Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಭಾರತ ಅಭಿವೃದ್ಧಿ ಹೊಂದಿದ ದೇಶವಾಗಲು...

ಭಾರತ ಅಭಿವೃದ್ಧಿ ಹೊಂದಿದ ದೇಶವಾಗಲು ಶಿಕ್ಷಣ ನೀತಿ ಪೂರಕ: ಡಾ.ಸಿ.ಎನ್.ಅಶ್ವತ್ಥನಾರಾಯಣ

ವಾರ್ತಾಭಾರತಿವಾರ್ತಾಭಾರತಿ3 Sept 2021 9:16 PM IST
share
ಭಾರತ ಅಭಿವೃದ್ಧಿ ಹೊಂದಿದ ದೇಶವಾಗಲು ಶಿಕ್ಷಣ ನೀತಿ ಪೂರಕ: ಡಾ.ಸಿ.ಎನ್.ಅಶ್ವತ್ಥನಾರಾಯಣ

ಬೆಂಗಳೂರು, ಸೆ.3: ಭಾರತ ಈಗ ಅಭಿವೃದ್ಧಿಶೀಲ ರಾಷ್ಟ್ರ. ಇದು ಅಭಿವೃದ್ಧಿ ಹೊಂದಿದ ದೇಶವಾಗಿ ಹೊರಹೊಮ್ಮಬೇಕಾದರೆ ಶೈಕ್ಷಣಿಕ ವ್ಯವಸ್ಥೆಯಲ್ಲಿ ಆಮೂಲಾಗ್ರ ಸುಧಾರಣೆಗಳನ್ನು ಜಾರಿಗೆ ತರಬೇಕಾಗುತ್ತದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದರು.

ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಯ ಸಂಬಂಧ ಬೆಂಗಳೂರು ನಗರ ವಿಶ್ವವಿದ್ಯಾಲಯ, ಮೌಂಟ್ ಕಾರ್ಮೆಲ್ ಕಾಲೇಜು ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ರಾಷ್ಟ್ರೀಯ ವಿಚಾರ ಸಂಕಿರಣವನ್ನು ಉದ್ಘಾಟನೆ ಮಾಡಿ ಅವರು ಮಾತನಾಡಿದರು.

ಭಾರತ ಅಭಿವೃದ್ಧಿ ಹೊಂದುತ್ತಿರುವ ದೇಶ ಎಂದು ಅನೇಕರು ಹೇಳುವುದನ್ನು ಕೇಳುತ್ತಿದ್ದೇವೆ, ಇನ್ನೂ ಕೇಳುತ್ತಲೇ ಇದ್ದೇವೆ. ಹಾಗಾದರೆ, ಭಾರತ ಅಭಿವೃದ್ಧಿ ಹೊಂದಿದ ದೇಶ ಆಗುವುದು ಯಾವಾಗ? ಇದಕ್ಕೆ ಉತ್ತರ ಕಂಡುಕೊಳ್ಳುವುದು ಹೇಗೆ? ಅಂತ ನೋಡಿದಾಗ ಅದಕ್ಕೆ ಸ್ಪಷ್ಟ ಉತ್ತರ ಹೊಸ ರಾಷ್ಟ್ರೀಯ ಶಿಕ್ಷಣ ನೀತಿ ಎಂದು ನಾನು ನಿರ್ವಿವಾದವಾಗಿ ಹೇಳಬಲ್ಲೆ ಎಂದು ಅಶ್ವತ್ಥನಾರಾಯಣ ಹೇಳಿದರು.

ವಿದ್ಯಾರ್ಥಿ ಕೇಂದ್ರಿತ ಶಿಕ್ಷಣ ನೀತಿ: ದೇಶವನ್ನು ಸಮರ್ಥವಾಗಿ ಕಟ್ಟಿ ಬಲಿಷ್ಠವಾಗಿ ಮರು ರೂಪಿಸುವ ಶಕ್ತಿ ಇರುವ ರಾಷ್ಟ್ರೀಯ ಶಿಕ್ಷಣ ನೀತಿಯ ಬಗ್ಗೆ ಕೆಲವರು ರಾಜಕೀಯ ಮಾಡುತ್ತಿರುವ ಬಗ್ಗೆ ನನಗೆ ಬೇಸರವಿದೆ. ಇದು ಕೇವಲ ವಿದ್ಯಾರ್ಥಿ ಕೇಂದ್ರಿತ ಶಿಕ್ಷಣ ನೀತಿ ಎಂದು ನಾನು ಮತ್ತೆ ಮತ್ತೆ ಹೇಳಬಯಸುತ್ತೇನೆ ಎಂದು ಅವರು ಹೇಳಿದರು.

