Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಯುವಜನರಿಗೆ ಸರಕಾರದಿಂದಲೇ ಕುಶಲತೆ...

ಯುವಜನರಿಗೆ ಸರಕಾರದಿಂದಲೇ ಕುಶಲತೆ ತರಬೇತಿ: ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ

ಬೆಂಗಳೂರಿನಲ್ಲಿ ಬೃಹತ್ ಉದ್ಯೋಗ ಮೇಳ; 42 ಕಂಪನಿಗಳಿಂದ ನೇರ ನೇಮಕಾತಿ

ವಾರ್ತಾಭಾರತಿವಾರ್ತಾಭಾರತಿ3 Sept 2021 6:05 PM IST
share
ಯುವಜನರಿಗೆ ಸರಕಾರದಿಂದಲೇ ಕುಶಲತೆ ತರಬೇತಿ: ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ

ಬೆಂಗಳೂರು, ಸೆ.3: ಉದ್ಯೋಗ ಮಾಡುವ ಮನಸ್ಸಿರುವ ಯುವಜನರಿಗೆ ಸರಕಾರವೇ ಕೌಶಲ್ಯ ತರಬೇತಿ ನೀಡಿ ಉದ್ಯೋಗವೂ ಸಿಗುವ ಹಾಗೆ ಮಾಡುತ್ತಿದೆ ಎಂದು ಕೌಶಲ್ಯಾಭಿವೃದ್ಧಿ ಮತ್ತು ಉದ್ಯಮಶೀಲತಾ ಖಾತೆ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದರು.

ಶುಕ್ರವಾರ ಮಲ್ಲೇಶ್ವದಲ್ಲಿ ಬೃಹತ್ ಉದ್ಯೋಗ ಮೇಳಕ್ಕೆ ಚಾಲನೆ ನೀಡಿದ ನಂತರ ಮಾತನಾಡಿದ ಅವರು, ಬೆಂಗಳೂರು ಮಹಾನಗರ ಹಾಗೂ ಕರ್ನಾಟಕದಲ್ಲಿ ಉದ್ಯೋಗಗಳಿಗೆ ಕೊರತೆ ಇಲ್ಲ. ವಿಪುಲ ಉದ್ಯೋಗಾವಕಾಶಗಳು ಲಭ್ಯವಿದ್ದು, ಕೆಲಸ ಮಾಡಲು ಯುವಜನರು ಮುಂದೆ ಬರಬೇಕು ಎಂದು ಕರೆ ನೀಡಿದರು.

ರಾಜ್ಯದಲ್ಲಿ ಕೈಗಾರಿಕೆಗಳ ಬೇಡಿಕೆಗೆ ತಕ್ಕಂತೆ ಕುಶಲ ಸಂಪನ್ಮೂಲ ಒದಗಿಸುವುದು ಸರಕಾರದ ಉದ್ದೇಶ. ಈ ನಿಟ್ಟಿನಲ್ಲಿ ಎಷ್ಟೇ ಪ್ರಮಾಣದ ಉದ್ಯೋಗಾಕಾಂಕ್ಷಿಗಳು ಬಂದರೂ ಸೂಕ್ತ ತರಬೇತಿ, ಭಾಷಾ ಜ್ಞಾನ, ಕೌಶಲ್ಯ ಕಲಿಸಿ ಕೆಲಸ ಕೊಡಿಸಲಾಗುವುದು. ಕುಶಲತೆಯನ್ನು ರೂಢಿಸಿಕೊಳ್ಳದ ಹೊರತು ಉದ್ಯೋಗದ ಪ್ರಶ್ನೆ ಬರುವುದಿಲ್ಲ ಎಂದು ಅವರು ಹೇಳಿದರು.

