ಮಾರಾಟ ಮಾಡಿದ್ದು, ಮಲ್ಪೆ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಮೇಲೆ ದೋಷಾರೋಪಣ ಪತ್ರ ಸಲ್ಲಿಸಿದ್ದರು.
ಪ್ರಕರಣದ ವಿಚಾರಣೆ ನಡೆದು ಆರೋಪ ಸಾಬೀತಾದ ಹಿನ್ನೆಲೆಯಲ್ಲಿ 1ನೇ ಹೆಚ್ಚುವರಿ ಸಿ.ಜೆ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಧೀಶ ಶ್ಯಾಮ್ ಪ್ರಕಾಶ್ ಅವರು ಆರೋಪಿಗಳಿಗೆ 3 ವರ್ಷ ಕಾರಾಗೃಹ ಶಿಕ್ಷೆ ಹಾಗೂ 10 ಸಾವಿರ ರೂ. ದಂಡ ವಿಧಿಸಿದ್ದಾರೆ. ಸರಕಾರದ ಪರವಾಗಿ ಸಹಾಯಕ ಸರಕಾರಿ ಅಭಿಯೋಜಕಿ ಮೋಹಿನಿ ಕೆ. ವಾದ ಮಂಡಿಸಿದ್ದರು.
Next Story





