Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ನಾವು ಹಿಂದುತ್ವದ ಹೆಸರಿನಲ್ಲಿ...

ನಾವು ಹಿಂದುತ್ವದ ಹೆಸರಿನಲ್ಲಿ ಅಧಿಕಾರಕ್ಕೆ ಬಂದವರು, ಗಣಪತಿ ಉತ್ಸವ ನಡೆಸಿಯೇ ನಡೆಸುತ್ತೇವೆ: ಸಚಿವ ಈಶ್ವರಪ್ಪ

''ಮುಂದಿನ ಚುನಾವಣೆಯಲ್ಲಿ ಸಾಮೂಹಿಕ ನಾಯಕತ್ವದಲ್ಲಿ ಮುನ್ನಡೆಯಲಿದ್ದೇವೆ''

ವಾರ್ತಾಭಾರತಿವಾರ್ತಾಭಾರತಿ3 Sept 2021 4:04 PM IST
share
ನಾವು ಹಿಂದುತ್ವದ ಹೆಸರಿನಲ್ಲಿ ಅಧಿಕಾರಕ್ಕೆ ಬಂದವರು, ಗಣಪತಿ ಉತ್ಸವ ನಡೆಸಿಯೇ ನಡೆಸುತ್ತೇವೆ: ಸಚಿವ ಈಶ್ವರಪ್ಪ

ಶಿವಮೊಗ್ಗ, ಸೆ.03: ಜನರ ಆರೋಗ್ಯ ಮತ್ತು ಗಣೇಶೋತ್ಸವದ ಕಡೆಗೂ ಗಮನ ನೀಡಬೇಕೆಂಬುದು ನನ್ನ ಅಭಿಪ್ರಾಯ.ನಾವು ಹಿಂದುತ್ವದ ಹೆಸರಿನಲ್ಲಿ ಅಧಿಕಾರಕ್ಕೆ ಬಂದವರು, ಗಣಪತಿ ಉತ್ಸವ ನಡೆಸಿಯೇ ನಡೆಸುತ್ತೇವೆ. ಗಣಪತಿ ಉತ್ಸವ ಯಶಸ್ವಿಯಾಗಿ ಪೂರೈಸಬೇಕೆಂಬುದು ನಮ್ಮ ಆಶಯ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಖಾತೆ ಸಚಿವ ಕೆ ಎಸ್ ಈಶ್ವರಪ್ಪ ಹೇಳಿದ್ದಾರೆ.

ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗಣಪತಿ ಉತ್ಸವ ಪೂರ್ಣ ಯಶಸ್ವಿಯಾಗಿ ನಡೆಸಲು ಸರ್ಕಾರ ಬೆಂಬಲ ನೀಡಲಿದೆ ಎಂದ ಅವರು,ರಾಜ್ಯದಲ್ಲಿ ನಡೆಯುತ್ತಿರುವ ಜನಾಶೀರ್ವಾದ ಯಾತ್ರೆಯಲ್ಲಿ ಜನ ಸೇರಿಸಿದ್ದನ್ನು ನಾನು ಒಪ್ಪುವುದಿಲ್ಲ. ರಾಜ್ಯದ ಒಬ್ಬ ಜವಾಬ್ದಾರಿ ಮಂತ್ರಿಯಾಗಿ ಇದನ್ನು ನಾನು ಒಪ್ಪುವುದಿಲ್ಲ. ಹಾಗೆಯೇ, ಗಣೇಶೋತ್ಸವ ನಿಲ್ಲಿಸಬೇಕೆಂಬುದು ಕೂಡ ನಾನು ಒಪ್ಪುವುದಿಲ್ಲ' ಎಂದರು.

'ಕೋವಿಡ್ ಕಾರಣದಿಂದಾಗಿ, ಕೆಲವು ನೀತಿ, ನಿಯಮಗಳಡಿಯಲ್ಲಿ ಈ ಬಾರಿಯೂ ಗಣೇಶೋತ್ಸವ ನಡೆಸುತ್ತೇವೆ. ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆಯುವ ಸಭೆಯಲ್ಲಿ ಇದಕ್ಕೆ ನೀತಿ ನಿಯಮ ಜಾರಿಗೆ ತರಲಾಗುತ್ತದೆ. ಗಣಪತಿ ಉತ್ಸವ ಪೂರ್ಣ ಯಶಸ್ವಿಯಾಗಿ ನಡೆಸಲು ಸರ್ಕಾರ ಬೆಂಬಲ ನೀಡಲಿದೆ' ಎಂದರು.

'ಸಿಎಂ ಬಸವರಾಜ ಬೊಮ್ಮಾಯಿ ಅವರ ನಾಯಕತ್ವದಲ್ಲಿ ಮುಂದಿನ ಚುನಾವಣೆ ಎದುರಿಸುತ್ತೇವೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಆದರೆ ಅಮಿತ್ ಶಾ ಯಾವ ರೀತಿ ಹೇಳಿದ್ದಾರೆ, ಏನ್ ಹೇಳಿದ್ದಾರೋ ನೋಡೋಣ' ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯೆ ನೀಡಿದರು.

'ಈ ಬಗ್ಗೆ ಒಟ್ಟಿಗೆ ಕೂತು ನಾವೆಲ್ಲಾ ಚರ್ಚೆ ಮಾಡಿ ತೀರ್ಮಾನ ತೆಗೆದುಕೊಳ್ಳುತ್ತೇವೆ. ಸಾಮೂಹಿಕ ನಾಯಕತ್ವದ ಬಗ್ಗೆ ಖಂಡಿತ ನಮ್ಮೆಲ್ಲರ ಒಲವು ಇದೆ. ಇದರಲ್ಲಿ ಮುಖ್ಯಮಂತ್ರಿ ಬೊಮ್ಮಾಯಿ ಅವರದ್ದು ಪಾತ್ರ ಇರುತ್ತದೆ. ಪಕ್ಷದ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲು ಅವರು ಸಂಘಟನೆ ಕಟ್ಟುತ್ತಿದ್ದಾರೆ. ಏನೇ ಆದರೂ, ನಾವು ಮುಂದಿನ ಚುನಾವಣೆಯಲ್ಲಿ ಸಾಮೂಹಿಕ ನಾಯಕತ್ವದಲ್ಲಿ ಮುನ್ನಡೆಯಲಿದ್ದೇವೆ' ಎಂದು ತಿಳಿಸಿದರು. 

ರಾಜ್ಯದಲ್ಲಿ ನಡೆಯುತ್ತಿರುವ ಪಾಲಿಕೆಯ ಎಲ್ಲಾ ಚುನಾವಣೆಗಳಲ್ಲೂ ಬಿಜೆಪಿಯೇ ಗೆಲುವು ಸಾಧಿಸಲಿದೆ. ಹುಬ್ಬಳಿ-ಧಾರವಾಡ, ಬೆಳಗಾವಿ, ಕಲ್ಬುರ್ಗಿಗೆ ನಾನು ಹೋಗಿ ಬಂದಿದ್ದೇನೆ. ಅಲ್ಲಿನ ಜನರ ಒಲವು ಬಿಜೆಪಿ ಪರ ಇದೆ. ಎಲ್ಲಾ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ಪೂರ್ಣ ಬಹುಮತ ಪಡೆಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X