ಸೆ. 3: ಮುಸ್ಲಿಮ್ ಸಾಹಿತ್ಯ ಪ್ರಶಸ್ತಿ ಪ್ರದಾನ- ಬಹುಭಾಷಾ ಕವಿಗೋಷ್ಠಿ
ಮಂಗಳೂರು, ಸೆ.2: ಕನ್ನಡದಲ್ಲಿ ಪ್ರಕಟಿತ ಮುಸ್ಲಿಮ್ ಬರಹಗಾರರ ಅತ್ಯುತ್ತಮ ಕೃತಿಗೆ ಮುಸ್ಲಿಮ್ ಲೇಖಕರ ಸಂಘವು ಕೊಡಮಾಡುವ 2019ನೇ ಸಾಲಿನ ರಾಜ್ಯ ಮಟ್ಟದ ಯು.ಟಿ. ಫರೀದ್ ಸ್ಮರಣಾರ್ಥ ಮುಸ್ಲಿಮ್ ಸಾಹಿತ್ಯ ಪ್ರಶಸ್ತಿ ಪ್ರದಾನ ಸಮಾರಂಭ ಮತ್ತು ಬಹುಭಾಷಾ ಕವಿಗೋಷ್ಠಿಯು ಸೆ.3ರಂದು ಸಂಜೆ 4:30ಕ್ಕೆ ನಡೆಯಲಿದೆ.
ನಗರದ ಸ್ಟೇಟ್ ಬ್ಯಾಂಕ್, ರಾವ್ ಆ್ಯಂಡ್ ರಾವ್ ಸರ್ಕಲ್ ಸಮೀಪ ಸಹಕಾರಿ ಸದನದಲ್ಲಿರುವ ಶಾಂತಿ ಪ್ರಕಾಶನ ಸಭಾಂಗಣದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಶಾಸಕ ಯು.ಟಿ. ಖಾದರ್ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ದಿ. ಮುಮ್ತಾಜ್ ಬೇಗಮ್’ ಅವರ (ಕೃತಿ: ಸ್ವಾತಂತ್ರದ ಕಹಳೆ) ಕುಟುಂಬಸ್ಥರು ಈ ಪ್ರಶಸ್ತಿ ಸ್ವೀಕರಿಸಲಿದ್ದು, ಗಣಪತಿ ಪ.ಪೂ. ಕಾಲೇಜಿನ ವಿಶ್ರಾಂತ ಪ್ರಾಂಶುಪಾಲೆ ಚಂದ್ರಕಲಾ ನಂದಾವರ ಪ್ರಮುಖ ಭಾಷಣ ಮಾಡಲಿದ್ದಾರೆ.
ಮುಸ್ಲಿಮ್ ಲೇಖಕರ ಸಂಘದ ಅಧ್ಯಕ್ಷ ಉಮರ್ ಯು.ಎಚ್. ಅಧ್ಯಕ್ಷತೆ ವಹಿಸಲಿದ್ದು, ಬಹುಭಾಷಾ ಕವಿ ಮುಹಮ್ಮದ್ ಬಡ್ಡೂರು ಕವಿಗೋಷ್ಠಿ ಉದ್ಘಾಟಿಸಲಿ ದ್ದಾರೆ. ಪ್ರಶಾಂತಿ ಶೆಟ್ಟಿ ಇರುವೈಲು, ರೇಮಂಡ್ ಡಿಕುನ್ಹ, ಸಿಹಾನ ಬಿ.ಎಂ. ಹಾಗೂ ಮೌಟ ಇಮ್ರಾನುಲ್ಲಾ ಖಾನ್ ಮನ್ಸೂರಿ ಕವನ ಮಂಡಿಸಲಿದ್ದಾರೆ ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಬಿ.ಎ. ಮುಹಮ್ಮದ್ ಅಲಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.





