Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕರ್ನಾಟಕದಲ್ಲಿ ಏರೋಸ್ಪೇಸ್...

ಕರ್ನಾಟಕದಲ್ಲಿ ಏರೋಸ್ಪೇಸ್ ಉತ್ಪಾದನೆಯನ್ನು ಶೇ.60ಕ್ಕೆ ಏರಿಸುವ ಗುರಿ: ಮುಖ್ಯಮಂತ್ರಿ ಬೊಮ್ಮಾಯಿ

ವಾರ್ತಾಭಾರತಿವಾರ್ತಾಭಾರತಿ3 Sept 2021 8:54 PM IST
share
ಕರ್ನಾಟಕದಲ್ಲಿ ಏರೋಸ್ಪೇಸ್ ಉತ್ಪಾದನೆಯನ್ನು ಶೇ.60ಕ್ಕೆ ಏರಿಸುವ ಗುರಿ: ಮುಖ್ಯಮಂತ್ರಿ ಬೊಮ್ಮಾಯಿ

ಬೆಂಗಳೂರು, ಸೆ.3: ಕರ್ನಾಟಕ, ದೇಶದ ಶೇ.40ರಷ್ಟು ಏರೋಸ್ಪೇಸ್ ಉತ್ಪನ್ನಗಳನ್ನು ಉತ್ಪಾದಿಸುತ್ತಿದ್ದು, ಇದನ್ನು ಶೇ.60ಕ್ಕೆ ಏರಿಸುವುದು ನಮ್ಮ ಗುರಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಶುಕ್ರವಾರ ನಡೆದ ಅಮೇರಿಕನ್ ಛೇಂಬರ್ ಆಫ್ ಕಾಮರ್ಸ್‍ನ ಇನ್ ಇಂಡಿಯಾ (ಆಮ್‍ಚಾಮ್) ಸಂಸ್ಥೆಯ 29ನೇ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಆಮ್‍ಚಾಮ್ ಸಂಸ್ಥೆಯೊಂದಿಗೆ ಗುರುತಿಸಿಕೊಳ್ಳುವುದು ಕರ್ನಾಟಕಕ್ಕೆ ಹೆಮ್ಮೆಯ ಸಂಗತಿ ಎಂದರು.

ಕರ್ನಾಟಕವು ಅಮೆರಿಕಾನಂತೆಯೇ ಆಧುನಿಕ ತಂತ್ರಜ್ಞಾನದಿಂದ ಹಿಡಿದು ಎಲ್ಲ ಕ್ಷೇತ್ರಗಳಲ್ಲಿಯೂ ಸಮಾನ ಸ್ಥಾನಮಾನವನ್ನು ಹೊಂದಿದೆ. ರಾಜ್ಯ ಕೈಗಾರಿಕೋದ್ಯಮದಲ್ಲಿ ಸುದೀರ್ಘ ಇತಿಹಾಸವನ್ನು ಹೊಂದಿದೆ. ಸ್ವಾತಂತ್ರ್ಯಪೂರ್ವದಿಂದಲೂ, ಖಾಸಗಿ ವಲಯದವರು ಇಲ್ಲದ ಸಂದರ್ಭದಲ್ಲಿ ಬಿ.ಎಚ್.ಇ.ಎಲ್, ಎಚ್.ಎಂ.ಟಿ ಮುಂತಾದ ಪ್ರಮುಖ ಸಂಸ್ಥೆಗಳು ಇಲ್ಲಿದ್ದವು ಎಂದು ಅವರು ಹೇಳಿದರು.

ಭಾರತ ನಿರ್ಮಾಣದಲ್ಲಿ ಕರ್ನಾಟಕ ರಾಜ್ಯ ತನ್ನದೇ ಕೊಡುಗೆ ನೀಡಿದೆ. ಸಂಶೋಧನೆ ಮತ್ತು ಅಭಿವೃದ್ಧಿಯಲ್ಲಿಯೂ ಕರ್ನಾಟಕ ಪ್ರಮುಖ ಪಾತ್ರವನ್ನು ವಹಿಸಿದೆ. ಅತಿ ಹೆಚ್ಚು ಉಪಗ್ರಹಗಳನ್ನು ಉಡಾಯಿಸುವ ಇಸ್ರೋ ತನ್ನ ಕೇಂದ್ರ ಕಚೇರಿಯನ್ನು ಬೆಂಗಳೂರಿನಲ್ಲಿ ಹೊಂದಿದೆ. ರಾಜ್ಯದಲ್ಲಿ ಅತಿ ಹೆಚ್ಚಿನ ಇಂಜಿನಿಯರಿಂಗ್ ಕಾಲೇಜುಗಳಿದ್ದು, ಐಐಟಿ, ಐಐಎಂ ಹಾಗೂ ಐಐಎಸ್ಸಿ ಮುಂತಾದ ಶ್ರೇಷ್ಠ ಕಾಲೇಜುಗಳನ್ನು ಬೆಂಗಳೂರು ಹೊಂದಿದೆ. ಇವುಗಳು ರಾಜ್ಯದ ಜನರಲ್ಲಿ ವೈಜ್ಞಾನಿಕ ಮನೋಭಾವವನ್ನು ಹೆಚ್ಚಿಸಿದೆ ಎಂದು ಅವರು ಅಭಿಪ್ರಾಯ ಪಟ್ಟರು.

