Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕೋವಿಡ್ ಪ್ರಕರಣ: ಹೊರಮಾವು ನರ್ಸಿಂಗ್...

ಕೋವಿಡ್ ಪ್ರಕರಣ: ಹೊರಮಾವು ನರ್ಸಿಂಗ್ ಕಾಲೇಜು ತಾತ್ಕಾಲಿಕ ಬಂದ್; ಆರೋಗ್ಯ ಸಚಿವ ಡಾ.ಕೆ.ಸುಧಾಕರ್

ವಾರ್ತಾಭಾರತಿವಾರ್ತಾಭಾರತಿ3 Sept 2021 8:18 PM IST
share
ಕೋವಿಡ್ ಪ್ರಕರಣ: ಹೊರಮಾವು ನರ್ಸಿಂಗ್ ಕಾಲೇಜು ತಾತ್ಕಾಲಿಕ ಬಂದ್; ಆರೋಗ್ಯ ಸಚಿವ ಡಾ.ಕೆ.ಸುಧಾಕರ್

ಬೆಂಗಳೂರು, ಸೆ.3: ಹೊರಮಾವು ನರ್ಸಿಂಗ್ ಕಾಲೇಜು ಹಾಗೂ ಕೆಜಿಎಫ್‍ನ ನರ್ಸಿಂಗ್ ಕಾಲೇಜಿನಲ್ಲಿ ಕೋವಿಡ್ ಪ್ರಕರಣಗಳು ಕಂಡುಬಂದಿದೆ. ಹೊರರಾಜ್ಯದಿಂದ ವಿದ್ಯಾರ್ಥಿಗಳು ಬರುವುದರಿಂದ ಶಿಕ್ಷಣ ಸಂಸ್ಥೆಗಳು ಎಚ್ಚರ ವಹಿಸಬೇಕೆಂದು ಸೂಚಿಸಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.

ಶುಕ್ರವಾರ ಹೊರಮಾವು ಕ್ರಿಸ್ಟಿಯನ್ ನರ್ಸಿಂಗ್ ಕಾಲೇಜಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 300 ಮಂದಿ ಪೈಕಿ 34 ವಿದ್ಯಾರ್ಥಿಗಳಿಗೆ ಕೋವಿಡ್ ಸೋಂಕು ದೃಢಪಟ್ಟಿದೆ. ತಾತ್ಕಾಲಿಕವಾಗಿ ಕಾಲೇಜು ಮುಚ್ಚಿಸಿ ಸುರಕ್ಷತಾ ಕ್ರಮ ಕೈಗೊಳ್ಳಲಾಗಿದೆ. ಎಲ್ಲ ಶಿಕ್ಷಣ ಸಂಸ್ಥೆಗಳು ಎಚ್ಚರ ವಹಿಸಬೇಕೆಂದು ಸೂಚಿಸಲಾಗಿದೆ ಎಂದರು.

ಕರ್ನಾಟಕ ಶೈಕ್ಷಣಿಕ ಕೇಂದ್ರವಾಗಿದ್ದು, ಅನೇಕ ವಿದ್ಯಾರ್ಥಿಗಳು ಬರುತ್ತಿದ್ದಾರೆ. ರಾಜ್ಯದಲ್ಲಿ ಸುಮಾರು 800 ನಸಿರ್ಂಗ್ ಕಾಲೇಜುಗಳಿವೆ. ಕೆಜಿಎಫ್ ಹಾಗೂ ಹೊರಮಾವು ನರ್ಸಿಂಗ್ ಕಾಲೇಜುಗಳಲ್ಲಿ ವಿದ್ಯಾರ್ಥಿಗಳು ಕೋವಿಡ್ ಸೋಂಕಿಗೀಡಾಗಿರುವುದು ಕಂಡುಬಂದಿದೆ.

ಹೊರಮಾವು ಕಾಲೇಜಿನ ಎಲ್ಲ ವಿದ್ಯಾರ್ಥಿಗಳು ಕೇರಳ ಮತ್ತು ಪಶ್ಚಿಮ ಬಂಗಾಳದಿಂದ ಬಂದವರಾಗಿದ್ದಾರೆ. 600 ವಿದ್ಯಾರ್ಥಿಗಳ ಪೈಕಿ 34 ವಿದ್ಯಾರ್ಥಿಗಳಿಗೆ ಸೋಂಕು ದೃಢಪಟ್ಟಿದ್ದು, ಬಹುತೇಕ ಲಕ್ಷಣರಹಿತರಾಗಿದ್ದಾರೆ. ಇವರೆಲ್ಲರೂ ಕೇರಳದಿಂದ ಬಂದಿದ್ದು, ಇವರ ಮಾದರಿಯನ್ನು ಜೀನೋಮಿಕ್ ಸೀಕ್ವೆನ್ಸ್ ಗೂ ಕಳುಹಿಸಲಾಗುವುದು ಎಂದು ಅವರು ತಿಳಿಸಿದರು.

