Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮೀನುಗಾರಿಕಾ ದೋಣಿಗಳಿಗೆ ಉಪ್ಪು ನೀರು...

ಮೀನುಗಾರಿಕಾ ದೋಣಿಗಳಿಗೆ ಉಪ್ಪು ನೀರು ಸಂಸ್ಕರಣಾ ಘಟಕ ಅಳವಡಿಕೆ : ಸಚಿವ ಅಂಗಾರ

'ಸಹಾಯಧನದ ಬಗ್ಗೆ ಸರಕಾರ ಮಟ್ಟದಲ್ಲಿ ನಿರ್ಧಾರ'

ವಾರ್ತಾಭಾರತಿವಾರ್ತಾಭಾರತಿ3 Sept 2021 4:21 PM IST
share
ಮೀನುಗಾರಿಕಾ ದೋಣಿಗಳಿಗೆ ಉಪ್ಪು ನೀರು ಸಂಸ್ಕರಣಾ ಘಟಕ ಅಳವಡಿಕೆ : ಸಚಿವ ಅಂಗಾರ

ಮಂಗಳೂರು, ಸೆ. 3: ಆಳ ಸಮುದ್ರ ಮೀನುಗಾರಿಕೆಗೆ ತೆರಳುವ ಮೀನುಗಾರರಿಗೆ ತಮ್ಮ ದೋಣಿಗಳಲ್ಲಿ ಉಪ್ಪು ನೀರನ್ನು ಸಿಹಿ ನೀರನ್ನಾಗಿ ಪರಿವರ್ತಿಸುವ ಘಟಕವನ್ನು ಅಳವಡಿಸುವುದರಿಂದ ಸಾಕಷ್ಟು ಪ್ರಯೋಜನವಾಗಲಿದೆ. ಈ ಘಟಕ ಅಳವಡಿಸಲು ಸಹಾಯಧನ ಒದಗಿಸುವ ಬಗ್ಗೆ ಸರಕಾರ ಮಟ್ಟದಲ್ಲಿ ಚರ್ಚಿಸಿ ನಿರ್ಧರಿಸಲಾಗುವುದು ಎಂದು ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವ ಎಸ್. ಅಂಗಾರ ತಿಳಿಸಿದ್ದಾರೆ.

ಮಂಗಳೂರು ಹಳೆ ಬಂದರು ಧಕ್ಕೆಯ ಅಳಿವೆಬಾಗಿಲು ಬಳಿ ದೋಣಿಯೊಂದರಲ್ಲಿ ಉಪ್ಪು ನೀರನ್ನು ಸಿಹಿಯನ್ನಾಗಿಸುವ ಘಟಕದ ಪ್ರಾತ್ಯಕ್ಷಿಕೆಯನ್ನು ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು, ಮಾಧ್ಯಮ ಪ್ರತಿನಿಧಿಗಳ ಜತೆ ವೀಕ್ಷಿಸಿದ ಬಳಿಕ ಅವರು ಈ ಪ್ರತಿಕ್ರಿಯೆ ನೀಡಿದರು.

ಆಸ್ಟ್ರೇಲಿಯಾ ತಂತ್ರಜ್ಞಾನ ಆಧಾರಿತ ಸಮುದ್ರದ ಉಪ್ಪು ನೀರನ್ನು ಸಿಹಿ ಮಾಡುವ ಘಟಕದ ಬಗ್ಗೆ ಪ್ರಾತ್ಯಕ್ಷಿಕೆಯನ್ನು ವೀಕ್ಷಿಸಲಾಗಿದೆ. ಈ ಘಟಕ ನಮ್ಮ ಮೀನುಗಾರರಿಗೆ ಉಪಯುಕ್ತವಾಗಲಿದೆ. ಆಳ ಸಮುದ್ರಕ್ಕೆ ಮೀನುಗಾರಿಕೆಗೆ ತೆರಳುವ (ಕನಿಷ್ಠ 4ರಿಂದ 15 ದಿನಗಳ ಕಾಲ) ಮೀನುಗಾರರಿಗೆ ಕುಡಿಯಲು, ಸ್ನಾನ ಹಾಗೂ ಇತರ ಕೆಲಸ ಕಾರ್ಯಗಳಿಗೆ ಅಗತ್ಯವಾದ ಸಿಹಿ ನೀರನ್ನು ಮೀನುಗಾರಿಕಾ ದೋಣಿಯಲ್ಲಿ ಒಯ್ಯಬೇಕಾಗುತ್ತದೆ. ಆದರೆ ಅದರ ಬದಲಾಗಿ ಈ ಘಟಕವನ್ನು ಬೋಟ್‌ಗಳಲ್ಲಿ ಅಳವಡಿಸಿದರೆ ನೀರನ್ನು ಹೊತ್ತೊಯ್ಯುವ ಪ್ರಮೇಯ ತಪ್ಪುವ ಜತೆಗೆ ಬೋಟ್ ಮೇಲಿನ ಹೊರೆ ಕಡಿಮೆಯಾಗಲಿದೆ. ಮಾತ್ರವಲ್ಲದೆ ಸಮುದ್ರದಲ್ಲಿ ಮೀನುಗಾರಿಕೆ ಸಂದರ್ಭ ಯಾವುದೇ ಸಂದರ್ಭದಲ್ಲಿ ಸಿಹಿ ನೀರಿನ ಅಗತ್ಯ ಬಂದಾಗ ಉಪ್ಪು ನೀರನ್ನು ಸಿಹಿ ನೀರನ್ನು ಪಡೆಯಬಹುದು. ಮೀನುಗಾರಿಕಾ ದೋಣಿಗಳಲ್ಲಿ ಈ ಉಪಕರಣವನ್ನು ಅಳವಡಿಸಲು ಸರಕಾರದಿಂದ ಯಾವ ರೀತಿಯಲ್ಲಿ ಸಹಾಯಧನ ನೀಡಬಹುದು ಎಂಬ ಬಗ್ಗೆ ಸರಕಾರ ಮಟ್ಟದಲ್ಲಿ ನಿರ್ಧರಿಸಲಾಗುವುದು. ಕೇಂದ್ರ ಸರಕಾರದ ಮತ್ಸ ಸಂಪದ ಯೋಜನೆಯಡಿಯೂ ಸಹಾಯಧನದ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳ ಜತೆ ಚರ್ಚಿಸಲಾಗುವುದು ಎಂದು ಅವರು ಹೇಳಿದರು.

