Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಶೇ.40ರಷ್ಟು ಭಾರತೀಯ ಕುಟುಂಬಗಳು...

ಶೇ.40ರಷ್ಟು ಭಾರತೀಯ ಕುಟುಂಬಗಳು ಆ್ಯಂಟಿಬಾಡಿ ಪರೀಕ್ಷೆಗೊಳಗಾದ ಒಬ್ಬರು ಅಥವಾ ಹೆಚ್ಚಿನ ಸದಸ್ಯರನ್ನು ಹೊಂದಿವೆ: ಸಮೀಕ್ಷೆ

ವಾರ್ತಾಭಾರತಿವಾರ್ತಾಭಾರತಿ3 Sept 2021 8:44 PM IST
share

ಹೊಸದಿಲ್ಲಿ,ಸೆ.3: ಶೇ.40ರಷ್ಟು ಭಾರತೀಯ ಕುಟುಂಬಗಳು ಈ ವರ್ಷ ಕೋವಿಡ್-19 ಆ್ಯಂಟಿಬಾಡಿ (ಪ್ರತಿಕಾಯ) ಪರೀಕ್ಷೆಯನ್ನು ಮಾಡಿಸಿಕೊಂಡಿರುವ ಒಬ್ಬರು ಅಥವಾ ಹೆಚ್ಚಿನ ಸದಸ್ಯರನ್ನು ಹೊಂದಿವೆ ಎಂದು ಲೋಕಲ್ ಸರ್ಕಲ್ಸ್ ನಡೆಸಿರುವ ಸಮೀಕ್ಷೆಯಲ್ಲಿ ತಿಳಿದು ಬಂದಿದೆ.

ಲಸಿಕೆ ನೀಡುವ ಪ್ರಕ್ರಿಯೆ ವೇಗ ಪಡೆದುಕೊಳ್ಳುತ್ತಿರುವ ಜೊತೆಗೆ ಲಸಿಕೆಯ ಪರಿಣಾಮಕಾರಿತ್ವವನ್ನು ಅಳೆಯಲು ಅಥವಾ ತಾವು ಕೊರೋನವೈರಸ್ ಸೋಂಕಿಗೆ ಒಡ್ಡಿಕೊಂಡಿದ್ದೇವೆಯೇ ಎನ್ನುವುದನ್ನು ತಿಳಿದುಕೊಳ್ಳಲು ಆ್ಯಂಟಿಬಾಡಿ ಅಥವಾ ಸೆರಾಲಜಿ ಪರೀಕ್ಷೆಗೊಳಗಾಗುವವರ ಸಂಖ್ಯೆಯೂ ಹೆಚ್ಚುತ್ತಿದೆ ಎಂದು ಸಮೀಕ್ಷಾ ವರದಿಯು ತಿಳಿಸಿದೆ.

ದೇಶದ 318 ಜಿಲ್ಲೆಗಳ 24,000 ಜನರನ್ನು ಸಮೀಕ್ಷೆಗೊಳಪಡಿಸಲಾಗಿತ್ತು. ಈ ಪೈಕಿ ಶೇ.64ರಷ್ಟು ಪುರುಷರಾಗಿದ್ದರೆ,ಶೇ.36ರಷ್ಟು ಮಹಿಳೆಯರಾಗಿದ್ದರು. ಸಮೀಕ್ಷೆಗೊಳಗಾದವರ ಪೈಕಿ ಶೇ.42ರಷ್ಟು ಮೊದಲ ದರ್ಜೆಯ ಜಿಲ್ಲೆಗಳಿಗೆ,ಶೇ.31ರಷ್ಟು ಎರಡನೇ ದರ್ಜೆಯ ಜಿಲ್ಲೆಗಳಿಗೆ ಹಾಗೂ ಶೇ.27ರಷ್ಟು ಜನರು 3,4ನೇ ದರ್ಜೆಯ ಮತ್ತು ಗ್ರಾಮೀಣ ಜಿಲ್ಲೆಗಳಿಗೆ ಸೇರಿದವರಾಗಿದ್ದರು.

ವೈದ್ಯಕೀಯ ತಜ್ಞರ ಅಭಿಪ್ರಾಯದಂತೆ ಲಸಿಕೆ ಪಡೆದಿರುವವರಲ್ಲಿ ಆ್ಯಂಟಿಬಾಡಿಗಳು ಅಭಿವೃದ್ಧಿಗೊಳ್ಳಲು ಸುಮಾರು ಎರಡು ವಾರಗಳು ಬೇಕಾಗುತ್ತವೆ ಮತ್ತು ಲಸಿಕೆ ಪಡೆಯದಿದ್ದವರಲ್ಲಿ ಈ ಪ್ರಕ್ರಿಯೆಯು ಎರಡರಿಂದ ಮೂರು ವಾರಗಳನ್ನು ತೆಗೆದುಕೊಳ್ಳುತ್ತದೆ.

ರೋಗ ನಿರೋಧಕ ವ್ಯವಸ್ಥೆಯು ಆ್ಯಂಟಿಬಾಡಿಗಳನ್ನು ಅಭಿವೃದ್ಧಿಗೊಳಿಸುತ್ತದೆ. ಪ್ರೋಟಿನ್‌ಗಳಾಗಿರುವ ಇವು ಲಸಿಕೆ ಪಡೆದ ನಂತರವೂ ನಮ್ಮ ಶರೀರಕ್ಕೆ ವೈರಸ್‌ನಂತಹ ಯಾವುದೇ ಬೆದರಿಕೆಗಳನ್ನು ಪತ್ತೆ ಹಚ್ಚುತ್ತವೆ ಮತ್ತು ತಕ್ಷಣವೇ ವೈರಸ್ ಕಣಗಳನ್ನು ಗುರುತಿಸಿ ಅವುಗಳನ್ನು ನಿಷ್ಕ್ರಿಯಗೊಳಿಸಲು ನೆರವಾಗುತ್ತವೆ.

 ಕೋವಿಡ್-19 ಆ್ಯಂಟಿಬಾಡಿ ಪರೀಕ್ಷೆಯು ತಮ್ಮ ರಕ್ತದಲ್ಲಿ ಪ್ರತಿಕಾಯಗಳ ಸಾಂದ್ರತೆಯಿದೆಯೇ ಎನ್ನುವುದನ್ನು ತಿಳಿದುಕೊಳ್ಳಲು ಜನರಿಗೆ ಅವಕಾಶವನ್ನು ಒದಗಿಸುತ್ತದೆ,ಆದರೆ ಶರೀರದಲ್ಲಿ ಆ್ಯಂಟಬಾಡಿಗಳಿವೆ ಎಂದ ಮಾತ್ರಕ್ಕೆ ವ್ಯಕ್ತಿಯು ಕೋವಿಡ್‌ನಿಂದ ಪ್ರತಿರಕ್ಷಿತನಾಗಿದ್ದಾನೆ ಎಂದು ಅರ್ಥವಲ್ಲ ಎಂದು ಹಲವಾರು ವಿಜ್ಞಾನಿಗಳು ಎಚ್ಚರಿಕೆ ನೀಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X