ಕರ್ನಾಟಕ ನಾವೀನ್ಯತೆ ಮತ್ತು ತಂತ್ರಜ್ಞಾನದಲ್ಲಿ ಮುಂಚೂಣಿಯಲ್ಲಿರುವ ರಾಜ್ಯ. ನೀತಿ ಆಯೋಗದ ಸೂಚ್ಯಂಕದಲ್ಲಿ ಕರ್ನಾಟಕ 2019 ಹಾಗೂ 2020ರಲ್ಲಿ ಪ್ರಥಮ ಸ್ಥಾನವನ್ನು ಕಾಯ್ದುಕೊಂಡಿದೆ. ಅಮೆರಿಕ ಮತ್ತು ಕರ್ನಾಟಕದ ಮಧ್ಯೆ ಉತ್ತಮ ಸಂಬಂಧವಿದ್ದು, ಈ ಸಂಬಂಧವು ಸಂಸ್ಕೃತಿ ಹಾಗೂ ಚಿಂತನೆಗಳಲ್ಲಿ ನಾವೀನ್ಯತೆಯನ್ನು ತರುವಲ್ಲಿ ಸಹಕಾರಿಯಾಗಲಿದೆ. ಕರ್ನಾಟಕದೊಂದಿಗಿನ ಸಹಭಾಗಿತ್ವವು ಅಮೆರಿಕಾ ಹಾಗೂ ಕರ್ನಾಟಕಕ್ಕೆ ಲಾಭದಾಯಕವಾಗಲಿದೆ ಎಂದು ಮುಖ್ಯಮಂತ್ರಿ ತಿಳಿಸಿದರು. 

ಕೋವಿಡ್ 19 ಸಾಂಕ್ರಾಮಿಕವು ಸವಾಲುಗಳ ಜೊತೆ ಅವಕಾಶಗಳನ್ನೂ ಒದಗಿಸಿದೆ ಎಂದ ಅವರು, ಕೋವಿಡ್ ಸಂದರ್ಭದಲ್ಲಿ ನೆರವಿಗೆ ನಿಂತ ಅಮೆರಿಕ ಹಾಗೂ ಉಳಿದ ಎಲ್ಲ ಖಾಸಗಿ ವಲಯದ ಸಂಸ್ಥೆಗಳಿಗೆ ಧನ್ಯವಾದಗಳನ್ನು ಅರ್ಪಿಸಿದರು. ಅಮೆರಿಕಾ ಹೊಸ ತಂತ್ರಜ್ಞಾನ ಮತ್ತು ನಾವೀನ್ಯತೆಯ ಮೂಲಕ ಮನುಕುಲದ ಏಳಿಗೆಗೆ ಬದ್ಧವಾಗಿರುವುದನ್ನು ಶ್ಲಾಘಿಸಿದರು.

ಕರ್ನಾಟಕದಲ್ಲಿ ಹೂಡಿಕೆಗೆ ಅಗತ್ಯವಿರುವ ಎಲ್ಲ ಸಹಕಾರವನ್ನು ನೀಡುವುದಾಗಿ ಭರವಸೆಯಿತ್ತ ಮುಖ್ಯಮಂತ್ರಿ, ಆರ್ಥಿಕತೆಯಲ್ಲಿ ಯಾವುದೇ ಚಮತ್ಕಾರ ಸಾಧ್ಯವಿಲ್ಲ, ಕೇವಲ ಫಲಿತಾಂಶ ಮಾತ್ರ ಎಂದು ಅರಿತಿದ್ದು, ಜಾಗತಿಕ ಆರ್ಥಿಕತೆಯಲ್ಲಿ ತನ್ನ ಸ್ಥಾನವನ್ನು ಹೆಚ್ಚಿಸಿಕೊಳ್ಳಲು ಕರ್ನಾಟಕ ಶ್ರಮಿಸುತ್ತಿದೆ. ಮುಂಬರುವ ದಿನಗಳಲ್ಲಿ ಆಮ್‍ಚಾಮ್‍ನ ಸಹಕಾರದಿಂದ ನಾವೀನ್ಯತೆಯಲ್ಲಿ ಕರ್ನಾಟಕ ಹೆಚ್ಚಿನ ಸಾಧನೆ ಮಾಡುವ ಇಂಗಿತವನ್ನು ಮುಖ್ಯಮಂತ್ರಿ ವ್ಯಕ್ತಪಡಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X