ಈ ತಂತ್ರಜ್ಞಾನವನ್ನು ಈಗಾಗಲೇ ಯೂರೋಪ್ ರಾಷ್ಟ್ರಗಳು ಸೇರಿದಂತೆ ಪ್ರಪಂಚದ ಹಲವಾರು ರಾಷ್ಟ್ರಗಳಲ್ಲಿ ಮೀನುಗಾರರು ಬಳಕೆ ಮಾಡುತ್ತಿದ್ದಾರೆ. ಕರಾವಳಿಯ ಮೀನುಗಾರರಿಗೂ ಇದು ಅತೀ ಉಪಯುಕ್ತವಾಗಲಿದೆ. ದೇಶದಲ್ಲಿ ಇದು ಪ್ರಥಮ ಬಾರಿಗೆ ಕರ್ನಾಟಕದ ಮಂಗಳೂರಿನಲ್ಲಿ ಅಳವಡಿಸುವ ಬಗ್ಗೆ ಚಿಂತನೆ ನಡೆಯುತ್ತಿದೆ ಎಂದು ಮೀನುಗಾರ ಮುಖಂಡ ರಾಮಚಂದರ್ ಬೈಕಂಪಾಡಿ ಅಭಿಪ್ರಾಯಿಸಿದರು.

ಆಳ ಸಮುದ್ರ ಮೀನುಗಾರಿಕೆಗೆ ಈ ಉಪಕರಣ ಅತ್ಯಂತ ಉಪಯುಕ್ತವಾಗಲಿದೆ. ಆದರೆ ಕುಡಿಯುವ ನೀರಿನ ಗುಣಮಟ್ಟದ ಕುರಿತಂತೆ ಸಂಬಂಧಪಟ್ಟ ಪ್ರಾಮಾಣೀಕೃತ ಇಲಾಖೆಯಿಂದ ದೃಢೀಕರಣವನ್ನು ಪಡೆಯಬೇಕಾಗುತ್ತದೆ. ಮಾತ್ರವಲ್ಲದೆ, ಈ ಉಪಕರಣ ಅಳವಡಿಸಿದ ಬಳಿಕ ಮೀನುಗಾರಿಕೆಗೆ ತೆರಳಿದಾಗ ದಾರಿ ಮಧ್ಯೆ ಏನಾದರೂ ದೋಷ ಕಂಡು ಬಂದಲ್ಲಿ ನೀರಿಗಾಗಿ ದೋಣಿಯಲ್ಲಿರುವವರು ತೊಂದರೆ ಪಡಬೇಕಾಗುತ್ತದೆ. ಅಂತಹ ಸಮಸ್ಯೆಯನ್ನು ಯಾವ ರೀತಿ ಬಗೆಹರಿಸಲಾಗುತ್ತದೆ ಎಂಬ ಕುರಿತಂತೆಯೂ ಚರ್ಚಿಸುವ ಬಗ್ಗೆ ಸಚಿವರ ಗಮನ ಸೆಳೆಯಲಾಗಿದೆ ಎಂದು ಮೀನುಗಾರಿಕಾ ಇಲಾಖೆಯ ನಿರ್ದೇಶಕರಾದ ರಾಮಾಚಾರ್ಯ ತಿಳಿಸಿದರು.

ಈ ಸಂದರ್ಭ ಮೀನುಗಾರಿಕಾ ಇಲಾಖೆಯ ಉಪ ನಿರ್ದೇಶಕ ಹರೀಶ್ ಕುಮಾರ್ ಸೇರಿದಂತೆ ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X