ವಿದೇಶಗಳಲ್ಲಿ ಕೆಲಸ ಮಾಡುತ್ತೇವೆ ಎಂದರೂ ಅದಕ್ಕೂ ನಮ್ಮಲ್ಲಿ ಅವಕಾಶವಿದೆ. ಸರಕಾರ ಅಂತರ್‍ರಾಷ್ಟ್ರೀಯ ವಲಸೆ ಕೇಂದ್ರವನ್ನು ಸ್ಥಾಪನೆ ಮಾಡಿದ್ದು, ಅದರ ಮೂಲಕ ರಾಜ್ಯದ ಕುಶಲ ಯುವ ಜನರಿಗೆ ಹೊರ ದೇಶಗಳಲ್ಲೂ ಉದ್ಯೋಗ ಕೊಡಿಸುವ ಕೆಲಸ ಮಾಡುತ್ತಿದೆ. ಈಗಾಗಲೇ ಅನೇಕರು ಉದ್ಯೋಗ ಪಡೆದುಕೊಂಡು ವಿವಿಧ ದೇಶಗಳಲ್ಲಿ ಕೆಲಸ ಮಾಡುತ್ತಿದ್ದಾರೆಂದು ಅವರು ಹೇಳಿದರು.

ಬೃಹತ್ ಜಾಬ್ ಮೇಳ: ಈ ಉದ್ಯೋಗ ಮೇಳದಲ್ಲಿ 2,000ಕ್ಕೂ ಹೆಚ್ಚು ಉದ್ಯೋಗಗಳು ಲಭ್ಯ ಇವೆ. ಆದರೆ ನೋಂದಣಿ ಮಾಡಿಕೊಂಡಿರುವುದು 1300 ಜನ. 30 ಕಂಪನಿಗಳು ನೇರವಾಗಿ, ಅಂದರೆ ಭೌತಿಕವಾಗಿ ಅಭ್ಯರ್ಥಿಗಳನ್ನು ಸ್ಥಳದಲ್ಲಿಯೇ ಆಯ್ಕೆ ಮಾಡಿಕೊಳ್ಳುತ್ತಿವೆ. ಇನ್ನೂ 12 ಕಂಪನಿಗಳು ಆನ್ ಲೈನ್ ಮೂಲಕ ನೇಮಕಾತಿ ಮಾಡಿಕೊಳ್ಳುತ್ತಿವೆ. ಒಟ್ಟು 42 ಕಂಪನಿಗಳು ಈ ಮೇಳದಲ್ಲಿ ಭಾಗಿಯಾಗಿವೆ ಎಂದು ಅಶ್ವತ್ಥ ನಾರಾಯಣ ಹೇಳಿದರು.

ಇವೆಲ್ಲ ದೇಶದ ಪ್ರತಿಷ್ಠಿತ ಕಂಪನಿಗಳಾಗಿದ್ದು, ನಮ್ಮ ಆರ್ಥಿಕತೆಗೆ ದೊಡ್ಡ ಕೊಡುಗೆ ನೀಡುತ್ತಿವೆ. ಇಂಥ ಕಂಪನಿಗಳಲ್ಲಿ ಅವಕಾಶ ಸಿಕ್ಕಿದ ಮೇಲೆ ಉತ್ತಮವಾಗಿ ಕೆಲಸ ಮಾಡಿ ಹಾಗೂ ನೀವು ಬೆಳೆಯುವುದರ ಜತೆಗೆ ಕಂಪನಿಯನ್ನೂ ಬೆಳೆಸಿ ಆ ಮೂಲಕ ಆರ್ಥಿಕ ವೃದ್ಧಿಗೆ ಕಾಣಿಕೆ ನೀಡಿ ಎಂದು ಅಶ್ವತ್ಥ ನಾರಾಯಣ ಉದ್ಯೋಗಾಂಕ್ಷಿಗಳಿಗೆ ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಕೌಶಲ್ಯಾಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಅಶ್ವಿನ್ ಗೌಡ, ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಕೃಷ್ಣಮೂರ್ತಿ ಸೇರಿದಂತೆ ಅನೇಕ ಅಧಿಕಾರಿಗಳು, ವಿವಿಧ ಕಂಪನಿಗಳ ಅಧಿಕಾರಿಗಳು ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X