ಜ್ಞಾನ ಮತ್ತು ಕುಶಲತೆ ಎನ್ನುವುದು ಈಗ ಬಹಳ ಅಗತ್ಯ ಅಂಶಗಳು. ಜ್ಞಾನಕ್ಕೆ ಪೂರಕವಾಗಿ ಕುಶಲತೆಯೂ ಸೇರಿದರೆ ಅದ್ಭುತಗಳನ್ನೇ ಸೃಷ್ಟಿ ಮಾಡಬಹುದು. ಸರಕಾರ ಈ ದಿಕ್ಕಿನಲ್ಲಿಯೇ ಆಲೋಚನೆ ಮಾಡುತ್ತಿದೆ. ಕುಶಲತೆಯ ಕಲಿಕೆಗೆ ಹೆಚ್ಚು ಪೆÇ್ರೀತ್ಸಾಹ ಕೊಡಲಾಗುತ್ತಿದೆ ಎಂದು ಅವರು ನುಡಿದರು.

ಪ್ರತಿ ವಿದ್ಯಾರ್ಥಿ ಯಾವುದೇ ವಿಷಯ ಅಧ್ಯಯನ ಮಾಡಬೇಕಾದರೆ ಏತಕ್ಕಾಗಿ ಇದನ್ನು ಓದಬೇಕು? ಅದರಿಂದ ನನಗೇನು ಪ್ರಯೋಜನ ಎಂದು ಆಲೋಚನೆ ಮಾಡುತ್ತಾನೆ. ಹೀಗೆ ಚಿಂತಿಸುವ ಪ್ರತಿ ವಿದ್ಯಾರ್ಥಿಗೂ ತನ್ನ ನಿರ್ದಿಷ್ಟ ಗುರಿ ತಲುಪಲು, ತನ್ನದೇ ಶಕ್ತಿಯಿಂದ ಬದುಕು ರೂಪಿಸಿಕೊಳ್ಳಲು ಶಿಕ್ಷಣ ನೀತಿ ಮಹತ್ವದ ಪಾತ್ರ ವಹಿಸುತ್ತದೆ. ಹಾಗೆ, ವೈಯಕ್ತಿಕ ನೆಲೆಗಟ್ಟಿನಲ್ಲಿ ಶುರುವಾಗುವ ಬದಲಾವಣೆ ಕ್ರಮೇಣ ದೇಶದ ಸಮಗ್ರ ಬದಲಾವಣೆಗೆ ಕಾಣಿಕೆ ನೀಡುತ್ತದೆ ಎಂದು ಅವರು ಪ್ರತಿಪಾದಿಸಿದರು.

ದಯಾನಂದ ಪೈ ಬೆಂಬಲ: ಹೊಸ ರಾಷ್ಟ್ರೀಯ ಶಿಕ್ಷಣ ನೀತಿಗೆ ಉದ್ಯಮಿ ಮತ್ತು ಶಿಕ್ಷಣ ತಜ್ಞ ಡಾ.ದಯಾನಂದ ಪೈ ಬೆಂಬಲ ವ್ಯಕ್ತಪಡಿಸಿದರು. ವಿಚಾರ ಸಂಕಿರಣದ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಶಿಕ್ಷಣ ನೀತಿಯ ಬಗ್ಗೆ ಬಹಳ ಜನ ಮೆಚ್ಚುಗೆ ಮಾತುಗಳನ್ನಾಡಿದ್ದಾರೆ. ಕಾಲ ಕಾಲಕ್ಕೆ ಶಿಕ್ಷಣದಲ್ಲಿ ಸುಧಾರಣೆಗಳನ್ನು ಜಾರಿ ತರುತ್ತಲೇ ಇರಬೇಕು ಎಂದರು.

ತಮ್ಮ ಶೈಕ್ಷಣಿಕ ಸಂಸ್ಥೆಗಳಲ್ಲಿ ಈ ವರ್ಷದಿಂದಲೇ ಹೊಸ ಶಿಕ್ಷಣ ನೀತಿಯನ್ನು ಜಾರಿಗೆ ತರುವುದಾಗಿ ಇದೇ ಸಂದರ್ಭದಲ್ಲಿ ದಯಾನಂದ ಪೈ, ಉನ್ನತ ಶಿಕ್ಷಣ ಸಚಿವರಿಗೆ ಭರವಸೆ ನೀಡಿದರು. ಕಾರ್ಯಕ್ರಮದಲ್ಲಿ ಬೆಂಗಳೂರು ನಗರ ವಿವಿ ಕುಲಪತಿ ಪ್ರೊ.ಲಿಂಗರಾಜ ಗಾಂಧಿ, ರಾಜ್ಯ ಉನ್ನತ ಶಿಕ್ಷಣ ಪರಿಷತ್ ಉಪಾಧ್ಯಕ್ಷ ಪ್ರೊ.ತಿಮ್ಮೇಗೌಡ ಶಿಕ್ಷಣ ನೀತಿಯ ಜಾರಿ ಬಗ್ಗೆ ಮಾತನಾಡಿದರು. ಮೌಂಟ್ ಕಾರ್ಮೆಲ್ ಕಾಲೇಜು ಪ್ರಾಂಶುಪಾಲೆ ಡಾ.ಸಿಸ್ಟರ್ ಅರ್ಪಣಾ, ಕುಲಸಚಿವರಾದ ಕೆ.ಎನ್.ಶ್ರೀಧರ್, ಡಾ.ಬಿ.ರಮೇಶ್ ಮುಂತಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X