ಸೋಂಕಿತ ವಿದ್ಯಾರ್ಥಿಗಳನ್ನು ಕೋವಿಡ್ ಕೇರ್ ಸೆಂಟರ್, ಹೊಟೇಲ್ ಮೊದಲಾದ ಕಡೆ ಐಸೋಲೇಶನ್ ಮಾಡಲಾಗುವುದು. ಇನ್ನೂ ಹಲವರನ್ನು ಸಂಸ್ಥೆಯಲ್ಲೇ ಸಾಂಸ್ಥಿಕ ಕ್ವಾರಂಟೈನ್ ಮಾಡಲಾಗುವುದು. 7-8 ದಿನಗಳ ಕಾಲ ಸಂಸ್ಥೆಯನ್ನು ಮುಚ್ಚಿ, ಬಳಿಕ ಮತ್ತೆ ಪರೀಕ್ಷೆ ಮಾಡಲಾಗುವುದು. ಈ ಸಂಸ್ಥೆ ಇರುವ ಪ್ರದೇಶವನ್ನು ಸೂಕ್ಷ್ಮ ಕಂಟೇನ್ ಮೆಂಟ್ ಜೋನ್ ಎಂದು ಘೋಷಿಸಲಾಗಿದೆ. ಸುತ್ತಮುತ್ತಲಿನ 700-800 ನಿವಾಸಿಗಳಲ್ಲಿ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕ ಪತ್ತೆ ಮಾಡಿ ಪರೀಕ್ಷೆ ಮಾಡಲು ಸೂಚಿಸಲಾಗಿದೆ ಎಂದು ಸುಧಾಕರ್ ಹೇಳಿದರು.

ಕೇರಳದಲ್ಲಿ ಸೋಂಕಿತರ ಪ್ರಮಾಣ ಹೆಚ್ಚಾಗಿಯೇ ಇದೆ. ಆ ಕಾರಣದಿಂದ ಗಡಿಭಾಗದಲ್ಲಿ ಪ್ರತ್ಯೇಕ ಸೂಚನೆ, ಮಾರ್ಗಸೂಚಿ ನೀಡಲಾಗಿದೆ. ಶಿಕ್ಷಣ ಸಂಸ್ಥೆಗಳಿಗೂ ಸೂಚನೆ ನೀಡಲಾಗಿದೆ. ವಿದ್ಯಾರ್ಥಿಗಳು ಕೇರಳದಿಂದ ಬರುವಾಗಲೇ ನೆಗಟಿವ್ ವರದಿ ಹೊಂದಿರಬೇಕು, ಲಸಿಕೆ ಪಡೆದಿರಬೇಕೆಂದು ಸೂಚಿಸಲಾಗಿದೆ. ಆದರೂ ಈ ರೀತಿ ಸೋಂಕು ಕಂಡುಬಂದಿರುವುದರಿಂದ ಕ್ರಮ ವಹಿಸಲಾಗಿದೆ. ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರು ಇದನ್ನು ಗಂಭೀರವಾಗಿ ಪರಿಗಣಿಸಿ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು ಎಂದು ಅವರು ಹೇಳಿದರು.

ಗಣೇಶ ಹಬ್ಬ ಆಚರಣೆ ಭಾವನಾತ್ಮಕವಾದುದು. ಆದರೆ ನೆರೆಯ ಕೇರಳದಲ್ಲಿ ಓಣಂ, ಮೊಹರಂ ನಿಂದ ಕೋವಿಡ್ ಹತೋಟಿ ತಪ್ಪಿದೆ. ಆ ರೀತಿ ರಾಜ್ಯದಲ್ಲಿ ಹಳಿ ತಪ್ಪಬಾರದು ಎಂಬುದು ಸರಕಾರದ ಉದ್ದೇಶ. ಅಂತಿಮವಾಗಿ ಸರಕಾರ ಎಲ್ಲ ಅಂಶಗಳನ್ನು ಗಮನದಲ್ಲಿರಿಸಿ ತೀರ್ಮಾನ ಕೈಗೊಳ್ಳಲಿದೆ. ರಾಜ್ಯದಲ್ಲಿ ಸಕ್ರಿಯ ಪ್ರಕರಣ ನಿಯಂತ್ರಣದಲ್ಲೇ ಇದೆ ಎಂದು ಸುಧಾಕರ್ ತಿಳಿಸಿದರು.

ಶಾಲೆಗಳು ಆರಂಭವಾಗಿದ್ದು, ಎಲ್ಲ ಕಡೆ ಮಕ್ಕಳ ಆರೋಗ್ಯದ ಮೇಲೆ ನಿಗಾ ಇರಿಸಲಾಗಿದೆ. ಪೋಷಕರಷ್ಟೇ ಜವಾಬ್ದಾರಿಯನ್ನು ಸರಕಾರ ಹೊತ್ತಿದೆ. ಗಡಿಭಾಗ, ವಿಮಾನ ನಿಲ್ದಾಣ, ರೈಲು ನಿಲ್ದಾಣಗಳಲ್ಲಿ ಎಚ್ಚರ ವಹಿಸಲಾಗಿದೆ. ಬಸ್ ಹಾಗೂ ರೈಲು ನಿಲ್ದಾಣಗಳಲ್ಲಿ ಸಮರ್ಪಕ ಪರಿಶೀಲನೆ ಇರಬೇಕೆಂದು ಸೂಚಿಸಲಾಗಿದೆ ಎಂದು ಅವರು ತಿಳಿಸಿದರು.
 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X